ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಮಹಾರಾಷ್ಟ್ರ ಪಾಲಿಕೆ ಚುನಾವಣೆಯಲ್ಲಿ ಗೆಲುವು!

BMC Election Result: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯಾಗಿರುವ ಶ್ರೀಕಾಂತ್ ಪಂಗಾರ್ಕರ್, ಜಾಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದಾರೆ. ಜನವರಿ 15ರಂದು ನಡೆದ ಚುನಾವಣೆಯಲ್ಲಿ 13ನೇ ವಾರ್ಡ್‌ನಿಂದ ಸ್ಪರ್ಧಿಸಿದ್ದ ಅವರು, ಬಿಜೆಪಿ ಸೇರಿದಂತೆ ಇತರ ಪಕ್ಷಗಳ ಅಭ್ಯರ್ಥಿಗಳನ್ನು 2,621 ಮತಗಳ ಅಂತರದಿಂದ ಸೋಲಿಸಿದರು. ಈ ವಾರ್ಡ್‌ನಲ್ಲಿ ಶಿವಸೇನೆ ಅಭ್ಯರ್ಥಿ ಇರಲಿಲ್ಲದ ಕಾರಣ, ಸ್ವತಂತ್ರ ಹಾಗೂ ಇತರ ಪಕ್ಷಗಳ ನಡುವೆ ತೀವ್ರ ಸ್ಪರ್ಧೆ ನಡೆಯಿತು.

ಪಾಲಿಕೆ ಚುನಾವಣೆಯಲ್ಲಿ ಗೌರಿ ಲಂಕೇಶ್‌ ಹ*ತ್ಯೆ ಆರೋಪಿ ಗೆಲವು

ಪತ್ರಕರ್ತೆ ಗೌರಿ ಲಂಕೇಶ್- ಶ್ರೀಕಾಂತ್ ಪಂಗಾರ್ಕರ್ -

Profile
Sushmitha Jain Jan 16, 2026 6:06 PM

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ (Gauri Lankesh) ಹತ್ಯೆ ಪ್ರಕರಣದ ಆರೋಪಿಗಳಲ್ಲೊಬ್ಬನಾದ ಶ್ರೀಕಾಂತ್ ಪಂಗಾರ್ಕರ್ (Shrikant Pangarkar) ಜನವರಿ 15ರಂದು ನಡೆದಿದ್ದ ಜಾಲ್ನಾ(Jalna) ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದಾರೆ. 13ನೇ ವಾರ್ಡ್‌ನಲ್ಲಿ ಪಂಗಾರ್ಕರ್ ಅವರು ಬಿಜೆಪಿ ಸೇರಿದಂತೆ ಇತರ ಪಕ್ಷಗಳ ಅಭ್ಯರ್ಥಿಗಳನ್ನು 2,621 ಮತಗಳ ಅಂತರದಿಂದ ಸೋಲಿಸಿ ಜಯಗಳಿಸಿದ್ದಾರೆ. ಏಕನಾಥ್ ಶಿಂಧೆ (Eknath Shinde) ನೇತೃತ್ವದ ಶಿವಸೇನೆ (Shiv Sena) ಈ ವಾರ್ಡ್‌ನಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಆದ್ದರಿಂದ ಸ್ವತಂತ್ರ ಅಭ್ಯರ್ಥಿಗಳು ಹಾಗೂ ಇತರ ಪ್ರತಿಸ್ಪರ್ಧಿ ಪಕ್ಷಗಳ ಅಭ್ಯರ್ಥಿಗಳ ನಡುವೆಯೇ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ಪ್ರಕರಣ ಕೋರ್ಟ್‌ನಲ್ಲಿದ್ದಾಗಲೇ ಗೆಲುವು

ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ ಇನ್ನೂ ನ್ಯಾಯಾಲಯದಲ್ಲಿ ಮುಂದುವರಿದಿದ್ದು, ಈ ನಡುವೆಯೇ ಪಂಗಾರ್ಕರ್ ಅವರ ಈ ಗೆಲುವು ಬಂದಿದೆ. ಜಯದ ಬಳಿಕ ಮಾತನಾಡಿದ ಅವರು, ತಮ್ಮ ವಿರುದ್ಧ ಇದುವರೆಗೆ ಯಾವುದೇ ಶಿಕ್ಷೆ ಪ್ರಕಟವಾಗಿಲ್ಲ, ಕಾನೂನು ಪ್ರಕ್ರಿಯೆ ಇನ್ನೂ ಮುಂದುವರಿದಿದೆ, ಎಂದು ತಿಳಿಸಿದರು. ಫಲಿತಾಂಶ ಪ್ರಕಟವಾದ ತಕ್ಷಣ ಪಂಗಾರ್ಕರ್ ತಮ್ಮ ಬೆಂಬಲಿಗರೊಂದಿಗೆ ಸಂಭ್ರಮಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಆರೋಪಿಗಳ ರಾಜಕೀಯ ಪ್ರವೇಶ ಕುರಿತು ಭಾರಿ ಚರ್ಚೆಗೆ ಕಾರಣವಾಗಿದೆ.

ದ್ವಿಚಕ್ರ ವಾಹನಕ್ಕೆ ಸಿಲುಕಿದ ಗಾಳಿಪಟದ ದಾರ; ಫ್ಲೈಓವರ್‌ನ 70 ಅಡಿ ಎತ್ತರದಿಂದ ಬಿದ್ದು ದಂಪತಿ, ಪುತ್ರಿ ಸಾವು

ಗೌರಿ ಲಂಕೇಶ್ ಪ್ರಕರಣದ ಹಿನ್ನೆಲೆ

ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಅವರನ್ನು 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ತಮ್ಮ ನಿವಾಸದ ಮುಂದೆಯೇ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಘಟನೆ ದೇಶವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದ್ದು, ಅಭಿವ್ಯಕ್ತಿ ಸ್ವಾತಂತ್ರ್ಯ, ಭಿನ್ನಮತ ಮತ್ತು ರಾಜಕೀಯ ಅಸಹಿಷ್ಣುತೆ ಕುರಿತು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ನಂತರ ಈ ಪ್ರಕರಣದಲ್ಲಿ ಶ್ರೀಕಾಂತ್ ಪಂಗಾರ್ಕರ್ ಅವರನ್ನು ಆರೋಪಿಯಾಗಿ ಮಾಡಲಾಗಿತ್ತು. 2024ರ ಸೆಪ್ಟೆಂಬರ್ 4ರಂದು ಕರ್ನಾಟಕ ಹೈಕೋರ್ಟ್ ಪಂಗಾರ್ಕರ್‌ಗೆ ಜಾಮೀನು ನೀಡಿತ್ತು.

ಪಂಗಾರ್ಕರ್ ರಾಜಕೀಯ ಪಯಣ ಮತ್ತು ಅವರ ವಿರುದ್ಧದ ಪ್ರಕರಣಗಳು

ಪಂಗಾರ್ಕರ್ 2001ರಿಂದ 2006ರವರೆಗೆ ಅವಿಭಜಿತ ಶಿವಸೇನೆಯಿಂದ ಜಾಲ್ನಾ ಮಹಾನಗರ ಪಾಲಿಕೆಯಲ್ಲಿ ಕಾರ್ಪೊರೇಟರ್ ಆಗಿ ಕಾರ್ಯನಿರ್ವಹಿಸಿದ್ದರು. 2011ರಲ್ಲಿ ಟಿಕೆಟ್ ಸಿಗದಿದ್ದಾಗ ಅವರು ಬಲಪಂಥೀಯ ಹಿಂದೂ ಜನಜಾಗೃತಿ ಸಮಿತಿಗೆ ಸೇರ್ಪಡೆಗೊಂಡರು.

2018ರ ಆಗಸ್ಟ್‌ನಲ್ಲಿ, ರಾಜ್ಯದ ವಿವಿಧ ಭಾಗಗಳಿಂದ ಕಚ್ಚಾ ಬಾಂಬ್‌ಗಳು ಮತ್ತು ಶಸ್ತ್ರಾಸ್ತ್ರಗಳು ಪತ್ತೆಯಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಉಗ್ರ ನಿಗ್ರಹ ದಳ (ಎಟಿಎಸ್) ಪಂಗಾರ್ಕರ್ ಅವರನ್ನು ಬಂಧಿಸಲಾಯಿತು. ಅಲ್ಲದೇ ಅವರ ವಿರುದ್ಧ ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

2024ರ ನವೆಂಬರ್‌ನಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ, ಪಂಗಾರ್ಕರ್ ಸ್ವಲ್ಪಕಾಲ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರ್ಪಡೆಗೊಂಡಿದ್ದರು. ಆದರೆ ವ್ಯಾಪಕ ಟೀಕೆಗಳು ಬಂದ ಹಿನ್ನೆಲೆ, ಶಿಂಧೆಯವರು ಪಂಗಾರ್ಕರ್‌ರ ಪಕ್ಷ ಸೇರ್ಪಡೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರು.