Petrol Price Hike: ವಾಹನ ಸವಾರರಿಗೆ ಬಿಗ್ ಶಾಕ್; ಪೆಟ್ರೋಲ್, ಡೀಸೆಲ್ ಮೇಲೆ ಕೇಂದ್ರದ ಅಬಕಾರಿ ಸುಂಕ ಹೆಚ್ಚಳ
ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ ತಲಾ 2 ರೂ. ಹೆಚ್ಚಿಸುವುದಾಗಿ ಕೇಂದ್ರ ಸರ್ಕಾರ ಸೋಮವಾರ ಘೋಷಿಸಿದೆ. ಈ ಬದಲಾವಣೆಗಳು ಮಂಗಳವಾರದಿಂದ ಜಾರಿಗೆ ಬರಲಿವೆ.
-
Vishakha Bhat
Apr 7, 2025 3:57 PM
ನವದೆಹಲಿ: ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ ತಲಾ 2 ರೂ. ಹೆಚ್ಚಿಸುವುದಾಗಿ (Petrol Price Hike) ಕೇಂದ್ರ ಸರ್ಕಾರ ಸೋಮವಾರ ಘೋಷಿಸಿದೆ. ಈ ಬದಲಾವಣೆಗಳು ಮಂಗಳವಾರದಿಂದ ಜಾರಿಗೆ ಬರಲಿವೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂ.ಗೆ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ.ಗೆ ಹೆಚ್ಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹೀಗಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಶೀಘ್ರವೇ ಹೆಚ್ಚಳವಾಗೋ ಸಾಧ್ಯತೆ ಇದೆ. ಈ ಮೂಲಕ ವಾಹನ ಸವಾರರಿಗೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ಬಿಸಿ ಮುಟ್ಟಲಿದೆ.
Central Government raises excise duty by Rs 2 each on petrol and diesel: Department of Revenue notification pic.twitter.com/WjOiv1E9ch
— ANI (@ANI) April 7, 2025