ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಇಂಡಿಯಾ ಮೈತ್ರಿಕೂಟದ ಸಭೆಗೂ ಮುನ್ನ ಹೈಡ್ರಾಮಾ: ಸ್ಟಾಲಿನ್ ನಿವಾಸದ ಹೊರಗೆ 'ಗೋ ಬ್ಯಾಕ್ ಕಾಂಗ್ರೆಸ್' ಪೋಸ್ಟರ್ ಪ್ರತಿಭಟನೆ

Delimitation Bill: ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಮಸೂದೆ'ಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಒಕ್ಕೂಟದಲ್ಲಿ ಭಿನ್ನಾಭಿಪ್ರಾಯ ತೀವ್ರಗೊಂಡಿದ್ದು, ಚೆನ್ನೈನಲ್ಲಿ ನಡೆಯಲಿರುವ ಇಂಡಿಯಾ ಮೈತ್ರಿಕೂಟದ ನಾಯಕರ ಮಹತ್ವದ ಸಭೆಗೂ ಮುನ್ನವೇ ರಾಜಕೀಯ ಹೈಡ್ರಾಮಾ ನಡೆದಿದೆ.

ಸಂಗ್ರಹ ಚಿತ್ರ

ಚೆನ್ನೈ: ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಮಸೂದೆ'ಗೆ (Delimitation Bill) ಸಂಬಂಧಿಸಿದಂತೆ ವಿರೋಧ ಪಕ್ಷಗಳ ಒಕ್ಕೂಟದಲ್ಲಿ ಭಿನ್ನಾಭಿಪ್ರಾಯ ತೀವ್ರಗೊಂಡಿದ್ದು, ಚೆನ್ನೈನಲ್ಲಿ ನಡೆಯಲಿರುವ ಇಂಡಿಯಾ (INDIA Bloc) ಮೈತ್ರಿಕೂಟದ ನಾಯಕರ ಮಹತ್ವದ ಸಭೆಗೂ ಮುನ್ನವೇ ರಾಜಕೀಯ ಹೈಡ್ರಾಮಾ ನಡೆದಿದೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರ ಚೆನ್ನೈ ನಿವಾಸದ ಹೊರಗೆ 'ಗೋ ಬ್ಯಾಕ್ ಕಾಂಗ್ರೆಸ್' (ಕಾಂಗ್ರೆಸ್ ವಾಪಸ್ ಹೋಗಿ) ಎಂಬ ಬರಹವಿರುವ ಪೋಸ್ಟರ್‌ಗಳನ್ನು ಪ್ರದರ್ಶಿಸಿ ಡಿಎಂಕೆ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.

ನವೆಂಬರ್ 30ರಂದು ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಂಡಿಸಲಿರುವ ಪರಿಷ್ಕೃತ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಬೆಂಬಲ ನೀಡಲು ಡಿಎಂಕೆ ಶನಿವಾರ ನಿರ್ಧರಿಸಿತ್ತು. ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸ್ಟಾಲಿನ್ ಅವರ ಮನವೊಲಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಪ್ರಮುಖ ನಾಯಕರ ನಿಯೋಗ ಇಂದು ಚೆನ್ನೈಗೆ ಆಗಮಿಸಿದೆ.

ವಿಡಿಯೋ ನೋಡಿ



ನಾಯಕರು ಸ್ಟಾಲಿನ್ ನಿವಾಸಕ್ಕೆ ಆಗಮಿಸುವ ಕೆಲವೇ ಕ್ಷಣಗಳ ಮುನ್ನ, ಮನೆಯ ಹೊರಗೆ ಜಮಾಯಿಸಿದ ಡಿಎಂಕೆ ಬೆಂಬಲಿಗರು ಮತ್ತು ಕಾರ್ಯಕರ್ತರು 'ಗೋ ಬ್ಯಾಕ್ ಕಾಂಗ್ರೆಸ್' ಪೋಸ್ಟರ್‌ಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು. ಇತ್ತೀಚಿನ ತಮಿಳುನಾಡು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಡಿಎಂಕೆ ಜೊತೆಗಿನ ಮೈತ್ರಿ ಕಡಿದುಕೊಂಡು ನಟ ವಿಜಯ್ ಅವರ 'ಟಿವಿಕೆ' (TVK) ಪಕ್ಷಕ್ಕೆ ಬೆಂಬಲ ನೀಡಿದ್ದರಿಂದ ಡಿಎಂಕೆ ಕಾರ್ಯಕರ್ತರಲ್ಲಿ ಮೊದಲಿನಿಂದಲೂ ತೀವ್ರ ಅಸಮಾಧಾನವಿತ್ತು. ಈಗ ತಮ್ಮ ಸ್ವಾರ್ಥಕ್ಕಾಗಿ ಕಾಂಗ್ರೆಸ್ ನಾಯಕರು ಸ್ಟಾಲಿನ್ ಅವರನ್ನು ಭೇಟಿಯಾಗಲು ಬರುತ್ತಿದ್ದಾರೆ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ ನಾಯಕರ ಭೇಟಿಗೂ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಎಂ.ಕೆ. ಸ್ಟಾಲಿನ್, ತಮ್ಮ ಪಕ್ಷದ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. "ತಮಿಳುನಾಡು ಮತ್ತು ತಮಿಳು ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಡಿಎಂಕೆ ಯಾವಾಗಲೂ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಇತಿಹಾಸವು ನಮ್ಮನ್ನು 'ಕಟ್ಟಬೊಮ್ಮನ್' ಎಂದು ಗುರುತಿಸುತ್ತದೆಯೇ ಹೊರತು ದ್ರೋಹಿ ಎಂದಲ್ಲ" ಎಂದು ಸ್ಟಾಲಿನ್ ಖಡಕ್ ಸಂದೇಶ ರವಾನಿಸಿದ್ದಾರೆ.

ಲೋಕಸಭಾ ಕ್ಷೇತ್ರ 815ಕ್ಕೆ ಏರಿಕೆ; ವಿಧಾನಸಭಾ ಕ್ಷೇತ್ರಗಳೂ ಹೆಚ್ಚಳ: ವಿಧೇಯಕಗಳಿಗೆ ಕೇಂದ್ರ ಸಂಪುಟ ಅಸ್ತು

ಕಳೆದ ಏಪ್ರಿಲ್‌ನಲ್ಲಿ ಜನಗಣತಿ ಆಧಾರಿತ ಕ್ಷೇತ್ರ ಮರುವಿಂಗಡಣೆಗೆ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ ಎಂದು ಡಿಎಂಕೆ ವಿರೋಧ ವ್ಯಕ್ತಪಡಿಸಿತ್ತು. ಆದರೆ, ಈಗ ಕೇಂದ್ರ ಸರ್ಕಾರವು ಪರಿಷ್ಕೃತ ಮಸೂದೆಯಲ್ಲಿ 1971ರ ಜನಗಣತಿಯ ಅನುಪಾತವನ್ನೇ ಉಳಿಸಿಕೊಂಡು, ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನಗಳನ್ನು ಏಕರೂಪವಾಗಿ ಶೇ. 50ರಷ್ಟು ಹೆಚ್ಚಿಸುವ ಮತ್ತು ತಮಿಳುನಾಡಿನ ಪ್ರಸ್ತುತ ಶೇ. 7.18ರಷ್ಟು ಪ್ರಾತಿನಿಧ್ಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುವ ಡಿಎಂಕೆ ಬೇಡಿಕೆಗಳಿಗೆ ಒಪ್ಪಿಗೆ ನೀಡಿದೆ. ಈ ಹಿನ್ನೆಲೆಯಲ್ಲಿ ಡಿಎಂಕೆ ಮಸೂದೆಗೆ ಬೆಂಬಲ ಘೋಷಿಸಿದೆ.

Vishakha Bhat Heggar

View all posts by this author