Chief Election Commissioner: ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ
ಮುಂದಿನ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುವ ಕೆಲವು ದಿನಗಳ ಮೊದಲು ಜ್ಞಾನೇಶ್ ಕುಮಾರ್ ನಿವೃತ್ತರಾಗಲಿದ್ದಾರೆ. 1989 ರ ಬ್ಯಾಚ್ ಹರಿಯಾಣ-ಕೇಡರ್ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ ವಿವೇಕ್ ಜೋಶಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.

ಜ್ಞಾನೇಶ್ ಕುಮಾರ್, ವಿವೇಕ್ ಜೋಶಿ

ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ (chief election commissioner,CEC) ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಚುನಾವಣಾ ಆಯೋಗದ (EC) ಸದಸ್ಯರ ನೇಮಕಾತಿ ಕುರಿತ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಕುಮಾರ್ ಆಗಿದ್ದಾರೆ. ಜ್ಞಾನೇಶ್ ಕುಮಾರ್ ಅಧಿಕಾರಾವಧಿಯು ಜನವರಿ 26, 2029 ರವರೆಗೆ ಇರಲಿದೆ.
ಮುಂದಿನ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುವ ಕೆಲವು ದಿನಗಳ ಮೊದಲು ಜ್ಞಾನೇಶ್ ಕುಮಾರ್ ನಿವೃತ್ತರಾಗಲಿದ್ದಾರೆ. 1989 ರ ಬ್ಯಾಚ್ ಹರಿಯಾಣ-ಕೇಡರ್ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ ವಿವೇಕ್ ಜೋಶಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ.
26ನೇ ಸಿಇಸಿಯಾಗಿ ನೇಮಕಗೊಂಡಿರುವ ಅವಧಿಯಲ್ಲಿ, ಕುಮಾರ್ ಈ ವರ್ಷದ ಕೊನೆಯಲ್ಲಿ ಬಿಹಾರ ವಿಧಾನಸಭಾ ಚುನಾವಣೆ ಮತ್ತು 2026 ರಲ್ಲಿ ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳನ್ನು ನೋಡಿಕೊಳ್ಳಲಿದ್ದಾರೆ. 2026ರಲ್ಲಿ ನಡೆಯಲಿರುವ ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗಳನ್ನು ಅವರು ನೋಡಿಕೊಳ್ಳಲಿದ್ದಾರೆ.
ಕೇಂದ್ರ ಗೃಹ ಸಚಿವಾಲಯದಲ್ಲಿದ್ದಾಗ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ನಿರ್ಧಾರಗಳನ್ನು ಜಾರಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕುಮಾರ್, ಮಾರ್ಚ್ 15, 2024 ರಂದು ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಜ್ಞಾನೇಶ್ ಕುಮಾರ್ ಅವರ ಹಿನ್ನೆಲೆಯೇನು?
ಜ್ಞಾನೇಶ್ ಕುಮಾರ್ ಅವರು ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್‌ನಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಪದವಿ ಪಡೆದಿದ್ದಾರೆ. ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಫೈನಾನ್ಶಿಯಲ್ ಅನಾಲಿಸ್ಟ್ಸ್ ಆಫ್ ಇಂಡಿಯಾದಿಂದ ಬಿಸಿನೆಸ್ ಫೈನಾನ್ಸ್ ಅನ್ನು ಸಹ ಅಧ್ಯಯನ ಮಾಡಿದ್ದಾರೆ. ಹೆಚ್ಚುವರಿಯಾಗಿ, ಅವರು ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಪರಿಸರ ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ
1988 ರ ಬ್ಯಾಚ್‌ನ ಕೇರಳ ಕೇಡರ್‌ನ ಐಎಎಸ್ ಅಧಿಕಾರಿಯಾಗಿರುವ ಜ್ಞಾನೇಶ್ ಕುಮಾರ್ ರಾಜೀವ್ ಕುಮಾರ್ ನೇತೃತ್ವದ ಮೂವರು ಸದಸ್ಯರ ಸಮಿತಿಯಲ್ಲಿದ್ದರು. 61 ವರ್ಷದ ಜ್ಞಾನೇಶ್ ಅವರು ಈ ಹಿಂದೆ ಕೇಂದ್ರ ಗೃಹ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಆಗಸ್ಟ್ 2019 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸುವ ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಮಸೂದೆಯ ಕರಡನ್ನು ರೂಪಿಸುವುದರಲ್ಲಿ ಇವರು ಪ್ರಮುಖ ಪಾತ್ರವಹಿಸಿದ್ದರು.ಆಗ ಅವರು ಗೃಹ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿದ್ದರು.
ನಂತರ ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಯಾಗಿ ಅವರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಬಗ್ಗೆ ಸುಪ್ರೀಂ ಕೋರ್ಟ್ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಿದ್ದರು. ಇನ್ನು ಜ್ಞಾನೇಶ್ ಕುಮಾರ್ ಅವರು ಗೃಹ ಸಚಿವ ಅಮಿತ್ ಶಾ ಅವರಿಗೆ ಆಪ್ತರು ಎಂದು ಮೂಲಗಳು ತಿಳಿಸಿವೆ. ಅವರು ಕಳೆದ ವರ್ಷ ಜನವರಿಯಲ್ಲಿ ನಾಗರಿಕ ಸೇವೆಯಿಂದ ನಿವೃತ್ತರಾಗಿದ್ದಾರೆ.
ಇದನ್ನೂ ಓದಿ: Election Commission: ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್: ಇವರ ಹಿನ್ನೆಲೆಯೇನು?