ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಎಸಿ ಸ್ಫೋಟಗೊಂಡು ಎಂಜಿನ್‌ಗೆ ತಗುಲಿದ ಕಿಡಿ; ಗ್ರೇಟರ್ ನೋಯ್ಡಾದಲ್ಲಿ ಬಸ್ ಬೆಂಕಿಗೆ ಆಹುತಿಯಾಗಿದ್ದು ಹೇಗೆ?

Greater Noida Bus Fire: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸ್ಲೀಪರ್ ಪ್ರವಾಸಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮಹಿಳೆ ಸೇರಿ 9 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ವೇಳೆ ಬಸ್‌ನಲ್ಲಿ 35 ಪ್ರಯಾಣಿಕರಿದ್ದರು ಎನ್ನಲಾಗಿದೆ. ಎಸಿ ವ್ಯವಸ್ಥೆಯಲ್ಲಿ ಸಂಭವಿಸಿದ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡು ವೇಗವಾಗಿ ಹರಡಿರುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಯಮುನಾ ಎಕ್ಸ್‌ಪ್ರೆಸ್‌ ವೇಯಲ್ಲಿ ಬಸ್‌ಗೆ ಬೆಂಕಿ ತಗುಲಿದ್ದು ಹೇಗೆ?

ಉತ್ತರ ಪ್ರದೇಶದಲ್ಲಿ ನಡೆದ ಬಸ್ ಅಗ್ನಿ ಅವಘಡ -

Profile
Sushmitha Jain Sep 24, 2026 9:20 PM

ಲಖನೌ, ಸೆ. 24: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಸೆಪ್ಟೆಂಬರ್‌ 23) ತಡರಾತ್ರಿ ಸ್ಲೀಪರ್ ಪ್ರವಾಸಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮಹಿಳೆ ಸೇರಿ ಕನಿಷ್ಠ 9 ಮಂದಿ ಸಜೀವ ದಹನಗೊಂಡಿದ್ದು, ಹಲವರು ಗಾಯಗೊಂಡಿದ್ದಾರೆ. ಬಸ್‌ನಲ್ಲಿ ಒಟ್ಟು 35 ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಬಸ್‌ನ ಏರ್‌ಕಂಡಿಷನಿಂಗ್ ವ್ಯವಸ್ಥೆಯಲ್ಲಿ ಸಂಭವಿಸಿದ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಎಂಜಿನ್‌ನ ಲೂಬ್ರಿಕೇಟಿಂಗ್ ಆಯಿಲ್‌ಗೆ ಬೆಂಕಿ ತಗುಲಿ ವೇಗವಾಗಿ ಹರಡಿದೆ ಎನ್ನಲಾಗಿದೆ.

ನೋಯ್ಡಾದಿಂದ ಮಹೋಬಾಗೆ ತೆರಳುತ್ತಿದ್ದ ಬಸ್‌ ಯಮುನಾ ಎಕ್ಸ್‌ಪ್ರೆಸ್‌ವೇ ಮೂಲಕ ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಬಹುತೇಕ ಪ್ರಯಾಣಿಕರು ನಿದ್ರಿಸುತ್ತಿದ್ದ ಕಾರಣ, ಬೆಂಕಿ ಕಾಣಿಸಿಕೊಂಡ ತಕ್ಷಣ ಬಸ್‌ನಲ್ಲಿ ಭಾರಿ ಗೊಂದಲ ಉಂಟಾಯಿತು. ಕೆಲ ಪ್ರಯಾಣಿಕರು ಕಿಟಕಿಗಳ ಮೂಲಕ ಹೊರಗೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಮಾಹಿತಿ ತಿಳಿಯುತ್ತಿದಂತೆ ಅಗ್ನಿಶಾಮಕ ದಳ ಹಾಗೂ ಜೆವರ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಪ್ರಧಾನಿ ಮೋದಿ ಪರಿಹಾರ ಘೋಷಣೆ

ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಸಲ್ವಾರ್ ತೆಗೆಯುವುದು, ಎದೆ ಒತ್ತುವುದು ಲೈಂಗಿಕ ದೌರ್ಜನ್ಯವಲ್ಲ ಎಂದ ಪಾಟ್ನಾ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್‌ ತರಾಟೆ

ಸಿಎಂ ಯೋಗಿ ಆದಿತ್ಯನಾಥ್ ಪರಿಹಾರ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

“ಯಾರೋ ಬಾಗಿಲು ಬಡಿದಾಗ ಎಚ್ಚರವಾಯಿತು”

ಅಪಘಾತದಿಂದ ಪಾರಾದ ಪ್ರಯಾಣಿಕರೊಬ್ಬರು, “ನಾನು ನಿದ್ರಿಸುತ್ತಿದ್ದೆ. ಯಾರೋ ಬಾಗಿಲು ಬಡಿದಾಗ ಎಚ್ಚರವಾಯಿತು. ಎದ್ದಾಗ ಎಲ್ಲೆಡೆ ದೊಡ್ಡ ಗೊಂದಲವಿತ್ತು. ಯಾವುದೇ ವಸ್ತುಗಳನ್ನು ತೆಗೆದುಕೊಳ್ಳಲಿಲ್ಲ. ಚಪ್ಪಲಿಯನ್ನೂ ಹಾಕಿಕೊಳ್ಳದೆ ಮೊಬೈಲ್ ಮಾತ್ರ ತೆಗೆದುಕೊಂಡು ಹೊರಬಂದೆ” ಎಂದು ಘಟನೆಯ ಭೀಕರತೆಯನ್ನು ವಿವರಿಸಿದ್ದಾರೆ.

ಬಸ್‌ನೊಳಗೆ ದಟ್ಟ ಹೊಗೆ ಆವರಿಸಿದ್ದರಿಂದ ಏನೂ ಕಾಣಿಸುತ್ತಿರಲಿಲ್ಲ. ಉಸಿರಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಲವರು ಹೊರಬರಲು ಪರಸ್ಪರ ತಳ್ಳಾಟ ನಡೆಸಿದ್ದು, ಕೆಲವರು ಬಸ್‌ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಬಸ್‌ನ ಚಾಲಕ ಮತ್ತು ನಿರ್ವಾಹಕರನ್ನು ಪೊಲೀಸರು ಬಂಧಿಸಿದ್ದಾರೆ.