Engineer Rashid: ಸಂಸತ್ ಅಧಿವೇಶನಕ್ಕೆ ಹಾಜರಾಗಲು ಎಂಜಿನಿಯರ್ ರಶೀದ್ ಸಲ್ಲಿಸಿದ್ದ ಕಸ್ಟಡಿ ಪೆರೋಲ್ ಅರ್ಜಿ ವಜಾ ಮಾಡಿದ ದೆಹಲಿ ಕೋರ್ಟ್
ಸಂಸತ್ ಅಧಿವೇಶನಕ್ಕೆ ಹಾಜರಾಗಲು ಕಸ್ಟಡಿ ಪೆರೋಲ್ ಕೋರಿ ಜೈಲಿನಲ್ಲಿರುವ ಜಮ್ಮು ಮತ್ತು ಕಾಶ್ಮೀರ ಸಂಸದ ಎಂಜಿನಿಯರ್ ರಶೀದ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಅವರು ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಎಂಜಿನಿಯರ್ ರಶೀದ್

ನವದೆಹಲಿ: ಸಂಸತ್ ಅಧಿವೇಶನಕ್ಕೆ ಹಾಜರಾಗಲು ಕಸ್ಟಡಿ ಪೆರೋಲ್ ಕೋರಿ ಜೈಲಿನಲ್ಲಿರುವ ಜಮ್ಮು ಮತ್ತು ಕಾಶ್ಮೀರ ಸಂಸದ ಎಂಜಿನಿಯರ್ ರಶೀದ್ (Engineer Rashid) ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಅವರು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಮಾರ್ಚ್ 3 ರಂದು, ನ್ಯಾಯಾಲಯವು ಅರ್ಜಿಗೆ ಪ್ರತಿಕ್ರಿಯಿಸಲು NIA ಗೆ ಕೇಳಿತು, ನಂತರ ವಾದಗಳನ್ನು ಆಲಿಸಿದ ನಂತರ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಅರ್ಜಿ ವಜಾಗೊಂಡಿದೆ.
ಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗವು ಮಾರ್ಚ್ 10 ರಂದು ಪ್ರಾರಂಭವಾಗಿ ಏಪ್ರಿಲ್ 4 ರಂದು ಕೊನೆಗೊಳ್ಳಲಿದೆ. ಈ ಸಂಬಂಧ ರಶೀದ್ ನ್ಯಾಯಾಲಯದ ಮೊರೆ ಹೋಗಿದ್ದ. ಇಂಜಿನಿಯರ್ ರಶೀದ್ ಎಂದೇ ಜನಪ್ರಿಯನಾಗಿ ಕರೆಯಲ್ಪಡುವ ರಶೀದ್, 2017ರ ಭಯೋತ್ಪಾದನೆಗೆ ಹಣಕಾಸು ನೆರವು ಪ್ರಕರಣದಲ್ಲಿ 2019 ರಿಂದ ತಿಹಾರ್ ಜೈಲಿನಲ್ಲಿದ್ದಾನೆ. 2017ರಲ್ಲಿ ಭಯೋತ್ಪಾದಕ ಸಂಘಟನೆಗಳಿಗೆ ಹಣಕಾಸಿನ ನೆರವು ನೀಡಿದ ಆರೋಪದ ಮೇಲೆ ಎನ್‌ಐಎ ಶೇಖ್ ಅಬ್ದುಲ್ ರಶೀದ್ ವಿರುದ್ಧ ಯುಎಪಿಎ ಕಾಯಿದೆ ಅಡಿ ಪ್ರಕರಣ ದಾಖಲಿಸಿತ್ತು. 2019ರಲ್ಲಿ ಎನ್‌ಐಎ ಆತನನ್ನು ಬಂಧಿಸಿತ್ತು. ಜನವರಿ 22 ರಂದು, ರಶೀದ್ ತನ್ನ ಜಾಮೀನು ಅರ್ಜಿಯ ತೀರ್ಪು ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ. ಅದು ವಿಚಾರಣಾ ನ್ಯಾಯಾಲಯದಲ್ಲಿ ಬಾಕಿ ಇದೆ. ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕ ಗುಂಪುಗಳು ಮತ್ತು ಪ್ರತ್ಯೇಕತಾವಾದಿಗಳಿಗೆ ಹಣಕಾಸು ಒದಗಿಸಿದ ಆರೋಪದ ಮೇಲೆ ಎನ್‌ಐಎ ಬಂಧಿಸಿದ ಕಾಶ್ಮೀರಿ ಉದ್ಯಮಿ ಜಹೂರ್ ವಟಾಲಿ ವಿಚಾರಣೆ ಸಂದರ್ಭದಲ್ಲಿ ಈತನ ಹೆಸರು ಹೆಸರು ಕೇಳಿ ಬಂದಿತ್ತು.
ಈ ಸುದ್ದಿಯನ್ನೂ ಓದಿ: Tahir Hussain: ಡೆಲ್ಲಿ ಗಲಭೆ ಕೇಸ್- ಆಪ್‌ನ ತಾಹಿರ್ ಹುಸೇನ್‌ಗೆ ಕಸ್ಟಡಿ ಪೆರೋಲ್ ನೀಡಿದ ಸುಪ್ರೀಂ ಕೋರ್ಟ್
2024 ರ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಶೀದ್ ಪ್ರಮುಖ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಬಾರಾಮುಲ್ಲಾ ಕ್ಷೇತ್ರದಿಂದ ಸೋಲಿಸುವ ಮೂಲಕ ಸುದ್ದಿಯಾಗಿದ್ದ. ನಂತರ ಪ್ರಮಾಣ ವಚನ ಸ್ವೀಕರಿಸಲು ಎನ್‌ಐಎ ಅನುಮತಿ ನೀಡಿತ್ತು. ಜುಲೈ 5 ರಂದು, ಲೋಕಸಭೆಯ ಸದಸ್ಯನಾಗಿ ಪ್ರಮಾಣ ವಚನ ಸ್ವೀಕರಿಸಲು ನ್ಯಾಯಾಲಯ ರಶೀದ್‌ಗೆ ಕಸ್ಟಡಿ ಪೆರೋಲ್ ನೀಡಿತ್ತು.