ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ಪ್ರಕರಣ; ಆರೋಪಿಯ ಫೋಟೋ ರಿಲೀಸ್‌

ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಮೇಲೆ ಮುುಂಬೈನ ಜುಹೂ ಪ್ರದೇಶದಲ್ಲಿ ಭಾನುವಾರ ಸಂಜೆ ಗುಂಡಿನ ದಾಳಿ ನಡೆದಿದ್ದು, ಮೋಟಾರ್ ಸೈಕಲ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅವರ ಕಾರನ್ನು ಗುರಿಯಾಗಿಸಿ 5 ಸುತ್ತು ಗುಂಡು ಹಾರಿಸಿದ್ದಾರೆ. ನಟನನ್ನು ಗುರಿಯಾಗಿಸಿಕೊಂಡು ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾಗಿರುವ ಆರೋಪಿಗಳ ಮೊದಲ ಫೋಟೋ ಇದೀಗ ಬಹಿರಂಗವಾಗಿದೆ.

ಟೈಗರ್‌ ಶ್ರಾಫ್‌ ಮೇಲೆ ಗುಂಡಿನ ದಾಳಿ

ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ( Tiger Shroff) ಅವರ ಮೇಲೆ ಮುುಂಬೈನ ಜುಹೂ ಪ್ರದೇಶದಲ್ಲಿ ಭಾನುವಾರ ಸಂಜೆ ಗುಂಡಿನ ದಾಳಿ ನಡೆದಿದ್ದು, ಮೋಟಾರ್ ಸೈಕಲ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅವರ ಕಾರನ್ನು ಗುರಿಯಾಗಿಸಿ 5 ಸುತ್ತು ಗುಂಡು ಹಾರಿಸಿದ್ದಾರೆ. ನಟ ಪ್ರಾಣಾಪಾಯದಿಂದ ಪಾರಾಗಿದ್ದು, ಗುಂಡಿನ ದಾಳಿಯಲ್ಲಿ ಟೈಗರ್ ಶ್ರಾಫ್ ಅವರಿಗೆ ಯಾವುದೇ ಬುಲೆಟ್ ತಗುಲಿಲ್ಲ. ಆದರೆ, ಗನ್‌ಪೌಡರ್ ಮತ್ತು ಕಾರಿನ ಗಾಜಿನ ಚೂರುಗಳು ಸಿಡಿದಿದ್ದರಿಂದ ಅವರ ಎಡಗೈಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ನಟ ಟೈಗರ್ ಶ್ರಾಫ್ ಅವರನ್ನು ಗುರಿಯಾಗಿಸಿಕೊಂಡು ನಡೆದ ಗುಂಡಿನ ದಾಳಿಯಲ್ಲಿ ಭಾಗಿಯಾಗಿರುವ ಆರೋಪಿಗಳ ಮೊದಲ ಫೋಟೋ ಇದೀಗ ಬಹಿರಂಗವಾಗಿದೆ. ಘಟನಾ ಸ್ಥಳದ ಬಳಿ ಸೆರೆಹಿಡಿಯಲಾಗಿದೆ ಎಂದು ಹೇಳಲಾದ ಫೋಟೋದಲ್ಲಿ ಇಬ್ಬರು ಪುರುಷರು ಬಿಳಿ ಶರ್ಟ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರಲ್ಲಿ ಒಬ್ಬರು ಪೂಮಾ ಲೋಗೋ ಹೊಂದಿರುವ ಕಪ್ಪು ಟೋಪಿ ಧರಿಸಿರುವುದು ಕಂಡುಬಂದಿದೆ. ಅಧಿಕಾರಿಗಳು ಇನ್ನೂ ಅವರ ಗುರುತನ್ನು ಪತ್ತೆ ಹಚ್ಚಿಲ್ಲ.

ದಾಳಿ ನಡೆಸಲು ಶೂಟರ್‌ಗಳು ಬಳಸಿದ್ದ ಮೋಟಾರ್ ಸೈಕಲ್ ಅನ್ನು ಪೊಲೀಸರು ಅಂಧೇರಿ ರೈಲ್ವೆ ನಿಲ್ದಾಣದ ಬಳಿ ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಬೈಕ್ ಅನ್ನು ಅಲ್ಲೇ ಬಿಟ್ಟು, ಸಾರ್ವಜನಿಕ ಸಾರಿಗೆಯ ಮೂಲಕ ಮುಂಬೈನಿಂದ ಹೊರಹೋಗಲು ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಹೀಗಾಗಿ ಬಸ್ ಹಾಗೂ ರೈಲು ನಿಲ್ದಾಣಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆವಾಹನದ ನಂಬರ್ ಪ್ಲೇಟ್ ಮತ್ತು ನೋಂದಣಿ ವಿವರಗಳನ್ನು ಬಳಸಿಕೊಂಡು ಪೊಲೀಸ ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸರು ಜಾಲಾಡುತ್ತಿದ್ದು, ಆರೋಪಿಗಳ ಓಡಾಟದ ಹಾದಿಯನ್ನು ಪತ್ತೆ ಹಚ್ಚುತ್ತಿದ್ದಾರೆ.

ದಾಳಿಯ ನಂತರ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮುಂಬೈನಲ್ಲಿರುವ ಟೈಗರ್ ಶ್ರಾಫ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಶಿಂಧೆ ಘಟನೆಯನ್ನು ಖಂಡಿಸಿದರು, ನಟ ಮತ್ತು ಅವರ ಕುಟುಂಬಕ್ಕೆ ಸರ್ಕಾರದ ಸಂಪೂರ್ಣ ಬೆಂಬಲದ ಭರವಸೆ ನೀಡಿದ್ದಾರೆ.

Vishakha Bhat Heggar

View all posts by this author