ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದೆಹಲಿಯ ಕೇಂದ್ರ ಗೃಹ ಸಚಿವಾಲಯ ಕಟ್ಟಡದಲ್ಲಿ ಬೆಂಕಿ ಅವಘಡ; ಸ್ಥಳದಲ್ಲಿ ದಟ್ಟವಾಗಿ ಆವರಿಸಿದ ಹೊಗೆ

ದೆಹಲಿಯ ಪ್ರಮುಖ ಸರ್ಕಾರಿ ಆಡಳಿತ ಕಟ್ಟಡವಾದ ನಾರ್ತ್ ಬ್ಲಾಕ್‌ನ ಚಾವಣಿಯಲ್ಲಿದ್ದ ಹಳೆಯ ಪ್ಲಾಸ್ಟಿಕ್ ನೀರಿನ ಟ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಳಗ್ಗೆ 11.10ರ ಸುಮಾರಿಗೆ ದಟ್ಟ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಯಿತು. ಕಟ್ಟಡದಲ್ಲಿ ನವೀಕರಣ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕರು ಬೆಂಕಿಯನ್ನು ನಂದಿಸಲು ಮುಂದಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ರಾಜ್ಯಸಭಾ ಸಂಸದ ಮಿಲಿಂದ್ ದೇವೋರಾ ಕಟ್ಟಡದ ಹಿಂಭಾಗದಿಂದ ಹೊಗೆ ಏಳುತ್ತಿರುವುದನ್ನು ಗಮನಿಸಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ.

ದೆಹಲಿಯ ಕೇಂದ್ರ ಗೃಹ ಸಚಿವಾಲಯದ ಕಟ್ಟಡದಲ್ಲಿ ಬೆಂಕಿ

ದೆಹಲಿಯ ನಾರ್ತ್ ಬ್ಲಾಕ್‌ನಲ್ಲಿ ಬೆಂಕಿ ಅವಘಡ -

Profile
Sushmitha Jain Oct 26, 2026 5:20 PM

ನವದೆಹಲಿ, ಅ. 20: ರಾಷ್ಟ್ರ ರಾಜಧಾನಿ ದೆಹಲಿಯ ಪ್ರಮುಖ ಸರ್ಕಾರಿ ಆಡಳಿತ ಕಟ್ಟಡವಾದ ನಾರ್ತ್ ಬ್ಲಾಕ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಆತಂಕಕ್ಕೆ ಕಾರಣವಾಗಿದೆ. ಕೇಂದ್ರ ಗೃಹ ಸಚಿವಾಲಯ ಮತ್ತು ಹಣಕಾಸು ಸಚಿವಾಲಯದ ಕಚೇರಿಗಳನ್ನು ಹೊಂದಿರುವ ಈ ಐತಿಹಾಸಿಕ ಕಟ್ಟಡದ ಮೇಲ್ಭಾಗದಿಂದ ದಟ್ಟ ಹೊಗೆ ಏಳುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ತಕ್ಷಣ ಕಾರ್ಯಾಚರಣೆ ಆರಂಭಿಸಿದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲ.

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ನಾರ್ತ್ ಬ್ಲಾಕ್ ಕಟ್ಟಡದ ಚಾವಣಿಯಲ್ಲಿ ನವೀಕರಣ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಹಲವು ಕಾರ್ಮಿಕರು ಸ್ಥಳದಲ್ಲಿದ್ದರು. ಕಟ್ಟಡದ ಚಾವಣಿಯಲ್ಲಿದ್ದ ಹಳೆಯ ಪ್ಲಾಸ್ಟಿಕ್ ನೀರಿನ ಟ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರ್ಮಿಕರು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಸದ ಮಿಲಿಂದ್ ದೇವೋರಾ ಅವರ ಎಕ್ಸ್‌ ಪೋಸ್ಟ್‌:



ಅಕ್ಟೋಬರ್‌ 26ರ ಬೆಳಗ್ಗೆ 11.10ರ ಸುಮಾರಿಗೆ ಕಟ್ಟಡದಿಂದ ಹೊಗೆ ಬರುತ್ತಿರುವ ಕುರಿತು ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಆರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಯಿತು ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಬೆಂಕಿ ಮತ್ತಷ್ಟು ಹರಡುವುದನ್ನು ತಡೆಯಲು ಕ್ರಮ ಕೈಗೊಂಡರು.

ಸಂಸತ್ತಿಗೆ ತೆರಳುತ್ತಿದ್ದ ಸಂಸದರಿಂದ ಮಾಹಿತಿ

ರಾಜ್ಯಸಭಾ ಸಂಸದ ಮಿಲಿಂದ್ ದೇವೋರಾ ಸಂಸತ್ತಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ನಾರ್ತ್ ಬ್ಲಾಕ್ ಕಟ್ಟಡದ ಹಿಂಭಾಗದಿಂದ ದಟ್ಟ ಹೊಗೆ ಏಳುತ್ತಿರುವುದನ್ನು ಗಮನಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಡೇಟಿಂಗ್ ಆ್ಯಪ್‌ ವಂಚನೆ ತಡೆಯಲು ಕೇಂದ್ರದ ಜತೆ ಕೈ ಜೋಡಿಸಿದ ಟಿಂಡರ್

ನಾರ್ತ್ ಬ್ಲಾಕ್‌ನ ಹಿಂಭಾಗದಿಂದ ದಟ್ಟ ಹೊಗೆ ಏಳುತ್ತಿರುವುದನ್ನು ಗಮನಿಸಿದ್ದೇನೆ. ಅಲ್ಲಿ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆಯಿದೆ. ಎಲ್ಲರೂ ಸುರಕ್ಷಿತವಾಗಿರಲಿ ಮತ್ತು ತುರ್ತು ಸೇವೆಗಳು ತ್ವರಿತವಾಗಿ ಕಾರ್ಯನಿರ್ವಹಿಸಲಿ ಎಂದು ಆಶಿಸುತ್ತೇನೆ ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಏನಿದು ನಾರ್ತ್ ಬ್ಲಾಕ್ ಕಟ್ಟಡ?

ದೆಹಲಿಯ ಪ್ರಮುಖ ಆಡಳಿತ ಪ್ರದೇಶದಲ್ಲಿರುವ ನಾರ್ತ್ ಬ್ಲಾಕ್ ಬ್ರಿಟಿಷರ ಕಾಲದಲ್ಲಿ ನಿರ್ಮಿಸಲಾದ ಐತಿಹಾಸಿಕ ಸರ್ಕಾರಿ ಕಟ್ಟಡ. ಇದು ಭಾರತದ ಕೇಂದ್ರ ಸರ್ಕಾರದ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಕೇಂದ್ರ ಗೃಹ ಸಚಿವಾಲಯ ಸೇರಿ ಪ್ರಮುಖ ಸರ್ಕಾರಿ ಇಲಾಖೆಗಳ ಕಚೇರಿಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ.

ದೇಶದ ಆಂತರಿಕ ಭದ್ರತೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಆಡಳಿತಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಸಚಿವಾಲಯಗಳ ಕಚೇರಿಗಳು ಈ ಕಟ್ಟಡದಲ್ಲಿರುವುದರಿಂದ ಇಲ್ಲಿ ಸಂಭವಿಸುವ ಯಾವುದೇ ಘಟನೆ ಮಹತ್ವ ಪಡೆದುಕೊಳ್ಳುತ್ತದೆ.

ಸದ್ಯ ಲಭ್ಯವಿರುವ ಮಾಹಿತಿಯ ಪ್ರಕಾರ, ಚಾವಣಿಯಲ್ಲಿದ್ದ ಹಳೆಯ ಪ್ಲಾಸ್ಟಿಕ್ ನೀರಿನ ಟ್ಯಾಂಕ್‌ಗೆ ಬೆಂಕಿ ತಗುಲಿತ್ತು. ಕಾರ್ಮಿಕರು ಬೆಂಕಿಯನ್ನು ನಂದಿಸಿದ್ದು, ಅಗ್ನಿಶಾಮಕ ಸಿಬ್ಬಂದಿಯೂ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.