ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Terrorist Encounter: ಜಮ್ಮು ಕಾಶ್ಮೀರದ ಕುಲ್ಗಾಮ್‌ನಲ್ಲಿ ಗುಂಡಿನ ಚಕಮಕಿ; ಲಷ್ಕರ್ ಭಯೋತ್ಪಾದಕರನ್ನು ಸುತ್ತುವರಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನ ಅಖಾಲ್ ದೇವ್ಸರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಮೂವರು ಭಯೋತ್ಪಾದಕರನ್ನು ಸೇನೆ ಸುತ್ತುವರಿದಿದೆ. ಭಯೋತ್ಪಾದಕರು ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಒಂದು ಶಾಖೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್‌ಗೆ ಸೇರಿದವರು ಎಂದು ತಿಳಿದು ಬಂದಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನ ಅಖಾಲ್ ದೇವ್ಸರ್ (Terrorist Encounter) ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಮೂವರು ಭಯೋತ್ಪಾದಕರನ್ನು ಸೇನೆ ಸುತ್ತುವರಿದಿದೆ. ಭಯೋತ್ಪಾದಕರು ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಒಂದು ಶಾಖೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್‌ಗೆ ಸೇರಿದವರು ಎಂದು ತಿಳಿದು ಬಂದಿದೆ. ಶ್ರೀನಗರ ಬಳಿಯ ದಚಿಗಮ್ ರಾಷ್ಟ್ರೀಯ ಉದ್ಯಾನವನದೊಳಗೆ ಭಯೋತ್ಪಾದಕರು ಪ್ರಸ್ತುತ ಅಡಗಿಕೊಂಡಿದ್ದಾರೆ, ಅಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಭಾರತೀಯ ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಕುಲ್ಗಾಮ್‌ನ ಅಖಾಲ್ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದರು. ಅಲ್ಲಿಂದ ಸೇನೆ ಕಾರ್ಯಾಚರಣೆ ಪ್ರಾರಂಭಿಸಿತು. ಸದ್ಯ ಭಯೋತ್ಪಾದಕರಿರುವ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತಿವರಿದಿದ್ದು, ಗುಂಡಿನ ಚಕಮಕಿ ಮುಂದುವರಿದಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಜಮ್ಮು-ಕಾಶ್ಮೀರದಲ್ಲಿ ‘ಆಪರೇಷನ್ ಮಹಾದೇವ್’ ಅಡಿಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ತೀವ್ರಗೊಳಿಸಿವೆ.

ಈ ವಾರದ ಆರಂಭದಲ್ಲಿ, ಶ್ರೀನಗರದ ದಾಚಿಗಾಮ್‌ನಲ್ಲಿ ದಾಳಿಯ ಮಾಸ್ಟರ್‌ಮೈಂಡ್ ಸುಲೇಮಾನ್ ಶಾ ಸೇರಿದಂತೆ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಯಿತು. ಮರುದಿನ, ‘ಆಪರೇಷನ್ ಶಿವ ಶಕ್ತಿ’ ಅಡಿಯಲ್ಲಿ ಪೂಂಚ್ ವಲಯದ ಗಡಿರೇಖೆಯಲ್ಲಿ ಒಳನುಸುಳಲು ಯತ್ನಿಸಿದ ಇನ್ನಿಬ್ಬರು ಭಯೋತ್ಪಾದಕರನ್ನು ನಿಷ್ಕ್ರಿಯಗೊಳಿಸಲಾಯಿತು. ಕಳೆದ ಕೆಲವು ತಿಂಗಳಿಂದ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ಹಲವು ಭಯೋತ್ಪಾದಕರು ಮತ್ತು ಬೆಂಬಲಿಗರನ್ನು ಬಂಧಿಸಲಾಗಿದೆ.

ಈ ಸುದ್ದಿನ್ನೂ ಓದಿ: Terrorist in bengaluru: ಬೆಂಗಳೂರಿನಲ್ಲಿದ್ದ ಅಲ್‌ ಖೈದಾ ಮಾಸ್ಟರ್‌ ಮೈಂಡ್‌ ಭಯೋತ್ಪಾದಕಿ ಬಂಧನ!

ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯು ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಪಡಿತರವನ್ನು ವಶಪಡಿಸಿಕೊಂಡಿದ್ದು, ಡ್ರೋನ್ ಕ್ಯಾಮೆರಾ ಮೂಲಕ ಭಯೋತ್ಪಾದಕರ ಮೃತದೇಹಗಳನ್ನು ದೃಢೀಕರಿಸಲಾಗಿದೆ. ಈ ಎರಡು ಘಟನೆಗಳು ಭಾರತೀಯ ಸೇನೆಯ ಆಧುನಿಕ ತಂತ್ರಜ್ಞಾನದ ಬಳಕೆ ಮತ್ತು ಕಾರ್ಯತಂತ್ರದ ದಕ್ಷತೆಯನ್ನು ಎತ್ತಿ ತೋರಿಸುತ್ತವೆ. ಪೂಂಚ್‌ನಲ್ಲಿ ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿದಿದ್ದು, ಪರಿಸ್ಥಿತಿಯ ಮೇಲೆ ಭದ್ರತಾ ಪಡೆಗಳು ನಿಗಾ ಇರಿಸಿವೆ.