ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Rahul Gandhi: ರಾಹುಲ್ ಗಾಂಧಿಗೆ ಹೊಸ ಸಂಕಷ್ಟ; ಮಾನನಷ್ಟ ಮೊಕದ್ದಮೆಯಲ್ಲಿ ಜಾಮೀನು ರಹಿತ ವಾರಂಟ್ ಜಾರಿ

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ವಿರುದ್ಧ ಜಾರ್ಖಂಡ್‌ನ ಚೈಬಾಸಾದ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದ್ದು , ಜೂನ್ 26 ರಂದು ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗುವಂತೆ ಆದೇಶಿಸಿದೆ.

ರಾಹುಲ್ ಗಾಂಧಿಗೆ ಹೊಸ ಸಂಕಷ್ಟ; ವಾರಂಟ್‌ ಜಾರಿ!

Profile Vishakha Bhat May 24, 2025 1:18 PM

ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ವಿರುದ್ಧ ಜಾರ್ಖಂಡ್‌ನ ಚೈಬಾಸಾದ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದ್ದು , ಜೂನ್ 26 ರಂದು ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗುವಂತೆ ಆದೇಶಿಸಿದೆ. ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ಕೋರಿ ರಾಹುಲ್ ಗಾಂಧಿಯವರ ವಕೀಲರು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಬಿಜೆಪಿ ನಾಯಕ ಪ್ರತಾಪ್ ಕಟಿಯಾರ್ ಅವರು ರಾಹುಲ್‌ ಗಾಂಧಿ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದರು.

2018 ರಲ್ಲಿ ನಡೆದ ಕಾಂಗ್ರೆಸ್‌ನ ಪೂರ್ಣಾಧಿವೇಶನದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಆಗ ಬಿಜೆಪಿ ಅಧ್ಯಕ್ಷರಾಗಿದ್ದ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದರು. ಆ ಸಂಬಂಧ ರಾಹುಲ್‌ ಮೇಲೆ ಪ್ರಕರಣ ದಾಖಲಾಗಿತ್ತು. ಕೊಲೆ ಆರೋಪ ಎದುರಿಸುತ್ತಿರುವ ಯಾರಾದರೂ ಬಿಜೆಪಿಯ ಅಧ್ಯಕ್ಷರಾಗಬಹುದು ಎಂದು ಗಾಂಧಿ ತಮ್ಮ ಭಾಷಣದಲ್ಲಿ ಹೇಳಿದ್ದರು. ರಾಹುಲ್ ಗಾಂಧಿಯವರ ಹೇಳಿಕೆಯು ಮಾನಹಾನಿಕರವಾಗಿದೆ ಮತ್ತು ಎಲ್ಲಾ ಬಿಜೆಪಿ ಕಾರ್ಯಕರ್ತರನ್ನು ಅವಮಾನಿಸಿದೆ ಎಂದು ಆರೋಪಿಸಿ, ಕಟಿಯಾರ್ ಜುಲೈ 9, 2018 ರಂದು ಚೈಬಾಸಾದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ನ್ಯಾಯಾಲಯದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ನ್ಯಾಯಾಲಯವು ಪದೇ ಪದೇ ಸಮನ್ಸ್ ಜಾರಿ ಮಾಡಿದರೂ, ಗಾಂಧಿ ಹಾಜರಾಗಲಿಲ್ಲ. ಆರಂಭದಲ್ಲಿ, ಜಾಮೀನು ನೀಡಬಹುದಾದ ವಾರಂಟ್ ಹೊರಡಿಸಲಾಗಿತ್ತು. ನಂತರ, ವಾರಂಟ್‌ಗೆ ತಡೆ ಕೋರಿ ಗಾಂಧಿ ಜಾರ್ಖಂಡ್ ಹೈಕೋರ್ಟ್‌ಗೆ ಮೊರೆ ಹೋದರು. ಈ ಅರ್ಜಿಯನ್ನು ಮಾರ್ಚ್ 20, 2024 ರಂದು ಇತ್ಯರ್ಥಪಡಿಸಲಾಯಿತು. ನಂತರ ಗಾಂಧಿ ಅವರು ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರು. ಅದನ್ನು ಚೈಬಾಸಾ ನ್ಯಾಯಾಲಯವೂ ವಜಾಗೊಳಿಸಿತು. ಈಗ, ವಿಶೇಷ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸುವ ಮೂಲಕ ಕಠಿಣ ಕ್ರಮ ಕೈಗೊಂಡಿದೆ.

ಈ ಸುದ್ದಿಯನ್ನೂ ಓದಿ: Rahul Gandhi: ದೆಹಲಿ ವಿಶ್ವ ವಿದ್ಯಾಲಯಕ್ಕೆ ರಾಹುಲ್‌ ಗಾಂಧಿ ಭೇಟಿ ; ಕಚೇರಿಯೆದುರು ವಿದ್ಯಾರ್ಥಿಗಳ ಹೈಡ್ರಾಮಾ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಗಾಂಧಿ ಕುಟುಂಬಕ್ಕೆ ಸಂಕಷ್ಟ ಎದುರಿಸುತ್ತಿದೆ. ಮಾಜಿ ಪ್ರಧಾನಿ ದಿ. ಜವಾಹರಲಾಲ್ ನೆಹರೂ ಇತರ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಜತೆಗೂಡಿ 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಆರಂಭಿಸಿದ್ದರು. ಸದ್ಯ ಇದು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಕಂಪನಿಯ ಯಂಗ್ ಇಂಡಿಯಾ ಲಿಮಿಟೆಡ್ ಒಡೆತನದಲ್ಲಿದೆ. ನ್ಯಾಶನಲ್‌ ಹೆರಾಲ್ಡ್‌ನಲ್ಲಿ ಅವ್ಯವಹಾರ ನಡೆದಿದೆ ಅಂತ ಮೊದಲು ಆರೋಪಿಸಿದ್ದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ. 2012ರಲ್ಲಿ ಅವರು ಸೋನಿಯಾ, ರಾಹುಲ್ ಮತ್ತು ಇತರ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದರು.