ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Fighter Jet Crash: ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ ಪತನ; ಇಬ್ಬರು ಪೈಲೆಟ್‌ಗಳು ಸೇಫ್‌

ಭಾರತೀಯ ವಾಯುಪಡೆಯ ಮಿರಾಜ್ 2000 ಯುದ್ಧ ವಿಮಾನವು ಮಧ್ಯ ಪ್ರದೇಶದ ಶಿವಪುರಿಯ ಕರೈರಾ ಪ್ರದೇಶದಲ್ಲಿ ಪತನಗೊಂಡಿದೆ. ಯುದ್ಧ ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ. ಒಬ್ಬ ಪೈಲೆಟ್‌ಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಾಯುಪಡೆ ಹೆಲಿಕಾಪ್ಟರ್‌ ಪತನ- ಪೈಲೆಟ್‌ಗಳು ಸೇಫ್‌!

Fighter Jet Crash

Profile Vishakha Bhat Feb 6, 2025 4:52 PM

ಭೋಪಾಲ್‌: ಭಾರತೀಯ ವಾಯುಪಡೆಯ (Indian Air Force) ಮಿರಾಜ್ 2000 ಯುದ್ಧ ವಿಮಾನವು ಗುರುವಾರ ಮಧ್ಯಪ್ರದೇಶದ (Madhya pradesh) ಶಿವಪುರಿಯ ಕರೈರಾ ಪ್ರದೇಶದಲ್ಲಿ ಪತನಗೊಂಡಿದೆ (Fighter Jet Crash) ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ ವಿಮಾನವು ನಿಯಮಿತ ತರಬೇತಿ ಹಾರಾಟದಲ್ಲಿದ್ದಾಗ ಈ ಘಟನೆ ನಡೆದಿದೆ. ಘಟನೆಯಾದ ತಕ್ಷಣವೇ ಸ್ಥಳೀಯ ರಕ್ಷಣಾ ತಂಡಗಳು ಸ್ಥಳಕ್ಕಾಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.



ಘಟನೆಯ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿದ್ದಾರೆ. ಇಬ್ಬರೂ ತಮ್ಮ ಪ್ಯಾರಾಚೂಟ್‌ಗಳನ್ನು ತೆರೆದು ಸಕಾಲದಲ್ಲಿ ಹೊರಗೆ ಹಾರಿ ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ. ಆದರೂ ಕೂಡ ಒಬ್ಬ ಪೈಲೆಟ್‌ಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.



ಇತ್ತೀಚೆಗೆ ಜನವರಿ 5 ರಂದು ಗುಜರಾತ್ ಕರಾವಳಿಯಲ್ಲಿ ಭಾರತೀಯ ಕರಾವಳಿ ಪಡೆಯ ತರಬೇತಿ ನಿರತ ಹೆಲಿಕಾಪ್ಟರ್ ಪತನಕ್ಕೀಡಾಗಿ, ಹೆಲಿಕಾಪ್ಟರ್ ನಲ್ಲಿದ್ದ ಮೂವರು ದುರ್ಮರಣಕ್ಕೀಡಾಗಿದ್ದರು. ಗುಜರಾತ್‌ನ ಪೋರ್‌ಬಂದರ್‌ನಲ್ಲಿ ಎಎಲ್‌ಎಚ್ ಧ್ರುವ್ ಹೆಸರಿನ ಭಾರತೀಯ ಕರಾವಳಿ ಪಡೆ ಹೆಲಿಕಾಪ್ಟರ್ ಪತನಗೊಂಡಿತ್ತು. ಪೈಲಟ್‌ಗಳಿಗೆ ತರಬೇತಿ ನೀಡುವ ಸಮಯದಲ್ಲಿ ಈ ಘಟನೆ ನಡೆದಿತ್ತು.

ಈ ಸುದ್ದಿಯನ್ನೂ ಓದಿ: Plane crash: ದಕ್ಷಿಣ ಸುಡಾನ್‌ನಲ್ಲಿ ವಿಮಾನ ಪತನ; ಭಾರತೀಯರು ಸೇರಿದಂತೆ 20 ಪ್ರಯಾಣಿಕರ ದುರ್ಮರಣ!

ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಸೇರಿದಂತೆ ಮೂವರು ಸಿಬ್ಬಂದಿ ಇದ್ದರು. ಮೂವರು ಮೃತಪಟ್ಟಿದ್ದರು. ಐಸಿಜಿಯ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ಎಎಲ್‌ಎಚ್) ಪೋರಬಂದರ್ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಮೂವರು ಸಿಬ್ಬಂದಿಯನ್ನು ಹೆಲಿಕಾಪ್ಟರ್‌ನಿಂದ ಹೊರಕ್ಕೆ ಕರೆತಂದು ಪೋರಬಂದರ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರವಾಗಿ ಸುಟ್ಟ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.