ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Sindoor: LOC ಬಳಿ ಪಾಕ್‌ ಸೇನಾ ನೆಲೆ ಧ್ವಂಸ; ಮೊದಲ ದೃಶ್ಯ ಹಂಚಿಕೊಂಡ ಸೇನೆ

ಭಾರತ ಹಾಗೂ ಪಾಕಿಸ್ತಾನ (Operation Sindoor) ನಡುವೆ ಸಂಪೂರ್ಣ ಯುದ್ಧದ ವಾತಾವರಣ ಏರ್ಪಟ್ಟಿದೆ. ಗಡಿಯಾಚೆಗಿನ ಗುಂಡಿನ ದಾಳಿಗೆ ಭಾರತೀಯ ಪಡೆಗಳು ಪ್ರತಿದಾಳಿ ನಡೆಸುತ್ತಿವೆ. ನಿಯಂತ್ರಣ ರೇಖೆಯ ಉದ್ದಕ್ಕೂ ಹಲವಾರು ಪಾಕಿಸ್ತಾನಿ ಸೇನಾ ನೆಲೆಗಳು ನಾಶವಾಗಿವೆ ಎಂದು ಮೂಲಗಳು ತಿಳಿಸಿವೆ. ಭಾರತದ ಹಲವಾರು ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳು ನಡೆಸಿದೆ.

LOC ಬಳಿ ಪಾಕ್‌ ಸೇನಾ ನೆಲೆ ಧ್ವಂಸ; ವಿಡಿಯೋ ವೈರಲ್‌

Profile Vishakha Bhat May 9, 2025 8:55 AM

ನವದೆಹಲಿ: ಭಾರತ ಹಾಗೂ ಪಾಕಿಸ್ತಾನ (Operation Sindoor) ನಡುವೆ ಸಂಪೂರ್ಣ ಯುದ್ಧದ ವಾತಾವರಣ ಏರ್ಪಟ್ಟಿದೆ. ಗಡಿಯಾಚೆಗಿನ ಗುಂಡಿನ ದಾಳಿಗೆ ಭಾರತೀಯ ಪಡೆಗಳು ಪ್ರತಿದಾಳಿ ನಡೆಸುತ್ತಿವೆ. ನಿಯಂತ್ರಣ ರೇಖೆಯ ಉದ್ದಕ್ಕೂ ಹಲವಾರು ಪಾಕಿಸ್ತಾನಿ ಸೇನಾ ನೆಲೆಗಳು ನಾಶವಾಗಿವೆ ಎಂದು ಮೂಲಗಳು ತಿಳಿಸಿವೆ. ಭಾರತದ ಹಲವಾರು ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳು ನಡೆಸಿದೆ. ಅದನ್ನು ಭಾರತ ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾಗಿದೆ. ಇದೀಗ ನಿಯಂತ್ರಣ ರೇಖೆಯಾದ್ಯಂತ ಪಾಕಿಸ್ತಾನದ ಮಿಲಿಟರಿ ನೆಲೆ ನಾಶವಾದ ಮೊದಲ ದೃಶ್ಯವನ್ನು ಭಾರತೀಯ ಸೇನೆ ಹಂಚಿಕೊಂಡಿದೆ.

ಸೇನೆಯು ನಿರಂತರ ಕದನ ವಿರಾಮ ಉಲ್ಲಂಘನೆಗಳಿಗೆ ಪರಿಣಾಮಕಾರಿ ಪ್ರತ್ಯುತ್ತರ ನೀಡುತ್ತಿದೆ. "ಪಾಕಿಸ್ತಾನ ಸಶಸ್ತ್ರ ಪಡೆಗಳು ಮೇ 08 ಮತ್ತು 09, 2025 ರ ಮಧ್ಯರಾತ್ರಿ ಇಡೀ ಪಶ್ಚಿಮ ಗಡಿಯಲ್ಲಿ ಡ್ರೋನ್‌ಗಳು ಮತ್ತು ಇತರ ಯುದ್ಧಸಾಮಗ್ರಿಗಳನ್ನು ಬಳಸಿ ಅನೇಕ ದಾಳಿಗಳನ್ನು ನಡೆಸಿದವು. ಪಾಕ್ ಪಡೆಗಳು ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಹಲವಾರು ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿವೆ ಎಂದು ಸೇನೆ ಹೇಳಿದೆ. ಭಾರತೀಯ ಸೇನೆಯು ರಾಷ್ಟ್ರದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಲು ಬದ್ಧವಾಗಿದೆ. ಎಲ್ಲಾ ದುಷ್ಟ ಪ್ರಯತ್ನಗಳಿಗೆ ಸರಿಯಾಗಿ ಉತ್ತರ ನೀಡುತ್ತಿದ್ದೇವೆ ಎಂದು ಸೇನೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.



ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಗಡಿಯುದ್ದಕ್ಕೂ ನುಸುಳುವಿಕೆ ಪ್ರಯತ್ನವನ್ನು ಭಾರತದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ವಿಫಲಗೊಳಿಸಿದೆ. ಗಡಿ ಪ್ರದೇಶಗಳ ಸಮೀಪವಿರುವ ಅನೇಕ ನಗರಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ. ಶ್ರೀನಗರ, ಜಮ್ಮು ಮತ್ತು ಪಂಜಾಬ್ ಮತ್ತು ರಾಜಸ್ಥಾನದ ಹಲವಾರು ಸ್ಥಳಗಳಲ್ಲಿ ರಾತ್ರಿಯಿಡೀ ವಿದ್ಯುತ್ ಕಡಿತಗೊಂಡ ವರದಿಯಾಗಿದೆ.ಪಾಕಿಸ್ತಾನಿ ಸೇನೆಯು ನಿನ್ನೆ ರಾತ್ರಿ ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್‌ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಆದಂಪುರ, ಭಟಿಂಡಾ, ಚಂಡೀಗಢ, ನಲ್, ಫಲೋಡಿ, ಉತ್ತರಲೈ ಮತ್ತು ಭುಜ್‌ಗಳನ್ನು ಗುರಿಯಾಗಿಸಲು ಪ್ರಯತ್ನಿಸಿತು. ಈ ಪ್ರಯತ್ನಗಳನ್ನು ಭಾರತೀಯ ವಾಯುಸೇನೆ ವಿಫಲಗೊಳಿಸಿದೆ.

ಈ ಸುದ್ದಿಯನ್ನೂ ಓದಿ: Operation Sindoor: ಭಾರತದ ಆಪರೇಷನ್ ಸಿಂದೂರ್‌ ಬಳಿಕ ಪಾಕಿಸ್ತಾನಿಗಳು ಗೂಗಲ್‌ನಲ್ಲಿ ಹುಡುಕುತ್ತಿರೋದು ಏನು?

ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ತೀವ್ರಗೊಂಡಿದ್ದರಿಂದ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಎಲ್ಲಾ ನಗರ ಸರ್ಕಾರಿ ನೌಕರರ ರಜೆಗಳನ್ನು ರದ್ದುಪಡಿಸಲಾಗಿದೆ, ಜಮ್ಮು ಸೇರಿದಂತೆ ಹಲವಾರು ಗಡಿ ಪ್ರದೇಶಗಳು ಗಡಿಯಾಚೆಗಿನ ಶೆಲ್ ದಾಳಿಗೆ ಒಳಗಾಗಿವೆ. ಇಂಡಿಯಾ ಗೇಟ್‌ನಲ್ಲಿ ಓಡಾಡುವವರನ್ನು ಅಲ್ಲಿಂದ ತೆರಳುವಂತೆ ಗುರುವಾರ ಮಧ್ಯರಾತ್ರಿ ಸೂಚಿಸಲಾಗಿದೆ. ಜನರು ಆ ಪ್ರದೇಶದಿಂದ ಹೊರಹೋಗುವಂತೆ ಪೊಲೀಸರು ಘೋಷಣೆಗಳನ್ನು ಮಾಡಿದ್ದಾರೆ. ಈಗಾಗಲೇ ಭಾರತ ಪಾಕಿಸ್ತಾನದ 12 ನಗರಗಳ ಮೇಲೆ ದಾಳಿ ನಡೆಸಿದ್ದು, ಕಾರ್ಯಾಚರಣೆ ಇನ್ನೂ ನಡೆಯುತ್ತಲಿದೆ.