ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Voice President: ಉಪರಾಷ್ಟ್ರಪತಿ ಚುನಾವಣೆ; ಇಂಡಿಯಾ ಬ್ಲಾಕ್‌ನಿಂದ ಸುಪ್ರೀಂ ನಿವೃತ್ತ ನ್ಯಾಯಮೂರ್ತಿ ಸುದರ್ಶನ ರೆಡ್ಡಿ ಕಣಕ್ಕೆ

ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ (Voice President) ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಬಿ. ಸುದರ್ಶನ್ ರೆಡ್ಡಿ (Sudershan Reddy) ಅವರನ್ನು ತಮ್ಮ ಅಭ್ಯರ್ಥಿ ಎಂದು ಇಂಡಿಯಾ ಬ್ಲಾಕ್‌ನ ನಾಯಕರು ಮಂಗಳವಾರ ಘೋಷಿಸಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆ; ಇಂಡಿಯಾ ಬ್ಲಾಕ್‌ನಿಂದ ಸುದರ್ಶನ ರೆಡ್ಡಿ ಕಣಕ್ಕೆ

Vishakha Bhat Vishakha Bhat Aug 19, 2025 1:21 PM

ನವದೆಹಲಿ: ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ (Voice President) ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಬಿ. ಸುದರ್ಶನ್ ರೆಡ್ಡಿ (Sudershan Reddy) ಅವರನ್ನು ತಮ್ಮ ಅಭ್ಯರ್ಥಿ ಎಂದು ಇಂಡಿಯಾ ಬ್ಲಾಕ್‌ನ ನಾಯಕರು ಮಂಗಳವಾರ ಘೋಷಿಸಿದ್ದಾರೆ. ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯ ನಂತರ ಈ ಘೋಷಣೆ ಹೊರಬಿದ್ದಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಭಾನುವಾರ ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಈ ಹುದ್ದೆಗೆ ನಾಮನಿರ್ದೇಶನ ಮಾಡಿದೆ. ರಾಧಾಕೃಷ್ಣನ್ ಅವರು ಪಕ್ಷದ ತಮಿಳುನಾಡು ಘಟಕದ ಮಾಜಿ ಅಧ್ಯಕ್ಷರು ಮತ್ತು ಆರ್‌ಎಸ್‌ಎಸ್ ಅನುಭವಿ.

ಸುಪ್ರೀಂ ಕೋರ್ಟ್‌ಗೆ ಬಡ್ತಿ ಪಡೆಯುವ ಮೊದಲು, ರೆಡ್ಡಿ ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಮತ್ತು ಆಂಧ್ರಪ್ರದೇಶ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ರೆಡ್ಡಿ 2011 ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನಿವೃತ್ತರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎನ್‌ಡಿಎಯ ಉಪಾಧ್ಯಕ್ಷ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರನ್ನು ಬೆಂಬಲಿಸುವಂತೆ ಪ್ರತಿಪಕ್ಷಗಳನ್ನು ಒತ್ತಾಯಿಸಿದ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ.



ವಿರೋಧ ಪಕ್ಷದ ಅಭ್ಯರ್ಥಿಯನ್ನು ಘೋಷಿಸಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಕುರಿತು ಮಾತನಾಡಿ, ಬಿ. ಸುದರ್ಶನ್ ರೆಡ್ಡಿ ಭಾರತದ ಅತ್ಯಂತ ವಿಶಿಷ್ಟ ಮತ್ತು ಪ್ರಗತಿಪರ ನ್ಯಾಯಶಾಸ್ತ್ರಜ್ಞರಲ್ಲಿ ಒಬ್ಬರು. ಅವರು ಆಂಧ್ರಪ್ರದೇಶ ಹೈಕೋರ್ಟ್‌ನ ನ್ಯಾಯಾಧೀಶರು, ಗುವಾಹಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು ಸೇರಿದಂತೆ ಸುದೀರ್ಘ ಮತ್ತು ಶ್ರೇಷ್ಠ ಕಾನೂನು ವೃತ್ತಿಜೀವನವನ್ನು ಹೊಂದಿದ್ದಾರೆ. ಅವರು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯದ ಪರ ನಿಂತವರು ಎಂದು ಹೇಳಿದ್ದಾರೆ.