ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

24 ಭಾರತೀಯ ನಾವಿಕರನ್ನು ಹೊತ್ತೊಯ್ಯುತ್ತಿದ್ದ ತೈಲ ಟ್ಯಾಂಕರ್‌ನಲ್ಲಿ ಬೆಂಕಿ ಅವಘಡ; ತಪ್ಪಿದ ಭಾರಿ ದುರಂತ

Fire Breaks Out on Oil Tanker: ಪರ್ಷಿಯನ್ ಕೊಲ್ಲಿಯಲ್ಲಿ 24 ಭಾರತೀಯ ನಾವಿಕರನ್ನು ಹೊತ್ತೊಯ್ಯುತ್ತಿದ್ದ ತೈಲ ಟ್ಯಾಂಕರ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಎಲ್ಲ ಭಾರತೀಯ ನಾವಿಕರು ಪ್ರಸ್ತುತ ಸುರಕ್ಷಿತವಾಗಿದ್ದಾರೆ ಎಂದು ಬಂದರು, ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವಾಲಯದ ಹಡಗು ಸಾಗಣೆ ವಿಭಾಗದ ನಿರ್ದೇಶಕ ಓಪೇಶ್ ಕುಮಾರ್ ಶರ್ಮಾ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ

ನವದೆಹಲಿ, ಜೂ. 8: ಪರ್ಷಿಯನ್ ಕೊಲ್ಲಿಯಲ್ಲಿ 24 ಭಾರತೀಯ ನಾವಿಕರನ್ನು ಹೊತ್ತೊಯ್ಯುತ್ತಿದ್ದ ತೈಲ ಟ್ಯಾಂಕರ್‌ನಲ್ಲಿ ಬೆಂಕಿ ಅವಘಡ (Fire Breaks Out on Oil Tanker) ಸಂಭವಿಸಿದ್ದು, ಅದೃಷ್ಟವಶಾತ್‌ ಭಾರಿ ದುರಂತ ತಪ್ಪಿದೆ. ಎಲ್ಲ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ತಿಳಿಸಿದೆ. ಪರ್ಷಿಯನ್ ಕೊಲ್ಲಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಭಾರತೀಯ ಹಡಗುಗಳು ಮತ್ತು ಸಿಬ್ಬಂದಿಯ ಮೇಲೆ ನಿಕಟ ನಿಗಾ ವಹಿಸಲಾಗಿದೆ ಎಂದು ಬಂದರು, ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವಾಲಯದ ಹಡಗು ಸಾಗಣೆ ವಿಭಾಗದ ನಿರ್ದೇಶಕ ಓಪೇಶ್ ಕುಮಾರ್ ಶರ್ಮಾ (Opesh Kumar Sharma) ಮಾಹಿತಿ ನೀಡಿದ್ದಾರೆ.

ಸೋಮವಾರ (ಜೂ. 8) ಮಧ್ಯಾಹ್ನ 1:30ರ ಸುಮಾರಿಗೆ 24 ಭಾರತೀಯ ನಾವಿಕರಿದ್ದ ಎಂಟಿ ಮಾರಿವೆಕ್ಸ್ ಎಂಬ ಹಡಗಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ಶರ್ಮಾ ಹೇಳಿದ್ದಾರೆ. ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಮಧ್ಯೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಸಮುದ್ರದಲ್ಲಿ ಭಾರತೀಯ ಪ್ರಜೆಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹಲವು ಸರ್ಕಾರಿ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಇಲ್ಲಿದೆ ವಿಡಿಯೊ:



ʼʼಇದು ನಮಗೆ ಬಂದಿರುವ ಪ್ರಾಥಮಿಕ ಮಾಹಿತಿಯಾಗಿದ್ದು, ಅದರ ಪ್ರಕಾರ, ಎಲ್ಲ ಭಾರತೀಯ ನಾವಿಕರು ಪ್ರಸ್ತುತ ಸುರಕ್ಷಿತವಾಗಿದ್ದಾರೆʼʼ ಎಂದು ಶರ್ಮಾ ಹೇಳಿದರು. ಹಡಗು ಸಾಗಣೆ ಸಚಿವಾಲಯವು ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಹಾಗೂ ಅಗತ್ಯವಿದ್ದರೆ ಸಿಬ್ಬಂದಿಗೆ ನೆರವು ನೀಡಲು ಇತರ ಇಲಾಖೆಗಳು ಮತ್ತು ವಿದೇಶದಲ್ಲಿರುವ ಭಾರತೀಯ ರಾಯಭಾರಿ ಕಚೇರಿಗಳೊಂದಿಗೆ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದೆ.

ಹಾರ್ಮುಜ್ ಜಲಸಂಧಿ ದಾಟಿದ ಮೊದಲ ಭಾರತೀಯ ಗ್ಯಾಸ್ ಟ್ಯಾಂಕರ್ ‘ಜಗ್ ವಿಕ್ರಮ್’

ಇದಕ್ಕೂ ಮೊದಲು, ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿ, ಪರ್ಷಿಯನ್ ಕೊಲ್ಲಿಯಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಎಲ್ಲ ಭಾರತೀಯ ಹಡಗುಗಳು ಮತ್ತು ಸಿಬ್ಬಂದಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಈ ಪ್ರದೇಶದ ಎಲ್ಲ ಭಾರತೀಯ ನಾವಿಕರು ಸುರಕ್ಷಿತವಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಅಗತ್ಯವಿದ್ದರೆ ಸಿಬ್ಬಂದಿಗೆ ಬೆಂಬಲ ನೀಡಲು ಇತರ ಇಲಾಖೆಗಳು ಮತ್ತು ವಿದೇಶದಲ್ಲಿರುವ ಭಾರತೀಯ ಕಾರ್ಯಾಚರಣೆಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವುದಾಗಿ ಹಡಗು ಸಚಿವಾಲಯ ತಿಳಿಸಿದೆ. “ನಾವು ವಿದೇಶಾಂಗ ಸಚಿವಾಲಯ, ವಿದೇಶದಲ್ಲಿರುವ ನಮ್ಮ ಭಾರತೀಯ ಕಾರ್ಯಾಚರಣೆಗಳು, ಭಾರತೀಯ ನೌಕಾಪಡೆ, ರಕ್ಷಣಾ ಸಚಿವಾಲಯದೊಂದಿಗೆ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಮನ್ವಯ ಸಾಧಿಸುತ್ತಿದ್ದೇವೆ” ಎಂದು ಶರ್ಮಾ ಹೇಳಿದರು.

ಇದಕ್ಕೂ ಮೊದಲು, ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿ, ಪರ್ಷಿಯನ್ ಕೊಲ್ಲಿಯಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಎಲ್ಲ ಭಾರತೀಯ ಹಡಗುಗಳು ಮತ್ತು ಸಿಬ್ಬಂದಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಈ ಪ್ರದೇಶದ ಎಲ್ಲ ಭಾರತೀಯ ನಾವಿಕರು ಸುರಕ್ಷಿತವಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.