ಗನ್ ತೋರಿಸಿ ಬಿಜೆಪಿ ಮಾಜಿ ಶಾಸಕನಿಂದ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಸಾಥ್ ನೀಡಿದ ಪೊಲೀಸ್ ಸಿಬ್ಬಂದಿ ಮೇಲೂ ಎಫ್ಐಆರ್
ರಕ್ಷಕರೇ ಭಕ್ಷಕರಾಗಿರುವ ಘಟನೆ ಥಾಣೆಯ ಕಲ್ಯಾಣ್ ಪ್ರದೇಶದಲ್ಲಿ ನಡೆದಿದೆ. ಮಹಿಳೆಯನ್ನು ಒತ್ತೆಯಾಳಾಗಿರಿಸಿಕೊಂಡು ಬಲವಂತವಾಗಿ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪದಲ್ಲಿ ಬಿಜೆಪಿ ಮಾಜಿ ಶಾಸಕ ಮತ್ತು ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ನರೇಂದ್ರ ಪವಾರ್ ಮತ್ತು ಶೈಲೇಶ್ ಪಾಟೀಲ್ ಎಂದು ಗುರುತಿಸಲಾಗಿದೆ.
ಸಂಗ್ರಹ ಚಿತ್ರ -
ಥಾಣೆ: ಬಲವಂತವಾಗಿ ಮದ್ಯ ಕುಡಿಸಿ, ಬಂದೂಕು ಗುರಿಯಿಟ್ಟು ಮಹಿಳೆಯೊಬ್ಬರ ಮೇಲೆ ಅತ್ಯಾಚಾರ (physical abuse case) ನಡೆಸಿದ್ದಾರೆ ಎನ್ನುವ ಆರೋಪದ ಮೇರೆಗೆ ಬಿಜೆಪಿ ಮಾಜಿ ಶಾಸಕ (former BJP MLA) ಹಾಗೂ ಮಾಜಿ ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಘಟನೆ ಮಹಾರಾಷ್ಟ್ರದ ಥಾಣೆಯ (Thane) ಕಲ್ಯಾಣ್ ಪ್ರದೇಶದಲ್ಲಿ ನಡೆದಿದೆ. ಕಲ್ಯಾಣ್ ಪಶ್ಚಿಮ ಕ್ಷೇತ್ರದ ಮಾಜಿ ಶಾಸಕ ನರೇಂದ್ರ ಪವಾರ್ (Narendra Pawar) ಮತ್ತು ಸೇವೆಯಿಂದ ವಜಾಗೊಂಡಿರುವ ಪೊಲೀಸ್ ಕಾನ್ಸ್ಟೇಬಲ್ ಶೈಲೇಶ್ ಪಾಟೀಲ್ (Shailesh Patil) ಎಂಬವರ ವಿರುದ್ಧ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ದೂರು ದಾಖಲಿಸಲಾಗಿದೆ ಎಂದು ಪಡ್ಘಾ ಠಾಣೆ (Padgha Police Station) ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಗುರುವಾರ ಮಾಹಿತಿ ನೀಡಿದ ಪೊಲೀಸರು, 22 ವರ್ಷದ ಮಹಿಳೆಯೊಬ್ಬರ ಮೇಲೆ ಬಂದೂಕು ಇರಿಸಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಜಿಲ್ಲೆಯ ಮಾಜಿ ಬಿಜೆಪಿ ಶಾಸಕ ನರೇಂದ್ರ ಪವಾರ್ ಮತ್ತು ಸೇವೆಯಿಂದ ವಜಾಗೊಂಡ ಪೊಲೀಸ್ ಕಾನ್ಸ್ಟೇಬಲ್ ವಿರುದ್ಧ ಶೈಲೇಶ್ ಪಾಟೀಲ್ ವಿರುದ್ಧ ಈ ಆರೋಪ ಕೇಳಿಬಂದಿದೆ ಎಂದು ಹೇಳಿದರು.
ಮದುವೆ ಆಮಿಷ ಒಡ್ಡಿ ಯುವತಿಗೆ ವಂಚನೆ; ಮಾಜಿ ಸಚಿವ ಡಿ. ಸುಧಾಕರ್ ಸಹೋದರನ ಕುಟುಂಬದ ವಿರುದ್ಧ ಎಫ್‌ಐಆರ್
ಈ ಆರೋಪವನ್ನು ತಿರಸ್ಕರಿಸಿರುವ ಕಲ್ಯಾಣ್ ಪಶ್ಚಿಮ ಕ್ಷೇತ್ರದ ಮಾಜಿ ಶಾಸಕ ಪವಾರ್, ಇದೊಂದು ಸುಳ್ಳು ಮತ್ತು ರಾಜಕೀಯ ಪ್ರೇರಿತ. ತಾವು ಈ ಕೂಡಲೇ ಪಕ್ಷದ ಹುದ್ದೆಗಳಿಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಆರೋಪಿಗಳನ್ನು ಗುರುತಿಸಲಾಗಿದ್ದು, ಇನ್ನಷ್ಟೇ ಬಂಧಿಸಬೇಕಿದೆ ಎಂದರು.
ಮಹಿಳೆ ನೀಡಿರುವ ದೂರಿನ ಪ್ರಕಾರ, ಭಿವಂಡಿಯ ಬಾಪ್‌ಗಾಂವ್‌ನಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ವೈವಾಹಿಕ ಜೀವನದಲ್ಲಿ ಕೆಲವು ಸಮಸ್ಯೆಗಳು ಎದುರಾಗಿದ್ದು, ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಪವಾರ್ ಅವರು ತಮ್ಮನ್ನು ಕಚೇರಿಗೆ ಕರೆಸಿದ್ದಾರೆ. ಇದರ ಬಳಿಕ ಸೆಪ್ಟೆಂಬರ್ 13 ರಂದು ಪವಾರ್ ಮತ್ತು ಪಾಟೀಲ್ ಬಾಪ್‌ಗಾಂವ್ ಫಾರ್ಮ್‌ಹೌಸ್‌ಗೆ ಕರೆದುಕೊಂಡು ಹೋಗಿ ಬಂದೂಕಿನಿಂದ ಬೆದರಿಸಿ, ಬಲವಂತವಾಗಿ ಮದ್ಯಪಾನ ಮಾಡಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇದರ ಬಳಿಕ ಅವರ ಸಹಚರನೊಬ್ಬ ತನ್ನನ್ನು ಮನೆಗೆ ಕರೆತಂದಿದ್ದಾನೆ. ಇದರ ಬಳಿಕ ಸೆಪ್ಟೆಂಬರ್ 16ರಂದು ಸಾಮಾಜಿಕ ಜಾಲತಾಣದ ಮೂಲಕ ಕಾಂಗ್ರೆಸ್ ಕಾರ್ಪೊರೇಟರ್ ಕಾಂಚನ್ ಕುಲಕರ್ಣಿ ಅವರನ್ನು ಸಂಪರ್ಕಿಸಿದ ಮಹಿಳೆ ತನಗಾದ ದೌರ್ಜನ್ಯದ ಬಗ್ಗೆ ತಿಳಿಸಿ ಇದಕ್ಕೆ ಪೂರಕವಾಗಿ ವಿಡಿಯೊ ತುಣುಕುಗಳು ಹಾಗೂ ವಾಟ್ಸಾಪ್ ಚಾಟ್‌ಗಳನ್ನು ಹಂಚಿಕೊಂಡಿರುವುದಾಗಿ ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಪೊರೇಟರ್ ಸಹಾಯದಿಂದ ಪಡ್ಘಾ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿರುವುದಾಗಿ ಎಫ್ ಐಆರ್ ನಲ್ಲಿ ತಿಳಿಸಿದ್ದಾರೆ.
ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕ ಸದಾನಂದ ದಾಟೆ ಅವರ ನಿರ್ದೇಶನದ ಮೇರೆಗೆ ಪಡ್ಘಾ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಪಂಕಜ್ ಗಿರಿ ಅವರು ವಿವರಗಳನ್ನು ಪರಿಶೀಲಿಸಿ ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ, ಶಸ್ತ್ರಾಸ್ತ್ರ ಪ್ರದರ್ಶನ ಮತ್ತು ಇತರ ಅಪರಾಧಗಳ ಆರೋಪದಡಿ ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಲದ ಶೂಲಕ್ಕೆ ಮತ್ತೊಂದು ಬಲಿ; ಬರದಿಂದ ಕೈಕೊಟ್ಟ ಬೆಳೆ: ಹಾವೇರಿಯಲ್ಲಿ ರೈತ ಆತ್ಮಹತ್ಯೆ
ಬಿಜೆಪಿಯ ರಾಜ್ಯ 'ಭಟ್ಕೆ ವಿಮುಕ್ತ ಅಘಾಡಿ' (ಅಲೆಮಾರಿ ಬುಡಕಟ್ಟುಗಳ ವಿಭಾಗ) ಮುಖ್ಯಸ್ಥರಾಗಿದ್ದ ನರೇಂದ್ರ ಪವಾರ್ ಆರೋಪಗಳನ್ನು ನಿರಾಕರಿಸಿ, ಪಕ್ಷದ ವರ್ಚಸ್ಸನ್ನು ರಕ್ಷಿಸಲು ತಾವು ತಮ್ಮ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಈ ಕುರಿತು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ರವೀಂದ್ರ ಚವಾಣ್ ಅವರಿಗೆ ಪತ್ರ ಬರೆದಿದ್ದು, ಅದನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಹಂಚಿಕೊಂಡಿದ್ದಾರೆ.