Explosion: ಭೀಕರ ದುರಂತ! ಶಿವಕಾಶಿಯ ಪಟಾಕಿ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ
ಪಟಾಕಿ ಕಾರ್ಖಾನೆಯಲ್ಲಿ (firecracker factory ) ಸ್ಫೋಟ (Explosion) ಉಂಟಾಗಿ ಮೂವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ (Tamilnadu) ವಿರುಧುನಗರ ಜಿಲ್ಲೆಯ ಶಿವಕಾಶಿ ( Sivakasi) ಬಳಿಯ ನಾರಣಾಪುರಂನಲ್ಲಿ (Naranapuram) ನಡೆದಿದೆ. ಮರಿಯಮ್ಮಲ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಹಲವಾರು ಮಂದಿ ಇದರಿಂದ ಗಾಯಗೊಂಡಿದ್ದಾರೆ.


ಶಿವಕಾಶಿ: ಪಟಾಕಿ ಕಾರ್ಖಾನೆಯಲ್ಲಿ ( firecracker factory ) ಸ್ಫೋಟ (Explosion) ಉಂಟಾಗಿ ಮೂವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ (Tamil Nadu) ವಿರುಧುನಗರ ಜಿಲ್ಲೆಯ ಶಿವಕಾಶಿ ( Sivakasi) ಬಳಿಯ ನಾರಣಾಪುರಂನಲ್ಲಿ (Naranapuram) ನಡೆದಿದೆ. ಮರಿಯಮ್ಮಲ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ( Blast At Firecracker Factory) ಸಂಭವಿಸಿದೆ. ಹಲವಾರು ಮಂದಿ ಇದರಿಂದ ಗಾಯಗೊಂಡಿದ್ದಾರೆ. ಸ್ಫೋಟಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮಾಹಿತಿ ತಿಳಿದ ತಕ್ಷಣ ರಕ್ಷಣಾ ತಂಡಗಳು ಮತ್ತು ಅಗ್ನಿಶಾಮಕ ತಂಡ ಸ್ಥಳಕ್ಕೆ ಧಾವಿಸಿ ತುರ್ತು ಕ್ರಮ ಕೈಗೊಂಡಿತ್ತು. ಇದರಿಂದ ಹೆಚ್ಚಿನ ಅಪಾಯ ತಪ್ಪಿದಂತಾಗಿದೆ. ಸ್ಪೋಟದ ಕಾರಣದ ಕುರಿತು ತನಿಖೆ ನಡೆಸುತ್ತಿರುವುದಾಗಿ ನಾರಣಾಪುರಂ ವ್ಯಾಪ್ತಿಯ ಪೊಲೀಸರು ತಿಳಿಸಿದ್ದಾರೆ.
ಭಾರತದ ಪಟಾಕಿ ರಾಜಧಾನಿ ಎಂದೇ ಕರೆಯಲ್ಪಡುವ ಶಿವಕಾಶಿ ಬೆಂಕಿಕಡ್ಡಿ ಉದ್ಯಮ ಮತ್ತು ಮುದ್ರಣದ ಪ್ರಮುಖ ಕೇಂದ್ರವಾಗಿದೆ. ಇಲ್ಲಿನ ನಾರಣಾಪುರಂನ ಮರಿಯಮ್ಮಲ್ ಪಟಾಕಿ ಕಾರ್ಖಾನೆಯಲ್ಲಿ ಸೋಮವಾರ ಸ್ಫೋಟ ಉಂಟಾಗಿದೆ. ಹತ್ತಿರದ ಪ್ರದೇಶಗಳನ್ನು ನಡುಗಿಸುವ ರೀತಿಯಲ್ಲಿ ಭಾರಿ ಪ್ರಮಾಣದ ದೊಡ್ಡ ಸ್ಫೋಟದ ಶಬ್ದ ಕೇಳಿಬಂದಿದೆ. ಇದು ಭೀತಿಯನ್ನು ಉಂಟು ಮಾಡಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
Three workers killed in explosion at Mariammal Fireworks unit at Narnapuram in Sivakasi. Three others injured. Probe underway. @THChennai #fireworks #accident #sivakasi pic.twitter.com/YuHmUAUGQy
— Sundar Subbiah (@SundarSubbiah) July 21, 2025
ವಿರುಧುನಗರ ಜಿಲ್ಲೆಯ\ ಚಿನ್ನ ಕಾಮನ್‌ಪಟ್ಟಿ ಗ್ರಾಮದಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಜುಲೈ 1ರಂದು ಸಂಭವಿಸಿದ ಸ್ಫೋಟದಲ್ಲಿ ಎಂಟು ಜನರು ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದರು. ಈ ಸ್ಫೋಟದ ಪರಿಣಾಮವಾಗಿ ಕಾರ್ಖಾನೆಯ ಒಳಗಿನಿಂದ ನಿರಂತರವಾಗಿ ಪಟಾಕಿ ಸಿಡಿತದ ಸದ್ದು ಕೇಳಿಬರುತ್ತಿತ್ತು ಎನ್ನಲಾಗಿದೆ.
ಇದನ್ನೂ ಓದಿ: Actor Darshan: ಸುಪ್ರೀಂ ಕೋರ್ಟ್‌ಗೆ ಹಾಜರಾಗದ ದರ್ಶನ್ ವಕೀಲ ಕಪಿಲ್ ಸಿಬಲ್, ವಿಚಾರಣೆ ಮುಂದಕ್ಕೆ
ಜೂನ್ 12 ರಂದು ವಿರುಧುನಗರ ಜಿಲ್ಲೆಯ ಅರುಪ್ಪುಕೊಟ್ಟೈ ಬಳಿಯ ವಡಕರೈ ಗ್ರಾಮದಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಉಂಟಾಗಿ ಮೂವರು ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದರು. ಈ ಘಟನೆಗೆ ಸಂಬಂಧಿಸಿ ಮೂವರು ಉದ್ಯೋಗಿಗಳನ್ನು ಬಂಧಿಸಲಾಗಿದೆ. ಪಟಾಕಿ ತಯಾರಿಸಲು ಕಾರ್ಮಿಕರು ರಾಸಾಯನಿಕಗಳನ್ನು ತುಂಬುತ್ತಿದ್ದ ಶೆಡ್‌ನಲ್ಲಿ ಸ್ಫೋಟ ಉಂಟಾಗಿತ್ತು.
ಮೇ 30 ರಂದು ಪಂಜಾಬ್‌ನ ಮುಕ್ತಸರ್ ಜಿಲ್ಲೆಯಲ್ಲಿ ಮತ್ತೊಂದು ಸ್ಫೋಟ ಸಂಭವಿಸಿತ್ತು. ಇದರಲ್ಲಿ ಐದು ಜನರು ಸಾವನ್ನಪ್ಪಿದ್ದು, 34 ಮಂದಿ ಗಾಯಗೊಂಡಿದ್ದರು. ಜಿಲ್ಲೆಯ ಸಿಂಗ್‌ವಾಲಾ ಗ್ರಾಮದ ಹೊರವಲಯದಲ್ಲಿರುವ ಎರಡು ಅಂತಸ್ತಿನ ಪಟಾಕಿ ಕಾರ್ಖಾನೆಯಲ್ಲಿ ಮಧ್ಯರಾತ್ರಿ ಪ್ರಬಲ ಸ್ಫೋಟ ಸಂಭವಿಸಿತ್ತು. ಸ್ಫೋಟದ ತೀವ್ರತೆಗೆ ಎರಡು ಅಂತಸ್ತಿನ ಸಂಪೂರ್ಣ ಕಟ್ಟಡ ಕುಸಿದು ಬಿದ್ದಿತ್ತು.