ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

“ನೀವು ಎಲ್ಲವನ್ನೂ ತ್ಯಾಗ ಮಾಡಿದರೂ ನಾನು ವಿಫಲಳಾದೆ”: ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ನೀಟ್ ಅಭ್ಯರ್ಥಿ

NEET aspirant dies by self-harming: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಬೇಸತ್ತ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯಲ್ಲಿ ನಡೆದಿದೆ. ಮರಾಠಿ ಭಾಷೆಯಲ್ಲಿ ಆತ್ಮಹತ್ಯೆ ಪತ್ರ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾಳೆ.

ಸಾಂದರ್ಭಿಕ ಚಿತ್ರ

ಮುಂಬೈ, ಜು.27: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಬೇಸತ್ತ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ (Maharashtra) ಅಹಲ್ಯಾನಗರ ಜಿಲ್ಲೆಯಲ್ಲಿ ನಡೆದಿದೆ. ಜಲಾಲ್ಪುರ ಗ್ರಾಮದ ನಿವಾಸಿ ಅಂಕಿತಾ ಸಾಂಗ್ಲೆ ತನ್ನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕೇವಲ 166 ಅಂಕಗಳನ್ನು ಗಳಿಸಿದ್ದರಿಂದ ಆಕೆ ತೀವ್ರ ಬೇಸರ ಹಾಗೂ ಒತ್ತಡಕ್ಕೊಳಗಾಗಿದ್ದಳು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಶನಿವಾರ (ಜುಲೈ 25) ಸಂಜೆ 4.30 ರ ಸುಮಾರಿಗೆ ಆಕೆ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮರಾಠಿ ಭಾಷೆಯಲ್ಲಿ ಆತ್ಮಹತ್ಯೆ ಪತ್ರ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾಳೆ. ಪೊಲೀಸರಿಗೆ ಡೆತ್‍ನೋಟ್ ಸಿಕ್ಕಿದ್ದು, ಆಕಸ್ಮಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

“ನೀವು ನನಗೆ ತುಂಬಾ ಪ್ರೀತಿ ಕೊಟ್ಟಿದ್ದೀರಿ, ಆದರೆ ನಿಮ್ಮ ಒಂದೇ ಒಂದು ಆಸೆಯನ್ನು ನಾನು ಪೂರೈಸಲು ಸಾಧ್ಯವಾಗಲಿಲ್ಲ. ಅಮ್ಮ, ನೀವು ಪ್ರತಿಯೊಂದು ಕಷ್ಟದಲ್ಲೂ ನನ್ನನ್ನು ಸ್ನೇಹಿತಳಂತೆ ಬೆಂಬಲಿಸಿದ್ದೀರಿ. ಸಹೋದರ, ನೀವು ಕೂಡ ನನಗೆ ತುಂಬಾ ಬೆಂಬಲ ನೀಡಿದ್ದೀರಿ. ನೀವು ನನ್ನನ್ನು ಅಮ್ಮ ಮತ್ತು ಅಪ್ಪನಿಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದೀರಿ. ನನ್ನ ಆತ್ಮಹತ್ಯೆಗೆ ನೀವು ಕಾರಣರಲ್ಲ” ಎಂದು ಪತ್ರದಲ್ಲಿ ವಿವರಿಸಲಾಗಿದೆ.

"ಅಮ್ಮ ಪ್ಲೀಸ್‌ ನನ್ನನ್ನು ಕ್ಷಮಿಸಿ" ;ವಿಡಿಯೊ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡ ನೀಟ್ ಮರುಪರೀಕ್ಷೆ ಬರೆದಿದ್ದ ವಿದ್ಯಾರ್ಥಿ

“ನಾನು ನೀಟ್ ಓದುತ್ತಿದ್ದಾಗಲೂ, ನೀವು ನನಗಾಗಿ ಎಲ್ಲವನ್ನೂ ತ್ಯಾಗ ಮಾಡಿದ್ದೀರಿ. ಆದರೆ ನಾನು ವಿಫಲಳಾದೆ. ನಿಮ್ಮ ಆಸೆಗಳನ್ನು ಈಡೇರಿಸಲು ಸಾಧ್ಯವಾಗಲಿಲ್ಲ” ಎಂದು ಪತ್ರದಲ್ಲಿ ಮತ್ತಷ್ಟು ವಿವರಿಸಿದ್ದಾಳೆ. ಜೊತೆಗೆ ತಮ್ಮ ಹೆತ್ತವರನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಆಕೆ ತನ್ನ ಸಹೋದರನಿಗೆ ಒತ್ತಾಯಿಸಿದ್ದಾಳೆ. “ಅಣ್ಣ, ದಯವಿಟ್ಟು ಅಮ್ಮ ಮತ್ತು ಅಪ್ಪನನ್ನು ಚೆನ್ನಾಗಿ ನೋಡಿಕೊಳ್ಳಿ. ಅವರಿಗೆ ಏನೂ ಕೊರತೆಯಾಗಲು ಬಿಡಬೇಡಿ” ಎಂದು ಆಕೆ ಪತ್ರದಲ್ಲಿ ಮತ್ತಷ್ಟು ಬರೆದಿದ್ದಾಳೆ.

ಮದುವೆಯ ಮುನ್ನಾದಿನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಧು ಮತ್ತು ಆಕೆಯ ಪೋಷಕರು

21 ವರ್ಷದ ವಧು ಸೇರಿದಂತೆ ಒಂದೇ ಕುಟುಂಬದ ಮೂವರು ಆಕೆಯ ಮದುವೆಯ ಮುನ್ನಾದಿನ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಕರ್ನಾಟಕದ ಮೈಸೂರಿನಲ್ಲಿ ನಡೆದಿದೆ. ಮೃತರನ್ನು ಶಿವಣ್ಣ (50), ಅವರ ಪತ್ನಿ ನಾಗರತ್ನ (45) ಮತ್ತು ಅವರ ಮಗಳು ರಕ್ಷಿತಾ (21) ಎಂದು ಗುರುತಿಸಲಾಗಿದೆ. ಟಿ. ನರಸೀಪುರ ತಾಲ್ಲೂಕಿನ ಹಳೆಕೆಂಪಯನ್‌ಹುಂಡಿ ಗ್ರಾಮದಲ್ಲಿ ಈ ದುರಂತ ನಡೆದಿದೆ.

ಒಂದೇ ಕುಟುಂಬದ ಮೂವರು ಸದಸ್ಯರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಉಲ್ಲಾಸ್ ಗೌಡ ಎಂಬ ಯುವಕನನ್ನು ಬಂಧಿಸಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ಕೆಂಪಾಯನ ಹುಂಡಿಯಲ್ಲಿ ಈ ಘಟನೆ ನಡೆದಿದ್ದು, ಯುವಕನೊಬ್ಬನ ಕಿರುಕುಳದ ಬಗ್ಗೆ ಆತ್ಮಹತ್ಯೆ ಪತ್ರ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಂಪಾಯನ ಹುಂಡಿ ಗ್ರಾಮದ ನಿವಾಸಿಗಳಾದ ಶಿವಣ್ಣ-ನಾಗರತ್ನ ಮತ್ತು ಅವರ ಮಗಳು ರಕ್ಷಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದೇ ಗ್ರಾಮದ ಯುವಕ ಉಲ್ಲಾಸ್ ಗೌಡ ಕುಟುಂಬಕ್ಕೆ ಮಾನಸಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಪೊಲೀಸ್ ತನಿಖೆಯಲ್ಲಿ ಆರೋಪಿ ಉಲ್ಲಾಸ್, ರಕ್ಷಿತಾ ಜೊತೆಗಿನ ಸಂಬಂಧದ ಬಗ್ಗೆ ಮತ್ತು ಅವಳು ಮದುವೆಯಾಗಲಿರುವ ಹುಡುಗ ಮತ್ತು ಅವನ ಕುಟುಂಬದ ಬಗ್ಗೆ ಸುಳ್ಳು ಕಥೆಯನ್ನು ಹೆಣೆದಿದ್ದಾನೆ ಎಂದು ತಿಳಿದುಬಂದಿದೆ. ಇದು ರಕ್ಷಿತಾಳ ಕುಟುಂಬಕ್ಕೆ ಆಘಾತ ತಂದಿದೆಯ ಕುಟುಂಬದ ಗೌರವಕ್ಕೆ ಧಕ್ಕೆಯಾಗುತ್ತದೆ ಎಂದು ಹೆದರಿ, ಮೂವರೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.