ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Chief Election Commissioner Gyanesh Kumar) ವಿರುದ್ಧ ಬೀದಿಗಿಳಿದು ಪ್ರತಿಭಟನೆ (Street Protests) ನಡೆಸುತ್ತಿರುವ ಇಂಡಿಯಾ ಒಕ್ಕೂಟ (INDIA bloc) ಸೋಮವಾರದಿಂದ ಕಾನೂನು ಹೋರಾಟಕ್ಕೂ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ (pm narendra modi) ನೇತೃತ್ವದ ಸರ್ಕಾರ 2023ರಲ್ಲಿ ಜಾರಿಗೆ ತಂದಿರುವ ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರಿಗೆ ಕಾನೂನು ರಕ್ಷಣೆ ನೀಡುವ ಕಾನೂನನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆಯನ್ನು ತೀವ್ರಗೊಳಿಸಿವೆ. ಈ ಕುರಿತು ಬೆಂಗಳೂರಿನಲ್ಲಿ ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ (Congress chief Mallikarjun Kharge), ಭಾರತದ ರಾಷ್ಟ್ರಪತಿ ಅಥವಾ ದೇಶದ ಮುಖ್ಯ ನ್ಯಾಯಮೂರ್ತಿಗಳಿಗೂ ಇಲ್ಲದಂತಹ ರಕ್ಷಣೆಯನ್ನು ಪ್ರಧಾನಿ ಮೋದಿ ಅವರು ಮುಖ್ಯ ಚುನಾವಣಾ ಆಯುಕ್ತರಿಗೆ ನೀಡಲಾಗಿದೆ ಎಂದರು.
ಚುನಾವಣಾ ಆಯುಕ್ತರಿಗೆ ಕಾನೂನಿನ ಮೂಲಕ ವಿಶೇಷ ರಕ್ಷಣೆಯನ್ನು ನೀಡಿದ ಬಳಿಕ ಮತಗಳ ಕಳ್ಳತನ, ಇವಿಎಂ ದುರ್ಬಳಕೆ ಮತ್ತು ಚುನಾವಣಾ ವಂಚನೆ ಪ್ರಾರಂಭವಾಗಿದೆ. ಮುಖ್ಯ ಚುನಾವಣಾ ಆಯುಕ್ತರು ಎಷ್ಟೇ ತಪ್ಪುಗಳನ್ನು ಮಾಡಿದರೂ ಆ ಕ್ರಮಗಳಿಗೆ ಹೊಣೆಗಾರಿಕೆಯಿಂದ ಜೀವಮಾನದ ವಿನಾಯಿತಿಯನ್ನು ಅವರಿಗೆ ನೀಡಲಾಗಿದೆ ಎಂದು ಖರ್ಗೆ ಹೇಳಿದರು.
ಸುಪ್ರೀಂ ಕೋರ್ಟ್‌ಗೆ ಇಂಡಿಯಾ ಒಕ್ಕೂಟದ ಮೆರವಣಿಗೆ ಇಂದು; ದೆಹಲಿಯಲ್ಲಿ ಬಿಗಿ ಭದ್ರತೆ, 6 ಮೆಟ್ರೋ ನಿಲ್ದಾಣ ಬಂದ್
ಇದು ಜನರ ಮತಗಳನ್ನು ಕಸಿದುಕೊಳ್ಳುವ ಮತ್ತು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ನೇರ ಪ್ರಯತ್ನವಾಗಿದೆ. ಜನರ ವಿರುದ್ಧ ವಂಚನೆ ಎಸಗುವ ಪಿತೂರಿಯಾಗಿದೆ. ಇದರ ವಿರುದ್ಧ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಅವರು ತಿಳಿಸಿದರು.
ಈಗಾಗಲೇ ಇಂಡಿಯಾ ಮೈತ್ರಿಕೂಟವು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನು ಭೇಟಿಯಾಗಲು ಅನುಮತಿ ನಿರಾಕರಿಸಲಾಗಿದೆ. ಅರ್ಜಿಯನ್ನು ಅವರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಅರ್ಜಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧದ ಆರೋಪಗಳನ್ನು ವಿವರಿಸಲಾಗುವುದು. ನಿವೃತ್ತಿಯ ಅನಂತರ ಅವರನ್ನು ತನಿಖೆ ಅಥವಾ ಶಿಕ್ಷೆಯಿಂದ ರಕ್ಷಿಸುವ 2023ರ ಕಾನೂನು ರದ್ದುಗೊಳಿಸಲು ಮನವಿ ಮಾಡಲಾಗುವುದು ಎಂದು ಹೇಳಿದರು.
ಮುಖ್ಯ ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆಯಲ್ಲಿ ಮುಖ್ಯ ನ್ಯಾಯಮೂರ್ತಿಗಳನ್ನು ಹೊರಗಿಟ್ಟಿರುವುದರ ಬಗ್ಗೆಯೂ ಇದರಲ್ಲಿ ಉಲ್ಲೇಖಿಸಲಾಗುವುದು ಎಂದ ಅವರು, ಎಲೆಕ್ಟ್ರಾನಿಕಲಿ ಟ್ರಾನ್ಸ್‌ಮಿಟೆಡ್ ಪೋಸ್ಟಲ್ ಬ್ಯಾಲೆಟ್ ಸಿಸ್ಟಮ್ ಮೂಲಕ ಮತ ಕಳ್ಳತನ ನಡೆದಿದೆ ಎಂಬ ಆರೋಪವನ್ನು ಇದು ಎತ್ತಿ ತೋರಿಸಲಿದೆ. ಈ ಆರೋಪಗಳಿಗೆ ಸಂಬಂಧಿಸಿ ದಾಖಲೆಗಳನ್ನು ಕೂಡ ಒದಗಿಸುವುದಾಗಿ ತಿಳಿಸಿದರು.
ರಿಯಾದ್ ವಿಮಾನ ನಿಲ್ದಾಣದ ಮೇಲೆ ಹೌತಿ ಬಂಡುಕೋರರ ದಾಳಿ; ಓರ್ವ ಭಾರತೀಯ ಸಾವು, 300 ಮಂದಿಗೆ ಗಾಯ
ಕಾಂಗ್ರೆಸ್ ತನ್ನ ಎಲ್ಲಾ ಲೋಕಸಭೆ ಮತ್ತು ರಾಜ್ಯಸಭಾ ಸಂಸದರಿಗೆ ದೆಹಲಿಯಲ್ಲೇ ಇರುವಂತೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗೋವಾಕ್ಕೆ ನಿಗದಿಯಾಗಿದ್ದ ಭೇಟಿಯನ್ನು ಮುಂದೂಡಿದ್ದಾರೆ. ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಮತ್ತು ಇತರ ನಾಯಕರನ್ನು ಭೇಟಿಯಾಗಿದ್ದಾರೆ. ಇಂಡಿಯಾ ಮೈತ್ರಿಕೂಟದ ಎಲ್ಲಾ ನಾಯಕರು ದೆಹಲಿಯಲ್ಲಿ ಸೇರಿದ್ದು, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ದೆಹಲಿಯಲ್ಲೇ ಉಳಿದುಕೊಂಡಿದ್ದಾರೆ. ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ತೇಜಸ್ವಿ ಯಾದವ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ದೆಹಲಿಗೆ ಆಗಮಿಸಲಿದ್ದಾರೆ.