ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Fire Accident: ತಿರುಪತಿಗೆ ತೆರಳುತ್ತಿದ್ದ ಸರಕು ರೈಲಿಗೆ ಬೆಂಕಿ; 22 ಬೋಗಿಗಳಿಗೆ ಹಾನಿ

ಡೀಸೆಲ್ (Diesel) ಸಾಗಿಸುತ್ತಿದ್ದ ಸರಕು ರೈಲಿನಲ್ಲಿ (Freight train) ಬೆಂಕಿ ಕಾಣಿಸಿಕೊಂಡ ಘಟನೆ ತಿರುವಲ್ಲೂರು ರೈಲು ನಿಲ್ದಾಣದ (Thiruvallur Railway Station) ಬಳಿ ನಡೆದಿದೆ. ಮನಾಲಿಯಿಂದ (Manali) ತಿರುಪತಿಗೆ (Tirupati) ಹೋಗುತ್ತಿದ್ದ ರೈಲಿಗೆ ತಿರುವಲ್ಲೂರು ರೈಲು ನಿಲ್ದಾಣದ ಬಳಿ ಬೆಂಕಿ ಕಾಣಿಸಿಕೊಂಡಿದೆ.

ತಿರುಪತಿಗೆ ತೆರಳುತ್ತಿದ್ದ  ಸರಕು ರೈಲಿಗೆ ಬೆಂಕಿ

ಚೆನ್ನೈ: ಡೀಸೆಲ್ (Diesel) ಸಾಗಿಸುತ್ತಿದ್ದ ಸರಕು ರೈಲಿನಲ್ಲಿ (Freight train) ಬೆಂಕಿ ಕಾಣಿಸಿಕೊಂಡ ಘಟನೆ ತಿರುವಲ್ಲೂರು ರೈಲು ನಿಲ್ದಾಣದ (Thiruvallur Railway Station) ಬಳಿ ನಡೆದಿದೆ. ಮನಾಲಿಯಿಂದ (Manali) ತಿರುಪತಿಗೆ (Tirupati) ಹೋಗುತ್ತಿದ್ದ ರೈಲಿಗೆ ತಿರುವಲ್ಲೂರು ರೈಲು ನಿಲ್ದಾಣದ ಬಳಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಸ್ಥಳೀಯರನ್ನು ರೈಲು ನಿಲ್ದಾಣದ ಪ್ರದೇಶಗಳಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದವು. ಬಳಿಕ ಸಾಕಷ್ಟು ಪ್ರಯತ್ನ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದವು. ಬೆಂಕಿಯಿಂದ ಸುಮಾರು 22 ಬೋಗಿಗಳಿಗೆ ಹಾನಿಯಾಗಿದೆ.

ಮನಾಲಿಯಿಂದ ತಿರುಪತಿಗೆ ಭಾನುವಾರ ಬೆಳಗ್ಗೆ 5.30ರ ಸುಮಾರಿಗೆ ಸಾಗುತ್ತಿದ್ದ ಸರಕು ರೈಲಿಗೆ ತಿರುವಲ್ಲೂರು ರೈಲು ನಿಲ್ದಾಣದ ಬಳಿ ಬೆಂಕಿ ಹತ್ತಿಕೊಂಡಿದೆ. ಕೂಡಲೇ ನಿಲ್ದಾಣದಲ್ಲಿದ್ದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು. ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ನಿರಂತರ ತೀವ್ರ ಪ್ರಯತ್ನ ನಡೆಸಿ ಬೆಂಕಿಯನ್ನು ನಂದಿಸಿದರು.

ಸರಕು ರೈಲಿನ 5 ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದು 22 ಬೋಗಿಗಳಿಗೆ ಆವರಿಸಿದೆ. ಇದರಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ಉಂಟಾಗಿತ್ತು.

ರೈಲಿನಲ್ಲಿ ಡೀಸೆಲ್ ಇದ್ದುದರಿಂದ ಬೆಂಕಿಯನ್ನು ನಂದಿಸುವುದು ಸವಾಲಿನ ಕಾರ್ಯವಾಗಿತ್ತು. ನಿರಂತರ ಪ್ರಯತ್ನ ನಡೆಸಿದ ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಸಾಕಷ್ಟು ಸಮಯದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದವು. ರೈಲಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಯಾವುದೇ ಹಾನಿಯಾಗಿಲ್ಲ ಎಂದು ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.



ಸರಕು ರೈಲಿನ 22 ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಯಾವುದೇ ಜೀವಹಾನಿಯಾಗಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಎ. ಶ್ರೀನಿವಾಸ ಪೆರುಮಾಳ್ ತಿಳಿಸಿದ್ದಾರೆ.

ಇದನ್ನೂ ಓದಿ: Drowned: ಮಂತ್ರಾಲಯಕ್ಕೆ ಬಂದ ಮೂವರು ಯುವಕರು ತುಂಗಭದ್ರಾ ನದಿಯಲ್ಲಿ ನೀರುಪಾಲು

ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳೀಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ರೈಲಿಗೆ ಬೆಂಕಿ ಹತ್ತಲು ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು.

ಡೀಸೆಲ್ ಇದ್ದುದರಿಂದ ರೈಲಿನ ಬೆಂಕಿ ನಂದಿಸುವುದು ಸವಾಲಿನ ಕಾರ್ಯವಾಗಿತ್ತು. ಆದರೆ ಅದನ್ನು ರಕ್ಷಣಾ ತಂಡಗಳು ಯಶಸ್ವಿಯಾಗಿ ನಿಯಂತ್ರಿಸಿವೆ ಎಂದು ಅಗ್ನಿಶಾಮಕ ಸೇವೆಗಳ ಮುಖ್ಯಸ್ಥೆ ಸೀಮಾ ಅಗರ್ವಾಲ್ ತಿಳಿಸಿದ್ದಾರೆ.

ಸರಕು ರೈಲಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ತಿರುವಲ್ಲೂರು ರೈಲು ನಿಲ್ದಾಣದ ಮೂಲಕ ಸಾಗುವ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಇದನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

ರೈಲು ಸಂಚಾರ ರದ್ದು

ಚೆನ್ನೈ ಡಾ. ಎಂಜಿಆರ್ ಸೆಂಟ್ರಲ್ ನಿಂದ ಹೊರಡುವ ರೈಲು ಸಂಖ್ಯೆ 20607 ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 12007 ಮೈಸೂರು ಶತಾಬ್ದಿ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 12675 ಕೊಯಮತ್ತೂರು ಕೋವೈ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 12243 ಕೊಯಮತ್ತೂರು ಶತಾಬ್ದಿ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 16057 ತಿರುಪತಿ ಸಪ್ತಗಿರಿ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 22625 ಕೆಎಸ್‌ಆರ್ ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್‌ಪ್ರೆಸ್, ರೈಲು ಸಂಖ್ಯೆ 12639 ಕೆಎಸ್‌ಆರ್ ಬೆಂಗಳೂರು ಬೃಂದಾವನ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್,ರೈಲು ಸಂಖ್ಯೆ. 16003 ನಾಗರ್ಸೋಲ್ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ ಜುಲೈ 13ರಂದು ರದ್ದಾಗಿದೆ ಎಂದು ಪ್ರಕಟಣೆ ತಿಳಿಸಿದೆ.