ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Sindoor: "ನಮ್ಮ ಹೆಣ್ಣು ಮಕ್ಕಳ ಸಿಂದೂರ ಅಳಿಸಿದವರು ಈಗ ಬೆಲೆ ತೆತ್ತಿದ್ದಾರೆ"; ಪಾಕ್‌ಗೆ ನುಗ್ಗಿ ಹೊಡಿದಿದ್ದೇವೆ ಎಂದ ಮೋದಿ

ಶಾಂತಿಯ ಮಾರ್ಗದೊಂದಿಗೆ ಭಾರತ ಸಾಗುತ್ತದೆ. ನಮ್ಮ ಹೆಣ್ಣು ಮಕ್ಕಳ ಸಿಂದೂರ ಅಳಿಸಿದವರಿಗೆ ಈಗ ಅದರ ಬೆಲೆ ಗೊತ್ತಾಗಿದೆ ಎಂದು ಪ್ರಧಾನಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಆಪರೇಷನ್‌ ಸಿಂದೂರ್‌ ಎಂಬುದು ಕೇವಲ ಹೆಸರಲ್ಲ ಇದು ಕೋಟ್ಯಂತರ ಜನರ ಭಾವನೆಗಳ ಪ್ರತಿಬಿಂಬ ಮತ್ತು ನ್ಯಾಯಕ್ಕಾಗಿ ಮಾಡಿದ ಪ್ರತಿಜ್ಞೆ ಎಂದು ಹೇಳಿದ್ದಾರೆ.

ಹೆಣ್ಣು ಮಕ್ಕಳ ಸಿಂದೂರ ಅಳಿಸಿದವರು ಈಗ ಬೆಲೆ ತೆತ್ತಿದ್ದಾರೆ ; ಮೋದಿ

Profile Vishakha Bhat May 12, 2025 8:46 PM

ನವದೆಹಲಿ: ಆಪರೇಷನ್‌ ಸಿಂದೂರ್‌ ಕಾರ್ಯಾಚರಣೆಯ ಬಳಿಕ ದೇಶದ ಜನರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಆಪರೇಷನ್‌ ಸಿಂದೂರ್‌ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಕ್ಕಾಗಿ ಸಶಸ್ತ್ರ ಪಡೆಗಳನ್ನು ಶ್ಲಾಘಿಸಿದ್ದಾರೆ. ನಮ್ಮ ಸೈನಿಕರ ಈ ಪರಾಕ್ರಮ ನಮ್ಮ ಹೆಣ್ಣು ಮಕ್ಕಳಿಗೆ ಸಮರ್ಪಣೆ ಎಂದು ಹೇಳಿದ್ದಾರೆ. ನಮ್ಮ ನೆಲಕ್ಕೆ ಬಂದು ನಮ್ಮವರನ್ನು ಹತ್ಯೆ ಮಾಡಿದವರ ಗತಿ ಏನಾಗಿದೆ ಎಂಬುದು ಈಗ ಜಗತ್ತಿಗೆ ತಿಳಿದಿದೆ. ಭಯೋತ್ಪಾದಕರನ್ನು ಮಟ್ಟ ಹಾಕಲು ಭಾರತ ಯಾವತ್ತು ಸರ್ವ ಸನ್ನದ್ಧ ಎಂದು ಹೇಳಿದ್ದಾರೆ.

ಶಾಂತಿಯ ಮಾರ್ಗದೊಂದಿಗೆ ಭಾರತ ಸಾಗುತ್ತದೆ. ನಮ್ಮ ಹೆಣ್ಣು ಮಕ್ಕಳ ಸಿಂದೂರ ಅಳಿಸಿದವರಿಗೆ ಈಗ ಅದರ ಬೆಲೆ ಗೊತ್ತಾಗಿದೆ ಎಂದು ಪ್ರಧಾನಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಆಪರೇಷನ್‌ ಸಿಂದೂರ್‌ ಎಂಬುದು ಕೇವಲ ಹೆಸರಲ್ಲ ಇದು ಕೋಟ್ಯಂತರ ಜನರ ಭಾವನೆಗಳ ಪ್ರತಿಬಿಂಬ ಮತ್ತು ನ್ಯಾಯಕ್ಕಾಗಿ ಮಾಡಿದ ಪ್ರತಿಜ್ಞೆ ಎಂದು ಹೇಳಿದ್ದಾರೆ. ಭಯೋತ್ಪಾದಕರನ್ನು ನಿರ್ನಾಮ ಮಾಡಲು ನಾವು ಪಡೆಗಳಿಗೆ ಸ್ವತಂತ್ರವಾಗಿ ಅವಕಾಶ ನೀಡಿದ್ದೆವು. ನಮ್ಮ ಹೆಣ್ಣು ಮಕ್ಕಳ ಸಿಂದೂರವನ್ನು ಅಳಿಸಿ ಹಾಕಿದವರ ಪರಿಸ್ಥಿತಿ ಏನಾಗಿದೆ ಎಂಬುದು ಜಗತ್ತು ನೋಡದೆ ಎಂದು ಮೋದಿ ಹೇಳಿದ್ದಾರೆ.

ಪಾಕಿಸ್ತಾನದ ವಿರುದ್ಧ ಗುಡುಗಿದ ಮೋದಿ ಭಯೋತ್ಪಾದಕರಿಗೆ ಬೆಂಬಲ ಕೊಡುವುದನ್ನು ನಿಲ್ಲಿಸಿ ಎಂದು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಉಗ್ರರನ್ನು ಮಟ್ಟ ಹಾಕಲು ಭಾರತಕ್ಕೆ ಬೆಂಬಲ ಕೊಡುವ ಬದಲು ನಮ್ಮ ಮೇಲೆಯೇ ದಾಳಿಗೆ ಪಾಕಿಸ್ತಾನ ಯತ್ನಿಸಿತ್ತು. ಪಾಕಿಸ್ತಾನ ಗಡಿಯಲ್ಲಿ ಯುದ್ಧಕ್ಕೆ ಸಜ್ಜಾಗಿತ್ತು. ಆದರೆ ಭಾರತ ಅವರ ತಲೆಯ ಮೇಲೆಯೇ ಹೊಡೆದಿದೆ. ಪಹಲ್ಗಾಮ್‌ ದಾಳಿ ಉಗ್ರರು , ಮಾಸ್ಟರ್‌ಮೈಂಡ್‌ಗಳು ಆರಾಮವಾಗಿ ಪಾಕಿಸ್ತಾನದಲ್ಲಿ ಓಡಾಡಿಕೊಂಡಿದ್ದರು. ಅವರನ್ನು ಹುಡುಕಿ ಪಾಕ್‌ ನೆಲಕ್ಕೆ ನುಗ್ಗಿ ಹೊಡೆದಿದ್ದೇವೆ ಎಂದು ಅವರು ಹೇಳಿದ್ದಾರೆ.

"ಭಾರತ ಪಾಕಿಸ್ತಾನದ ಹೃದಯಭಾಗದ ಮೇಲೆ ದಾಳಿ ಮಾಡಿತು. ಅವರ ವಾಯುನೆಲೆಗಳನ್ನು ನಾಶಮಾಡಿತು, ಪಾಕಿಸ್ತಾನವು ನಮ್ಮ ಕೃತ್ಯಗಳಿಂದ ದಿಗ್ಭ್ರಮೆಗೊಂಡಿದೆ. ಜಗತ್ತಿನ ಎದುರು ಶಾಂತಿಗಾಗಿ ಅಂಗಲಾಚಿದೆ ಎಂದು ಮೋದಿ ಹೇಳಿದ್ದಾರೆ. ಪ್ರತಿಯೊಬ್ಬ ಭಾರತೀಯ ಶಾಂತಿಯಿಂದ ಬದುಕಲು ಶಕ್ತಿಯ ಉಪಯೋಗವೂ ಮುಖ್ಯ. ನೀರು ಮತ್ತು ರಕ್ತ ಜೊತೆ ಜೊತೆಗೆ ಹರಿಯಲು ಸಾಧ್ಯವಿಲ್ಲ. ಅಂತೆಯೇ ವ್ಯಾಪಾರ ಮತ್ತು ಉಗ್ರವಾದ ಜೊತೆಗಿರಲು ಸಾಧ್ಯವಿಲ್ಲ. ಪಾಕಿಸ್ತಾನ ಉಗ್ರರನ್ನು ನಿರ್ಣಾಮ ಮಾಡಲೇಬೇಕು ಎಂದು ಪಾಕ್‌ಗೆ ನೇರವಾಗಿ ಎಚ್ಚರಿಕೆ ನೀಡಿದ್ದಾರೆ.