ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Fire Accident: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 8 ಕಾರ್ಮಿಕರು ಬಲಿ

ಆಂಧ್ರ ಪ್ರದೇಶದ ಅನಕಪಳ್ಳಿ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 8 ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಗೆ ಕಾರಣವೇನೆಂದು ತಕ್ಷಣಕ್ಕೆ ತಿಳಿದು ಬಂದಿಲ್ಲ. ಸಂತ್ರಸ್ತರೆಲ್ಲ ಕಾಕಿನಾಡ ಜಿಲ್ಲೆಯ ಸಮರ್ಲಕೋಟದವರು ಎನ್ನಲಾಗಿದೆ.

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 8 ಕಾರ್ಮಿಕರು ಬಲಿ

Profile Ramesh B Apr 13, 2025 4:28 PM

ಅಮರಾವತಿ: ಆಂಧ್ರ ಪ್ರದೇಶದಲ್ಲಿ ಭಾನುವಾರ (ಏ. 13) ದೊಡ್ಡದೊಂದು ಅವಘಡ ಸಂಭವಿಸಿದ್ದು, ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ (Fire Accident). ಆಂಧ್ರ ಪ್ರದೇಶದ ಅನಕಪಳ್ಳಿ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ (Firecracker manufacturing unit) ಸ್ಫೋಟ ಸಂಭವಿಸಿ ಈ ದುರಂತ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ. ಘಟನೆಯಲ್ಲಿ ಸುಮಾರು 5 ಮಂದಿ ಗಾಯಗೊಂಡಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಧಾವಿಸಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆಗೆ ಕಾರಣವೇನೆಂದು ತಕ್ಷಣಕ್ಕೆ ತಿಳಿದು ಬಂದಿಲ್ಲ. ಸಂತ್ರಸ್ತರೆಲ್ಲ ಕಾಕಿನಾಡ ಜಿಲ್ಲೆಯ ಸಮರ್ಲಕೋಟದವರು ಎನ್ನಲಾಗಿದೆ.

ಮೃತರಲ್ಲಿ ಇಬ್ಬರು ಮಹಿಳೆಯರೂ ಸೇರಿದ್ದಾರೆ. ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಗೃಹ ಸಚಿವೆ ವಿ.ಅನಿತಾ ಈ ಬಗ್ಗೆ ಸುದ್ದಿಸಂ‍ಸ್ಥೆ ಪಿಟಿಐ ಜತೆ ಮಾತನಾಡಿ, ʼʼಈ ಬೆಂಕಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿ ಒಟ್ಟು 8 ಮಂದಿ ನಿಧನ ಹೊಂದಿದ್ದಾರೆ. ಹಲವರು ಗಾಯಗೊಂಡಿದ್ದಾರೆʼʼ ಎಂದಿದ್ದಾರೆ. ಗಾಯಗೊಂಡಿರುವವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಿಎಂ ಚಂದ್ರಬಾಬು ನಾಯ್ಡು ಸೂಚಿಸಿದ್ದಾರೆ.

ಚಂದ್ರಬಾಬು ನಾಯ್ಡು ಅವರ ಪೋಸ್ಟ್‌ ಇಲ್ಲಿದೆ:



ಈ ಸುದ್ದಿಯನ್ನೂ ಓದಿ: Tamil Nadu: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಕಾರ್ಮಿಕರ ದುರ್ಮರಣ

ಬೆಂಕಿ ದುರಂತದ ದೃಶ್ಯ:



ಗುಜರಾತ್‌ನಲ್ಲಿ 17 ಮಂದಿಯನ್ನು ಬಲಿ ತೆಗೆದುಕೊಂಡಿದ್ದ ಸ್ಫೋಟ

ಏಪ್ರಿಲ್‌ 1ರಂದು ಗುಜರಾತ್‌ನಲ್ಲಿ ಇದೇ ರೀತಿಯ ದುರಂತ ಸಂಭವಿಸಿ ಸುಮಾರು 17 ಕಾರ್ಮಿಕರು ಮೃತಪಟ್ಟಿದ್ದರು. ಗುಜರಾತ್‌ನ ದೀಸಾದಲ್ಲಿರುವ ಪಟಾಕಿ ಕಾರ್ಖಾನೆ ಮತ್ತು ಗೋದಾಮಿನಲ್ಲಿ ಭಾರೀ ಸ್ಫೋಟ ಸಂಭವಿಸಿ ನಂತರ ಕಾಣಿಸಿಕೊಂಡ ಬೆಂಕಿಗೆ 17 ಕಾರ್ಮಿಕರು ಸಜೀವ ದಹನವಾಗಿದ್ದರೆ, ಹಲವ ಸ್ಥಿರು ಗಾಯಗೊಂಡಿದ್ದರು.

ದೀಪಕ್ ಟ್ರೇಡರ್ಸ್‌ ಎಂಬ ಪಟಾಕಿ ಕಾರ್ಖಾನೆಯಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಮೊದಲು ಕಾರ್ಖಾನೆಯಲ್ಲಿ ಏಕಾಏಕಿ ಸ್ಫೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡಿತ್ತು. ಇದರ ಬೆನ್ನಲ್ಲೇ ಕಾರ್ಖಾನೆಯ ಸ್ಲ್ಯಾಬ್ ಕುಸಿದು ಬಿದ್ದಿತ್ತು. ಇದು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಯಿತು. ಅಲ್ಲದೆ ಸಾವಿನ ಪ್ರಮಾಣ ಹೆಚ್ಚಾಗಲು ಕಾರಣವಾಯ್ತು ಎಂದು ಜಿಲ್ಲಾಧಿಕಾರಿ ಮಿಹಿರ್ ಪಟೇಲ್ ತಿಳಿಸಿದ್ದರು. ಕೊನೆಗೆ 108 ಆಂಬ್ಯುಲೆನ್ಸ್ ತಂಡಗಳೊಂದಿಗೆ ದೀಸಾ ಪುರಸಭೆಯ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದರು.

ತಮಿಳುನಾಡಿನಲ್ಲೂ ದುರಂತ

ಇನ್ನು ವರ್ಷಾರಂಭದಲ್ಲಿ ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿನಡೆದ ಅಗ್ನಿ ಅವಘಡದಲ್ಲಿ 6 ಮಂದಿ ಅಸುನೀಗಿದ್ದರು. ವಿರುದ್ವುನಗರದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿ, ಸ್ಥಳದಲ್ಲೇ 6ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದರು. ಅಲ್ಲದೇ ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದರು.

ಪಟಾಕಿ ತಯಾರಿಸುವ ವೇಳೆ ರಾಸಾಯನಿಕ ಮಿಶ್ರಣದ ಸಂದರ್ಭದಲ್ಲಿ ಸ್ಫೋಟ ಸಂಭವಿಸಿತ್ತು. ಸ್ಫೋಟಗೊಂಡ ಸ್ಥಳದಿಂದ ಸುಮಾರು 500 ಮೀಟರ್‌ ನಿಂದ ಒಂದು ಕಿ.ಮೀ. ವ್ಯಾಪ್ತಿಯಲ್ಲಿರುವ ಶಾಲೆಗಳನ್ನು ಮುನ್ನೆಚ್ಚರಿಕೆಯಾಗಿ ಒಂದು ದಿನದ ಮಟ್ಟಿಗೆ ಮುಚ್ಚಲಾಗಿತ್ತು. ವಿರುದ್ವುನಗರದಲ್ಲಿ 1,150 ಪಟಾಕಿ ತಯಾರಿಕೆ ಕಾರ್ಖಾನೆಗಳಿದ್ದು, 4 ಲಕ್ಷ ಕಾರ್ಮಿಕರಿದ್ದಾರೆ ಎಂದು ಅಂದಾಜಿಸಲಾಗಿದೆ.