ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮೋದಿ- ಟ್ರಂಪ್‌ ದೂರವಾಣಿ ಮಾತುಕತೆ; ಹಾರ್ಮೊಜ್‌ ಸೇರಿದಂತೆ ಮಧ್ಯ ಪ್ರಾಚ್ಯ ಬಿಕ್ಕಟ್ಟಿನ ಕುರಿತು ಚರ್ಚೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು. ಈ ವೇಳೆ ಉಭಯ ನಾಯಕರು ಪಶ್ಚಿಮ ಏಷ್ಯಾದಲ್ಲಿ ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಕುರಿತು ಚರ್ಚೆ ನಡೆಸಿದ್ದಾರೆ.

ಮೋದಿ- ಟ್ರಂಪ್‌ ದೂರವಾಣಿ ಮಾತುಕತೆ;  ಹಾರ್ಮೊಜ್‌ ಕುರಿತು ಚರ್ಚೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Mar 24, 2026 8:03 PM

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮಂಗಳವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು. ಈ ವೇಳೆ ಉಭಯ ನಾಯಕರು ಪಶ್ಚಿಮ ಏಷ್ಯಾದಲ್ಲಿ ಅಮೆರಿಕ-ಇಸ್ರೇಲ್ ಮತ್ತು ಇರಾನ್ (Iran Israel- America War) ನಡುವಿನ ಯುದ್ಧದ ಕುರಿತು ಚರ್ಚೆ ನಡೆಸಿದ್ದಾರೆ. ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧ ಪ್ರಾರಂಭವಾದ ನಂತರ ಇದು ಇಬ್ಬರ ನಡುವಿನ ಮೊದಲ ಫೋನ್ ಕರೆಯಾಗಿದೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಭಾರತದಲ್ಲಿನ ಅಮೆರಿಕ ರಾಯಭಾರಿ ಸೆರ್ಗಿಯೋ ಗೋರ್, ಜಾಗತಿಕ ಇಂಧನ ಭದ್ರತೆಯ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿರುವ ಹಾರ್ಮೊಜ್‌ ಜಲಸಂಧಿಯನ್ನು ಮುಕ್ತವಾಗಿಡುವ ಕುರಿತು ಉಭಯ ನಾಯಕರು ಸುದೀರ್ಘ ಚರ್ಚೆ ನಡೆಸಿದ್ದಾರೆ ಎಂದು ಅಧಿಕೃತವಾಗಿ ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಮೋದಿ, ಅಧ್ಯಕ್ಷ ಟ್ರಂಪ್ ಅವರಿಂದ ಕರೆ ಸ್ವೀಕರಿಸಿದೆ ಮತ್ತು ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಉಪಯುಕ್ತ ಅಭಿಪ್ರಾಯ ವಿನಿಮಯ ಮಾಡಿಕೊಂಡೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಭಾರತವು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ಶಾಂತಿಯನ್ನು ಪುನಃಸ್ಥಾಪಿಸಲು ಸಾಧ್ಯವಾದಷ್ಟು ಬೇಗ ಬೆಂಬಲಿಸುತ್ತದೆ. ಹಾರ್ಮೊಜ್‌ ಜಲಸಂಧಿ ಮುಕ್ತ, ಸುರಕ್ಷಿತ ಮತ್ತು ಪ್ರವೇಶಿಸಬಹುದಾದ ಸ್ಥಳವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು ಜಗತ್ತಿಗೆ ಅತ್ಯಗತ್ಯ. ಶಾಂತಿ ಮತ್ತು ಸ್ಥಿರತೆಯತ್ತ ಪ್ರಯತ್ನಗಳಿಗಾಗಿ ನಾವು ಸಂಪರ್ಕದಲ್ಲಿರಲು ಒಪ್ಪಿಕೊಂಡಿದ್ದೇವೆ ಎಂದು ತಿಳಿಸಿದರು.

ಮಾತುಕತೆಯ ವೇಳೆ ಪ್ರಧಾನಿ ಮೋದಿ ಅವರು ಈ ಯುದ್ಧವನ್ನು ಶೀಘ್ರವೇ ಕೊನೆಗಾಣಿಸಿ ರಾಜತಾಂತ್ರಿಕ ಮಾತುಕತೆಗಳ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಏಪ್ರಿಲ್ 9 ರಂದು ಯುದ್ಧವನ್ನು ಅಂತ್ಯಗೊಳಿಸುವ ಅಮೆರಿಕದ ಉದ್ದೇಶಕ್ಕೆ ಭಾರತವು ತನ್ನ ಬೆಂಬಲ ಸೂಚಿಸಿದೆ ಎನ್ನಲಾಗಿದೆ.

ನಷ್ಟ ಪರಿಹಾರ ಸಿಗುವ ತನಕ ಯುದ್ಧ ಮುಂದುವರಿಯಲಿದೆ; ಅಮೆರಿಕದ ಕದನ ವಿರಾಮಕ್ಕೆ ಷರತ್ತು ವಿಧಿಸಿದ ಇರಾನ್‌

ಹಾರ್ಮೊಜ್‌ ಜಲಸಂಧಿಯನ್ನು ಶೀಘ್ರದಲ್ಲೇ ಮುಕ್ತಗೊಳಿಸಲಾಗುವುದು ಮತ್ತು ಇದನ್ನು ಇರಾನ್‌ನೊಂದಿಗೆ ಜಂಟಿಯಾಗಿ ನಿರ್ವಹಿಸುವ ಸಾಧ್ಯತೆಯಿದೆ ಎಂದು ಟ್ರಂಪ್ ಮೋದಿಯವರಿಗೆ ವಿವರಿಸಿದ್ದಾರೆ ಎನ್ನಲಾಗಿದೆ. ದಕ್ಷಿಣ ಏಷ್ಯಾ ಸೇರಿದಂತೆ ಹಲವಾರು ರಾಷ್ಟ್ರಗಳಿಗೆ ತೈಲ ಸರಬರಾಜು ಆಗುವ ಹೊರ್ಮುಜ್‌ ಜಲಸಂಧಿ 33 ಕಿಮೀ ಅಗಲವಿದೆ. ಎರಡು ದೊಡ್ಡ ಭೂಖಂಡಗಳನ್ನು ಪ್ರತ್ಯೇಕಿಸುವ ಕಿರಿದಾದ ಜಲಮಾರ್ಗವನ್ನು ಜಲಸಂಧಿ ಎಂದು ಕರೆಯಲಾಗುತ್ತದೆ. ಇರಾನ್ ಈ ಜಲಸಂಧಿಯ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಿದೆ. ಪ್ರತಿದಿನ ಸುಮಾರು 2 ಕೋಟಿ ಬ್ಯಾರೆಲ್ ತೈಲ ಈ ಮಾರ್ಗದ ಮೂಲಕ ಸಾಗುತ್ತದೆ. ವಿಶ್ವದ ಒಟ್ಟು ಎಲ್‌ಎನ್‌ಜಿ ಪೂರೈಕೆಯ ಶೇ. 20ರಷ್ಟು ಭಾಗ ಇಲ್ಲಿಂದಲೇ ಸಾಗುತ್ತದೆ. ಇಲ್ಲಿಂದ ರಫ್ತಾಗುವ ಶೇ. 84ರಷ್ಟು ತೈಲ ಏಷ್ಯಾದ ಮಾರುಕಟ್ಟೆಗಳಿಗೆ ಹೋಗುತ್ತದೆ.