ʼʼಅತ್ಯಾಚಾರಿಗಳಿಗೆ ಬೆಂಬಲ ನೀಡಿದವರಿಗೆ ಶಿಕ್ಷಣ ಸಚಿವ ಪಟ್ಟʼʼ: ಪ್ರಲ್ಹಾದ ಜೋಶಿ ವಿರುದ್ಧ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಿವಾದಾತ್ಮಕ ಹೇಳಿಕೆ
Rahul Gandhi-Priyanka Gandhi: ಕೇಂದ್ರದ ನೂತನ ಸಿಕ್ಷಣ ಸಚಿವ ಪ್ರಲ್ಹಾದ ಜೋಶಿ ಅವರನ್ನು ಅತ್ಯಾಚಾರಿಗಳಿಗೆ ಬೆಂಬಲ ನೀಡಿದ ವ್ಯಕ್ತಿ ಎಂದು ಕರೆಯುವ ಮೂಲಕ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಿವಾದ ಹುಟ್ಟು ಹಾಕಿದ್ದಾರೆ. ಈ ಹೇಳಿಕೆಗೆ ಬಿಜೆಪಿ ಕಿಡಿ ಕಾರಿದೆ.
ರಾಹುಲ್ ಗಾಂಧಿ-ಪ್ರಿಯಾಂಕಾ ಗಾಂಧಿ ಮತ್ತು ಪ್ರಲ್ಹಾದ ಜೋಶಿ (ಸಂಗ್ರಹ ಚಿತ್ರ) -
ದೆಹಲಿ, ಜು. 28: ನೀಟ್ ವಿರುದ್ಧದ ಹೋರಾಟ ಭುಗಿಲೆದ್ದ ಬಳಿಕ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಕರ್ನಾಟಕದ ಪ್ರಲ್ಹಾದ ಜೋಶಿ ನೇಮಕಗೊಂಡಿದ್ದಾರೆ. ಇದೀಗ ಪ್ರಲ್ಹಾದ ಜೋಶಿ (Pralhad Joshi) ಅವರ ಆಯ್ಕೆಯನ್ನು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ (Rahul Gandhi) ಮತ್ತು ಪ್ರಿಯಾಂಕಾ ಗಾಂಧಿ (Priyanka Gandhi) ಟೀಕಿಸಿದ್ದು, ಅತ್ಯಾಚಾರಿಗೆ ಬೆಂಬಲ ನೀಡಿದ ವ್ಯಕ್ತಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 2002ರ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಸಮರ್ಥಿಸಿದ ಜೋಶಿ ಅವರ ಮಾತನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕರು ಈ ಹೇಳಿಕೆ ನೀಡಿದ್ದಾರೆ. ಸದ್ಯ ಈ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ.
ಲೋಕಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಬಿಲ್ ಮೇಲಿನ ಚರ್ಚೆಯ ವೇಳೆ ಮಾತನಾಡಿದ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ, ʼʼಗರ್ಭಿಣಿ ಮೇಲೆ ಅತ್ಯಾಚಾರ ಎಸಗಿದವರ ಬಿಡುಗಡೆಗೆ ಬೆಂಬಲ ವ್ಯಕ್ತಪಡಿಸಿದ ವ್ಯಕ್ತಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶಿಕ್ಷಣ ಸಚಿವರನ್ನಾಗಿ ನೇಮಿಸಿದ್ದಾರೆ" ಎಂದರು. ಇದರಿಂದ ಕೆರಳಿದ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಧ್ಯ ಪ್ರವೇಶಿಸಿ ಪ್ರಿಯಾಂಕಾ ಗಾಂಧಿ ಈ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದರು.
ರಾಹುಲ್ ಗಾಂಧಿ ಹೇಳಿಕೆ:
There can be no filthier type of man than one who defends rapists.
— Vinod Dixit (@vinod_dixit1961) July 28, 2026
Pralhad Joshi is an insult to our education system and an insult to every student in it. Crores of young women study in the institutions he now oversees.
India’s women will never accept new Education Minister. pic.twitter.com/oJX1JAkGyf
ಶಿಕ್ಷೆಗೊಳಗಾದ ಅತ್ಯಾಚಾರಿಗಳನ್ನು ಬೆಂಬಲಿಸುವ ಜೋಶಿ ಅವರ ವಿಡಿಯೊ ತಮ್ಮ ಬಳಿ ಇದೆ ಎಂದು ಪ್ರಿಯಾಂಕಾ ತಿರುಗೇಟು ನೀಡಿದರು. "ಮಹಿಳಾ ಹಕ್ಕುಗಳು ರಕ್ಷಿಸುತ್ತೇವೆ, ಮಹಿಳಾ ಮೀಸಲಾತಿ ತರುತ್ತಿದ್ದೇವೆ ಮತ್ತು ಮಹಿಳೆಯರನ್ನು ಮುಂಚೂಣಿಗೆ ಕರೆದೊಯ್ಯುತ್ತೇವೆ ಎಂದು ಕೇಂದ್ರ ಹೇಳುತ್ತಿರುವ ಸಮಯದಲ್ಲಿ ತಪ್ಪು ಸಂದೇಶ ರವಾನೆಯಾಗಿದೆ. ಅಂದಿನ ವಿಡಿಯೊ ನಮ್ಮ ಬಳಿ ಇದೆ. ನಾನು ಸಾಕ್ಷಿಯನ್ನು ಸರಿಯಾದ ಸಮಯದಲ್ಲಿ ಹಾಜರುಪಡಿಸುತ್ತೇನೆ" ಎಂದು ಪ್ರಿಯಾಂಕಾ ಗಾಂಧಿ ತಿಳಿಸಿದರು. ಅವರ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ನೂತನ ಶಿಕ್ಷಣ ಸಚಿವರಾಗಿ ಆಯ್ಕೆಯಾದ ಪ್ರಲ್ಹಾದ್ ಜೋಶಿ ಹೇಳಿದ್ದೇನು? ಇಲ್ಲಿದೆ ಫಸ್ಟ್ ರಿಯಾಕ್ಷನ್
ಪ್ರಿಯಾಂಕಾ ಗಾಂಧಿ ಮಾತು:
#WATCH | Delhi | In Lok Sabha, Congress MP Priyanka Gandhi Vadra says, " The Prime Minister appointed a new Education Minister, a person who expressed consent and even happiness over the release of those convicted of raping a pregnant woman... "
— ANI (@ANI) July 28, 2026
Objecting to this, Union Minister… pic.twitter.com/ahJOgjgQDI
ರಾಹುಲ್ ಗಾಂಧಿ ಸಮರ್ಥನೆ
ಇತ್ತ ರಾಹುಲ್ ಗಾಂಧಿ ತಮ್ಮ ಸಹೋದರಿಯ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಶಿಕ್ಷೆಗೊಳಗಾದ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸುವವರಿಗಿಂತ ಕೆಟ್ಟ ವ್ಯಕ್ತಿ ಬೇರೆ ಯಾರೂ ಇಲ್ಲ ಎಂದು ಟೀಕಿಸಿದರು. "ಬಿಜೆಪಿ ಅತ್ಯಾಚಾರಿಗಳ ರಕ್ಷಕನಾಗಿರುವ ವ್ಯಕ್ತಿಯನ್ನು ಶಿಕ್ಷಣ ಸಚಿವರನ್ನಾಗಿ ನೇಮಿಸಿದೆ. ಅತ್ಯಾಚಾರಿಗಳಿಗೆ ರಕ್ಷಣೆ ಬೇಕು ಎಂದು ಹೇಳುವ ವ್ಯಕ್ತಿಗಿಂತ ಹೆಚ್ಚು ದುರ್ಬಲ ವ್ಯಕ್ತಿ ಯಾರೂ ಇರಲು ಸಾಧ್ಯವಿಲ್ಲ. ಪ್ರಧಾನಿ ಮೋದಿ ಅವರ ಸಂಪುಟದಲ್ಲಿ ಅನೇಕರಿದ್ದಾರೆ. ಅವರಲ್ಲಿ ಯಾರನ್ನಾದರೂ ಆಯ್ಕೆ ಮಾಡಬಹುದಿತ್ತು. ಆದರೆ ಅವರು ಅತ್ಯಾಚಾರಿಗಳನ್ನು ರಕ್ಷಿಸುವ ವ್ಯಕ್ತಿಯನ್ನು ಆಯ್ಕೆ ಮಾಡಿದ್ದಾರೆ. ಅದ್ಭುತ!" ರಾಹುಲ್ ಗಾಂಧಿ ಸುದ್ದಿಗಾರರಿಗೆ ತಿಳಿಸಿದರು. ಸದ್ಯ ಈ ಹೇಳಿಕೆ ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ.
ʼʼಕೆಪಿಎಸ್‌ಸಿ ಕರ್ಮಕಾಂಡದ ಬಗ್ಗೆ ರಾಹುಲ್ ಗಾಂಧಿ ಮಾತನಾಡುತ್ತಿಲ್ಲವೇಕೆ?ʼʼ ಪ್ರಲ್ಹಾದ್ ಜೋಶಿ ವಾಗ್ದಾಳಿ
ಏನಿದು ಬಿಲ್ಕಿಸ್ ಬಾನೊ ಪ್ರಕರಣ?
2002ರ ಗುಜರಾತ್ ಗಲಭೆಯಲ್ಲಿ 21 ವರ್ಷದ ಬಿಲ್ಕಿಸ್ ಬಾನೊ ಅತ್ಯಾಚಾರಕ್ಕೊಳಗಾಗಿದ್ದರು. ಐದು ತಿಂಗಳ ಗರ್ಭಿಣಿಯಾಗಿದ್ದ ಇವರ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಮೂರು ವರ್ಷದ ಮಗಳು ಸೇರಿ ಬಿಲ್ಕಿಸ್ ಕುಟುಂಬದ ಏಳು ಸದಸ್ಯರು ಗಲಭೆಯಲ್ಲಿ ಪ್ರಾಣ ಕಳೆದುಕೊಂಡಿದ್ದರು. ಪ್ರಕರಣದಲ್ಲಿ ಹನ್ನೊಂದು ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.
ದೇಶದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.