ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ-ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಬಿಲ್ಲಾವರ್ ಪ್ರದೇಶದಲ್ಲಿ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಶೋಧ ಕಾರ್ಯಾಚರಣೆಯ ಸಮಯದಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದ ನಂತರ ಎನ್‌ಕೌಂಟರ್‌ ಆರಂಭವಾಯ್ತು.

ಭದ್ರತಾ ಪಡೆ-ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ

ಸಾಂದರ್ಭಿಕ ಚಿತ್ರ -

Priyanka P
Priyanka P Jan 13, 2026 5:50 PM

ಶ್ರೀನಗರ, ಜ. 13: ಜಮ್ಮು ಮತ್ತು ಕಾಶ್ಮೀರದ (Jammu-Kashmir) ಕಥುವಾ ಜಿಲ್ಲೆಯ ಬಿಲ್ಲಾವರ್ ಪ್ರದೇಶದಲ್ಲಿ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ಎನ್‌ಕೌಂಟರ್‌ ನಡೆದಿದೆ. ಗಸ್ತು ತಿರುಗುತ್ತಿದ್ದ ಭದ್ರತಾ ಪಡೆಯ ತಂಡದ ಮೇಲೆ ಉಗ್ರರು ಗುಂಡು ಹಾರಿಸಿದ ನಂತರ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಆರಂಭವಾಯಿತು. ಈ ವೇಳೆ ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.

ಶೋಧ ಕಾರ್ಯಾಚರಣೆಯ ಸಮಯದಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿದ ನಂತರ ಕಾರ್ಯಾಚರಣೆ ಆರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಹೋಗ್ ಅರಣ್ಯ ಪ್ರದೇಶದ ಕಾಮದ್ ನಲ್ಲಾದಿಂದ ಸುಮಾರು 10 ಕಿ.ಮೀ. ದೂರದಲ್ಲಿರುವ ಬಿಲ್ಲಾವರ್‌ನ ನಜೋಟೆ ಅರಣ್ಯ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದೆ.

ನೇಪಾಳ ಮೂಲಕ ಬಿಹಾರಕ್ಕೆ ಮೂವರು ಜೈಶ್ ಭಯೋತ್ಪಾದಕರು ಎಂಟ್ರಿ; ಹೈ ಅಲರ್ಟ್ ಘೋಷಣೆ

ಭದ್ರತಾ ಪಡೆಗಳ ಚಲನವಲನವನ್ನು ಗಮನಿಸಿದ ಶಂಕಿತ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಈ ವೇಳೆ ಭದ್ರತಾ ಪಡೆ ಸಹ ಪ್ರತಿದಾಳಿ ನಡೆಸಿತು. ಇದಾದ ಬಳಿಕ ಕಾರ್ಡನ್-ಆ್ಯಂಡ್-ಸರ್ಚ್ ಕಾರ್ಯಾಚರಣೆಯನ್ನು ಮತ್ತಷ್ಟು ಬಲಪಡಿಸಲಾಗಿದ್ದು, ಉಗ್ರರನ್ನು ಪತ್ತೆಹಚ್ಚುವ ಪ್ರಯತ್ನಗಳು ಮುಂದುವರಿದಿವೆ.

ಕಥುವಾ ಜಿಲ್ಲೆಯಲ್ಲಿ ಭಯೋತ್ಪಾದಕರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ ಕೆಲವು ದಿನಗಳ ನಂತರ ಈ ಕಾರ್ಯಾಚರಣೆ ನಡೆದಿದೆ. ಈ ಪ್ರದೇಶದಲ್ಲಿ ಇಬ್ಬರು ಅಥವಾ ಮೂವರು ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುಂಡಿನ ಚಕಮಕಿ ಪ್ರಾರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೆ ಆಪರೇಷನ್ ಸಿಂದೂರ್‌ ಕಾರ್ಯಾಚರಣೆ

ಇನ್ನು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕಾ ತಾಣಗಳನ್ನು ಗುರಿಯಾಗಿಸಿಕೊಂಡು ಕಳೆದ ವರ್ಷ ಕೈಗೊಂಡ ಆಪರೇಷನ್ ಸಿಂದೂರ್ ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಹೇಳಿದ್ದಾರೆ. ಭವಿಷ್ಯದಲ್ಲಿ ಯಾವುದೇ ರೀತಿಯ ಆಕ್ರಮಣ ತೋರಿದರೆ ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಪಾಕ್‌ಗೆ ಎಚ್ಚರಿಕೆ ನೀಡಿದ್ದಾರೆ.

ಭರ್ಜರಿ ಉಗ್ರ ಬೇಟೆ; 4 ಆಲ್‌-ಖೈದಾ ಭಯೋತ್ಪಾದಕರು ಅರೆಸ್ಟ್‌

ಏಪ್ರಿಲ್ 22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಡೆದ ಮಾರಕ ಭಯೋತ್ಪಾದಕಾ ದಾಳಿಗೆ ಪ್ರತಿಯಾಗಿ ಭಾರತ ಮೇ 7ರಂದು ಆಪರೇಷನ್ ಸಿಂದೂರ್ ಪ್ರಾರಂಭಿಸಿತು. ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಹಲವು ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಭದ್ರತಾ ಪಡೆಗಳು ದಾಳಿ ನಡೆಸಿ, 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ನಾಶ ಮಾಡಲಾಯಿತು.

ಗಣರಾಜ್ಯೋತ್ಸವ ದಿನದ ಪರೇಡ್ ಮತ್ತು ಬೀಟಿಂಗ್ ದಿ ರಿಟ್ರೀಟ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭಯೋತ್ಪಾದನಾ ಕೃತ್ಯ ನಡೆಯುವ ಅಪಾಯವಿದ್ದು, ಕಡಿಮೆ ಬೆಲೆಯ ಸ್ಫೋಟಕಗಳು, ಡ್ರೋನ್‌ಗಳನ್ನು ಕೇಂದ್ರ ಭದ್ರತಾ ಸಂಸ್ಥೆಗಳು ಗುರುತಿಸಿವೆ. ಯಾವುದೇ ಅಪಾಯ ಸಂಭವಿಸದಂತೆ ಭದ್ರತಾ ವ್ಯವಸ್ಥೆಗಳನ್ನು ದೊಡ್ಡ ಮಟ್ಟದಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಭಾರಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.