ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mahakumbh: ಕುಂಭಮೇಳದಲ್ಲಿ ಮತ್ತೊಂದು ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

ಪ್ರಯಾಗರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಮತ್ತೊಂದು ಅವಘಡ ಸಂಭವಿಸಿದೆ. ಪ್ರಯಾಗ್‌ ರಾಜ್‌ನ ಸೆಕ್ಟರ್ 18 ರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯನ್ನು ನಂದಿಸಲು ಹಲವಾರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

Fire Accident at Mahakumbh

ಲಖನೌ: ಉತ್ತರ ಪ್ರದೇಶದ (Uttar Pradesh) ಪ್ರಯಾಗರಾಜ್‌ನಲ್ಲಿ ಮಹಾಕುಂಭ ಮೇಳ (Mahakumbh) ನಡೆಯುತ್ತಿದ್ದು, ಫೆ. 26 ರ ವರೆಗೆ ಇರಲಿದೆ. ಇದೀಗ ಮಹಾಕುಂಭ ಮೇಳದಲ್ಲಿ ಮತ್ತೊಂದು ಅವಘಡ ಉಂಟಾಗಿದ್ದು, ಭಾರೀ ಅನಾಹುತವೊಂದು ತಪ್ಪಿದೆ. ಇಂದು ನಡೆದ ಮಹಾ ಕುಂಭಮೇಳದಲ್ಲಿ ಬೆಂಕಿ (Fire Accident) ಕಾಣಿಸಿಕೊಂಡಿದೆ. ಪ್ರಯಾಗ್‌ ರಾಜ್‌ನ ಸೆಕ್ಟರ್ 18 ರಲ್ಲಿ (Sector 18) ಈ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯನ್ನು ನಂದಿಸಲು ಹಲವಾರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಹಳೆಯ ಜಿಟಿ ರಸ್ತೆಯ ತುಳಸಿ ಚೌರಾಹಾ ಬಳಿಯ ಶಿಬಿರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಖಾಕ್ ಚೌಕ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಯೋಗೇಶ್ ಚತುರ್ವೇದಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.



ಕಳೆದ ವಾರವಷ್ಟೇ ಮಹಾಕುಂಭನಗರದ ಸೆಕ್ಟರ್ 22ರ ಕ್ರಮಂಗಾಣದಲ್ಲಿ ಬೆಂಕಿ ಕಾಣಿಸಿಕೊಂಡು 15 ಟೆಂಟ್‌ಗಳು ಸುಟ್ಟು ಭಸ್ಮವಾಗಿದ್ದವು. ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಅಗ್ನಿಶಾಮಕ ದಳ ತೆರಳುವಲ್ಲಿ ಕೊಂಚ ವಿಳಂಬವಾಗಿತ್ತು. ಸುಟ್ಟು ಹೋದ 15 ಟೆಂಟ್‌ಗಳು ಅನಧಿಕೃತವಾಗಿ ನಿರ್ಮಿಸಲ್ಟಟ್ಟಿದ್ದವು ಎಂದು ತಿಳಿದು ಬಂದಿತ್ತು. ಬೆಂಕಿ ಅವಘಡದಲ್ಲಿ ಡೇರೆಗಳು ಸುಟ್ಟು ಹೋಗಿವೆ. ಸದ್ಯ ಪರಿಸ್ಥಿತಿ ತಿಳಿಯಾಗಿದೆ. ಆದರೆ, ಯಾವುದೇ ಜೀವಹಾನಿ ಅಥವಾ ಯಾರಿಗೂ ಗಾಯ ಕೂಡ ಆಗಿಲ್ಲ. ಮೇಲಾಗಿ ಇಲ್ಲಿ ನಿರ್ಮಿಸಲಾಗಿರುವ ಟೆಂಟ್​ಗಳು ಅನಧಿಕೃತವಾಗಿವೆ ಎಂದು ಪೊಲೀಸ್​ ಅಧಿಕಾರಿ ತಿಳಿಸಿದರು. ಜ.19ರಂದು ಮಹಾಕುಂಭನಗರದಲ್ಲಿ ಬೆಂಕಿ ಕಾಣಿಸಿಕೊಂಡು 100ಕ್ಕೂ ಹೆಚ್ಚು ಟೆಂಟ್‌ಗಳು ಅಗ್ನಿಗಾಹುತಿಯಾಗಿದ್ದವು.

ಈ ಸುದ್ದಿಯನ್ನೂ ಓದಿ: Mahakumbh 2025: ಮಹಾಕುಂಭ ಮೇಳದ ಕಾಲ್ತುಳಿತದ ನಂತರ 15 ಸಾವಿರ ಜನ ಮಿಸ್ಸಿಂಗ್?

ಜ. 29 ಮೌನಿ ಅಮವಾಸ್ಯೆಯಂದು ಸಂಭವಿಸಿದ ಕಾಲ್ತುಳಿತದಲ್ಲಿ 30 ಕ್ಕೂ ಅಧಿಕ ಜನರು ಮೃತ ಪಟ್ಟಿದ್ದರು. ಘಟನೆಯಲ್ಲಿ 60 ಜನರು ಗಂಭೀರವಾಗಿ ಗಾಯಗೊಂಡಿದ್ದರು. ನಂತರ ಎಚ್ಚೆತ್ತ ಸರ್ಕಾರ ನ್ನೆಲೆ ಭಕ್ತರ ಸುರಕ್ಷತೆಯನ್ನು ಖಾತ್ರಿ ಪಡಿಸಿಕೊಳ್ಳಲು ನಿರ್ದಿಷ್ಟ ಮಾರ್ಗಸೂಚಿಗಳು ಮತ್ತು ನಿಬಂಧನೆಗಳನ್ನು ಜಾರಿಗೆ ತಂದಿದೆ.