ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Fire Accident: ಇಂದೋರ್‌ ವಸತಿ ಗೃಹದಲ್ಲಿ ಅಗ್ನಿ ಅವಘಡ, 6 ಮಂದಿ ಸಾವು

ಮಧ್ಯ ಪ್ರದೇಶದ ಇಂದೋರ್‌ನ ವಸತಿ ‌ಪ್ರದೇಶದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈಗಾಗಲೇ ಎರಡು ಅಂತಸ್ತುಗಳನ್ನು ಪರಿಶೀಲಿಸಲಾಗಿದ್ದು, ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಮೂರನೇ ಅಂತಸ್ತಿನಲ್ಲಿ ಯಾರಾದರೂ ಸಿಲುಕಿದ್ದಾರೆಯೇ ಎಂದು ತಪಾಸಣೆ ನಡೆಸಲಾಗುತ್ತಿದೆ.

ಇಂದೋರ್‌ ವಸತಿ ಗೃಹದಲ್ಲಿ ಅಗ್ನಿ ಅವಘಡ, 6 ಮಂದಿ ಸಾವು

ಅಗ್ನಿ ಆಕಸ್ಮಿಕ -

ಹರೀಶ್‌ ಕೇರ
ಹರೀಶ್‌ ಕೇರ Mar 18, 2026 7:45 AM

ಇಂದೋರ್, ಮಾ.18: ಮಧ್ಯಪ್ರದೇಶದ (madhya pradesh) ಇಂದೋರ್‌ನ (Indore) ಜನನಿಬಿಡ ವಸತಿ ಪ್ರದೇಶವೊಂದರಲ್ಲಿ ಬುಧವಾರ ಬೆಳ್ಳಂಬೆಳಿಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ (Fire Accident) ಆರು ಮಂದಿ ಸಾವನ್ನಪ್ಪಿದ್ದಾರೆ. ಎರಡು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಇಂದೋರ್‌ನ ಜನವಸತಿ ಪ್ರದೇಶದಲ್ಲಿರುವ ಎರಡು ಅಂತಸ್ತಿನ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯ ಕುರಿತು ಮಾಹಿತಿ ನೀಡಿದ ಇಂದೋರ್ ಜಿಲ್ಲಾಧಿಕಾರಿ ಶಿವಂ ವರ್ಮಾ, “ಈ ಅಗ್ನಿ ಅವಘಡದಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈಗಾಗಲೇ ಎರಡು ಅಂತಸ್ತುಗಳನ್ನು ಪರಿಶೀಲಿಸಲಾಗಿದ್ದು, ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಮೂರನೇ ಅಂತಸ್ತಿನಲ್ಲಿ ಯಾರಾದರೂ ಸಿಲುಕಿದ್ದಾರೆಯೇ ಎಂದು ತಪಾಸಣೆ ನಡೆಸಲಾಗುತ್ತಿದೆ,” ಎಂದು ತಿಳಿಸಿದ್ದಾರೆ.



ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ತೀವ್ರಗತಿಯಲ್ಲಿ ಸಾಗುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಇದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಪಿಸ್ತೂಲ್ ಲೋಡ್ ಮಾಡುವಾಗ ಆಕಸ್ಮಿಕವಾಗಿ ತಗುಲಿದ ಗುಂಡು; ಸ್ಥಳದಲ್ಲಿಯೇ ಯುವಕ ಸಾವು