ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Maha Kumbh Fire: ಪ್ರಯಾಗ್‌ರಾಜ್‌ನಲ್ಲಿ ಮತ್ತೊಂದು ಅಗ್ನಿ ಅವಘಢ; ಹೊತ್ತಿ ಉರಿದ ಡೇರೆಗಳು

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದ್ದು, ಸೆಕ್ಟರ್‌ 19ರ ಆಶ್ರಮದಲ್ಲಿ ಶನಿವಾರ (ಫೆ. 15) ಬೆಂಕಿ ಕಾಣಿಸಿಕೊಂಡಿದೆ. ಹಲವು ಡೇರೆಗಳಿಗೆ ಹರಡಿದ ಬೆಂಕಿಯನ್ನು ಅಗ್ನಿ ಶಾಮಕದಳದ ಸಿಬ್ಬಂದಿ ಧಾವಿಸಿ ನಂದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಯಾಗ್‌ರಾಜ್‌ನಲ್ಲಿ ಮತ್ತೊಂದು ಅಗ್ನಿ ಅವಘಢ

ಸಾಂದರ್ಭಿಕ ಚಿತ್ರ.

Profile Ramesh B Feb 15, 2025 9:23 PM

ಲಖನೌ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌(Prayagraj)ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದ್ದು, ಸೆಕ್ಟರ್‌ 19ರ ಆಶ್ರಮದಲ್ಲಿ ಶನಿವಾರ (ಫೆ. 15) ಬೆಂಕಿ ಕಾಣಿಸಿಕೊಂಡಿದೆ (Maha Kumbh Fire). ಹಲವು ಡೇರೆಗಳಿಗೆ ಹರಡಿದ ಬೆಂಕಿಯನ್ನು ಅಗ್ನಿ ಶಾಮಕದಳದ ಸಿಬ್ಬಂದಿ ನಂದಿಸಿದ್ದಾರೆ. ಪ್ರಯಾಗ್‌ರಾಜ್‌ ಎಡಿಜಿ ಭಾನು ಭಾಸ್ಕರ್‌ ಮಾಹಿತಿ ನೀಡಿ, ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ.
ಪ್ರಸ್ತುತ ಬೆಂಕಿಯನ್ನು ನಿಯಂತ್ರಿಸಲಾಗಿದೆ ಎಂದು ತಿಳಿಸಿದ್ದಾರೆ. ʼʼಬೆಂಕಿ ಕಾಣಿಸಿಕೊಂಡ ಮಾಹಿತಿ ಬಂದ ತಕ್ಷಣ ಅಗ್ನಿ ಶಾಮಕ ದಳದ ಸಿಬ್ಬಂದಿ ಮತ್ತು ಇತರ ತುರ್ತು ವಿಭಾಗದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಇದೀಗ ಬೆಂಕಿ ನಿಯಂತ್ರಣಕ್ಕೆ ಬಂದಿದೆʼʼ ಎಂದು ತಿಳಿಸಿದ್ದಾರೆ. ʼʼಅಧಿಕೃತ ಮಾಹಿತಿ ಪ್ರಕಾರ ಯಾರಿಗೂ ಯಾವುದೇ ರೀತಿಯ ಹಾನಿಯಾಗಿಲ್ಲ. ತನಿಖೆ ನಡೆಯುತ್ತಿದೆʼʼ ಎಂದಿದ್ದಾರೆ.

ಫೆ. 13ರಂದು ಮಹಾ ಕುಂಭಮೇಳದ ನಡೆಯುವ ಸ್ಥಳದ 2 ಕಡೆಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಶಂಕರಾಚಾರ್ಯ ಮಾರ್ಗದಲ್ಲಿರುವ ಹರಿಗರಾನಂದ ಶಿಬಿರದಲ್ಲಿ 20ಕ್ಕೂ ಹೆಚ್ಚು ಡೇರೆಗಳಿಗೆ ಬೆಂಕಿ ಆವರಿಸಿದ್ದವು. ಕೂಡಲೇ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಿಯಂತ್ರಿಸಿದ್ದರು. ಯಾವುದೇ ಸಾವು-ನೋವು ಸಂಭವಿಸಿರಲಿಲ್ಲ.



ಈ ಸುದ್ದಿಯನ್ನೂ ಓದಿ: Fire Accident: ಪ್ರಯಾಗ್‌ರಾಜ್‌ನಲ್ಲಿ ಮತ್ತೆ ಬೆಂಕಿ ಅವಘಡ-ಹೊತ್ತಿ ಉರಿದ ಕಾರುಗಳು!

ಇನ್ನು ಜ. 30ರಂದು ಪ್ರಯಾಗ್‌ರಾಜ್​ನ ಚಟ್ನಾಗ್ ಘಾಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಟೆಂಟ್​ಗಳಲ್ಲಿ ಬೆಂಕಿ ಕಾಣಿಸಿಕೊಂಡ ಮಾಹಿತಿ ಸಿಕ್ಕ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿತ್ತು. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿರಲಿಲ್ಲ. ಆದರೆ ಕೆಲವು ಸಾಧುಗಳಿಗೆ ಸುಟ್ಟ ಗಾಯಗಳಾಗಿದ್ದವು.

ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದು ತಿಳಿದು ಬಂದಿರಲಿಲ್ಲ. ಕೆಲವು ದಿನಗಳ ಹಿಂದಷ್ಟೇ ಸಿಲಿಂಡರ್ ಬ್ಲಾಸ್ಟ್​ ಆಗಿ ಇದೇ ಕುಂಭಮೇಳದಲ್ಲಿ ದೊಡ್ಡ ಮಟ್ಟದ ಬೆಂಕಿ ಅವಘಢ ಸಂಭವಿಸಿತ್ತು. ಟೆಂಟ್‌ನಲ್ಲಿ ಅಡುಗೆ ಮಾಡುವಾಗ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿ ಟೆಂಟ್‌ಗಳನ್ನು ಆವರಿಸಿ ಅದರಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್‌ಗಳಲ್ಲಿ ನಿರಂತರ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 20ರಿಂದ 25 ಟೆಂಟ್‌ಗಳು ಸುಟ್ಟು ಕರಕಲಾಗಿದ್ದವು. ಅಖಾಡದ ಮುಂಭಾಗದ ರಸ್ತೆಯ ಕಬ್ಬಿಣದ ಸೇತುವೆಯ ಕೆಳಗೆ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ದಳವೂ ಸ್ಥಳಕ್ಕೆ ತಲುಪಿತ್ತು. ಬಳಿಕ ಆ ಪ್ರದೇಶವನ್ನು ಸೀಲ್ ಮಾಡಲಾಗಿತ್ತು.