ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆಯನ್ನು ಕತ್ತರಿಸಿ ಕದ್ದೊಯ್ದ ಖದೀಮರು; ತಕ್ಷಣ ಕ್ರಮಕ್ಕೆ ಭಾರತ ಆಗ್ರಹ

ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆಯನ್ನು ಕತ್ತರಿಸಿ ಕದ್ದೊಯ್ದಿರುವ ಘಟನೆ ನಡೆದಿದೆ. ಮೆಲ್ಬೋರ್ನ್‌ನ ರೌವಿಲ್ಲೆಯಲ್ಲಿನ ಆಸ್ಟ್ರೇಲಿಯನ್ ಇಂಡಿಯನ್ ಕಮ್ಯುನಿಟಿ ಸೆಂಟರ್‌ನಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಕತ್ತರಿಸಿ ಕದ್ದೊಯ್ಯಲಾಗಿದೆ. ಇದು ಭಾರತೀಯ ಮತ್ತು ಆಸ್ಟ್ರೇಲಿಯನ್ ಸಮುದಾಯದಲ್ಲಿ ತೀವ್ರ ಕಳವಳವನ್ನು ಉಂಟು ಮಾಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಭಾರತ ಕ್ರಮಕ್ಕೆ ಆಗ್ರಹಿಸಿದೆ.

ಗಾಂಧಿ ಪ್ರತಿಮೆಗೆ ಹಾನಿ; ಕ್ರಮಕ್ಕೆ ಆಗ್ರಹ

ಸಂಗ್ರಹ ಚಿತ್ರ -

ಮೆಲ್ಬೋರ್ನ್‌: ಮಹಾತ್ಮ ಗಾಂಧೀಜಿಯವರ ಪ್ರತಿಮೆಯನ್ನು (Gandhi statue stolen) ಕತ್ತರಿಸಿ ಕದ್ದೊಯ್ದಿರುವ ಘಟನೆ ಆಸ್ಟ್ರೇಲಿಯಾದಲ್ಲಿ (Australia) ನಡೆದಿದೆ. ತಕ್ಷಣ ಕ್ರಮ ಕೈಗೊಳ್ಳುವಂತೆ ಭಾರತ ಆಗ್ರಹಿಸಿದೆ. ಮೆಲ್ಬೋರ್ನ್‌ನ (Melbourne) ರೌವಿಲ್ಲೆಯಲ್ಲಿನ ಆಸ್ಟ್ರೇಲಿಯನ್ ಇಂಡಿಯನ್ ಕಮ್ಯುನಿಟಿ ಸೆಂಟರ್‌ನಲ್ಲಿರುವ (Australian Indian Community Centre) ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಕತ್ತರಿಸಿ ಕದ್ದೊಯ್ಯಲಾಗಿದೆ. ಇದು ಭಾರತೀಯ ಮತ್ತು ಆಸ್ಟ್ರೇಲಿಯನ್ ಸಮುದಾಯದಲ್ಲಿ ತೀವ್ರ ಕಳವಳವನ್ನು ಉಂಟು ಮಾಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ನವದೆಹಲಿ, ಈ ಕುರಿತು ಆಸ್ಟ್ರೇಲಿಯಾದ ಅಧಿಕಾರಿಗಳೊಂದಿಗೆ ಔಪಚಾರಿಕವಾಗಿ ಚರ್ಚಿಸಲಾಗಿದೆ. ಪ್ರತಿಮೆಯನ್ನು ಮರಳಿ ಪಡೆಯಲು ಮತ್ತು ಆರೋಪಿಗಳನ್ನು ಗುರುತಿಸಲು ತಕ್ಷಣ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ ಎಂದು ಹೇಳಿದೆ.



ಮೆಲ್ಬೋರ್ನ್‌ನ ರೌವಿಲ್ಲೆಯಲ್ಲಿನ ಆಸ್ಟ್ರೇಲಿಯನ್ ಇಂಡಿಯನ್ ಕಮ್ಯುನಿಟಿ ಸೆಂಟರ್‌ನಲ್ಲಿರುವ ಮಹಾತ್ಮ ಗಾಂಧಿಯವರ ಕಂಚಿನ ಪ್ರತಿಮೆಯನ್ನು ಕದ್ದೊಯ್ಯಲಾಗಿದೆ. ಇದು ಸ್ಥಳೀಯ ಪೊಲೀಸರು, ಭಾರತೀಯರು, ಆಸ್ಟ್ರೇಲಿಯನ್ ಸಮುದಾಯದಲ್ಲಿ ಕಳವಳವನ್ನು ಉಂಟು ಮಾಡಿದೆ. ಈ ಕುರಿತು ಮಂಗಳವಾರ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ರಣಧೀರ್ ಜೈಸ್ವಾಲ್, ರೌವಿಲ್ಲೆಯಲ್ಲಿನ ಆಸ್ಟ್ರೇಲಿಯನ್ ಇಂಡಿಯನ್ ಕಮ್ಯುನಿಟಿ ಸೆಂಟರ್‌ನಲ್ಲಿದ್ದ ಗಾಂಧೀಜಿಯವರ ಪ್ರತಿಮೆಯನ್ನು ಅಪರಿಚಿತರು ಧ್ವಂಸಗೊಳಿಸಿ ತೆಗೆದು ಹಾಕಿರುವುದನ್ನು ಭಾರತ ಬಲವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.

ರೈಲ್ವೇ ಹಳಿಯಲ್ಲಿ ಆತ್ಮಹತ್ಯೆಗೆ ಶರಣಾದ ತಾಯಿ-ಮಕ್ಕಳು; ಸಂಬಂಧಿಕರಲ್ಲಿ ಕ್ಷಮೆ ಕೇಳಿದ್ದೇಕೆ?

ಈ ಕುರಿತು ಆಸ್ಟ್ರೇಲಿಯಾದ ಅಧಿಕಾರಿಗಳೊಂದಿಗೆ ಮಾತನಾಡಲಾಗಿದೆ. ನಾಪತ್ತೆಯಾಗಿರುವ ಪ್ರತಿಮೆಯನ್ನು ಮರಳಿ ಪಡೆಯಲು ಮತ್ತು ಅಪರಾಧಿಗಳನ್ನು ಹೊಣೆಗಾರರನ್ನಾಗಿ ಮಾಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಅವರನ್ನು ಒತ್ತಾಯಿಸಿದ್ದೇವೆ ಎಂದು ಅವರು ಹೇಳಿದರು.

ಕುಡಿದ ಮತ್ತಿನಲ್ಲಿ ಅರೆಬೆತ್ತಲೆಯಾಗಿ ಪತ್ನಿ ಮೇಲೆ ಹಲ್ಲೆ ನಡೆಸಿದ ಕಾನ್‌ಸ್ಟೇಬಲ್; ಚಿಕ್ಕ ಮಗು ಕೈಲಿದ್ರೂ ಮನಸ್ಸು ಕರಗಲಿಲ್ಲ

ರೌವಿಲ್ಲೆಯಲ್ಲಿನ ಆಸ್ಟ್ರೇಲಿಯನ್ ಇಂಡಿಯನ್ ಕಮ್ಯುನಿಟಿ ಸೆಂಟರ್‌ನಲ್ಲಿದ್ದ ಗಾಂಧೀಜಿಯವರ ಪ್ರತಿಮೆಯನ್ನು ನವದೆಹಲಿಯ ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಮಂಡಳಿ (ICCR) ಉಡುಗೊರೆಯಾಗಿ ನೀಡಿತ್ತು. ಇದನ್ನು 2021ರ ನವೆಂಬರ್ 12ರಂದು ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಸ್ಕಾಟ್ ಮಾರಿಸನ್ ಉದ್ಘಾಟಿಸಿದ್ದರು. ಈ ಪ್ರತಿಮೆಯ ಕಳವಿನಲ್ಲಿ ಮೂವರು ಅಪರಿಚಿತರು ಭಾಗಿಯಾಗಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.