Narendra Modi: 70 ನೇ ರಾಜ್ಯೋತ್ಸವದ ಶುಭಾಶಯಗಳು; ಕನ್ನಡದಲ್ಲಿಯೇ ಶುಭ ಕೋರಿದ ಮೋದಿ
ಇಂದು ಇಡೀ ರಾಜ್ಯ 70 ನೇ ಕನ್ನಡ ರಾಜ್ಯೋತ್ಸವನ್ನು ಸಂಭ್ರಮದಿಂದ ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡಿಗರಿಗೆ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ. ಕನ್ನಡದಲ್ಲಿಯೇ ಟ್ವೀಟ್ ಮಾಡಿದ ಅವರು, ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ ಎಂದು ಹೇಳಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕನ್ನಡದಲ್ಲಿಯೇ ಶುಭಕೋರಿ ಟ್ವೀಟ್ ಮಾಡಿದರು. ಕರ್ನಾಟಕದ ಸಹೋದರ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಅವರು ಹೇಳಿದ್ದಾರೆ.
-
Vishakha Bhat
Nov 1, 2025 9:52 AM
ಬೆಂಗಳೂರು: ಇಂದು ಇಡೀ ರಾಜ್ಯ 70 ನೇ ಕನ್ನಡ ರಾಜ್ಯೋತ್ಸವನ್ನು ಸಂಭ್ರಮದಿಂದ ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕನ್ನಡಿಗರಿಗೆ ರಾಜ್ಯೋತ್ಸವದ (Kannada Rajyotsava) ಶುಭಾಶಯಗಳನ್ನು ಕೋರಿದ್ದಾರೆ. ಕನ್ನಡದಲ್ಲಿಯೇ ಟ್ವೀಟ್ ಮಾಡಿದ ಅವರು, ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ…
— Narendra Modi Kannada (@Namoinkannada) November 1, 2025
ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕನ್ನಡದಲ್ಲಿಯೇ ಶುಭಕೋರಿ ಟ್ವೀಟ್ ಮಾಡಿದರು. ಕರ್ನಾಟಕದ ಸಹೋದರ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕರ್ನಾಟಕವು ಕಲೆ, ನಾವೀನ್ಯತೆ ಮತ್ತು ಕಲಿಕೆಯ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಇಲ್ಲಿನ ಜನರು ನಮ್ಮ ಸಂಸ್ಕೃತಿ ಮತ್ತು ರಾಷ್ಟ್ರದ ಪ್ರಗತಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ. ರಾಜ್ಯವು ಸದಾ ಸಮೃದ್ಧಿ ಮತ್ತು ವೈಭವದೊಂದಿಗೆ ಅಭಿವೃದ್ಧಿ ಪಥದತ್ತ ಸಾಗಲಿ ಎಂದು ಹೇಳಿದ್ದಾರೆ.
ಕರ್ನಾಟಕದ ಸಹೋದರ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
— Amit Shah (@AmitShah) November 1, 2025
ಕರ್ನಾಟಕವು ಕಲೆ, ನಾವೀನ್ಯತೆ ಮತ್ತು ಕಲಿಕೆಯ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಇಲ್ಲಿನ ಜನರು ನಮ್ಮ ಸಂಸ್ಕೃತಿ ಮತ್ತು ರಾಷ್ಟ್ರದ ಪ್ರಗತಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ.
ರಾಜ್ಯವು ಸದಾ ಸಮೃದ್ಧಿ ಮತ್ತು ವೈಭವದೊಂದಿಗೆ ಅಭಿವೃದ್ಧಿ ಪಥದತ್ತ ಸಾಗಲಿ.
Warm… pic.twitter.com/rScHjd3ljC
ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, ಕನ್ನಡದ ಭಾಷೆಗೆ ತನ್ನದೇ ಆದ ಅಸ್ಮಿತೆಯಿದೆ. ಅದು ಬಹುತ್ವವನ್ನು ಗೌರವಿಸುವ ಮತ್ತು ಒಕ್ಕೂಟದ ಹಿತವನ್ನು ಕಾಯುವ ಬಾಳನೋಟದ ಅಸ್ಮಿತೆ. ಇದು ಪಂಪನಿಂದ ಕುವೆಂಪು ವರೆಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಬೆಳೆದುಬಂದಿರುವ ಜೀವನದರ್ಶನ. ಇದನ್ನೇ ಪಂಪ "ಮಾನವ ಕುಲ ತಾನೊಂದೇ ವಲಂ" ಎಂದು ಹೇಳಿದ್ದು. ಕನ್ನಡ ಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ. ಅದು ಕೇವಲ ಶಬ್ದ-ವಾಕ್ಯಗಳಲ್ಲ. ಭಾಷೆಯಲ್ಲಿ ಅದನ್ನಾಡುವ ಮನುಷ್ಯನ ಆಳವಾದ ಭಾವನೆಗಳಿರುತ್ತವೆ, ಪರಸ್ಪರ ಸಂಬಂಧಗಳಿರುತ್ತವೆ, ತನ್ನತನದ ಪ್ರಜ್ಞೆ ಇರುತ್ತದೆ. ಅದು ನಮ್ಮ ಸಂಸ್ಕೃತಿ, ಇತಿಹಾಸ, ನೆಲ-ಜಲದ ಸಂಪತ್ತು ಸೇರಿದಂತೆ ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಕನ್ನಡ ಭಾಷೆ ಈ ಅಸ್ಮಿತೆಯ ಜೀವಧಾತು. ಕೇವಲ ಅಭಿಮಾನದಿಂದ ಭಾಷೆಯ ರಕ್ಷಣೆ ಸಾಧ್ಯ ಇಲ್ಲ. ಪ್ರತಿಯೊಬ್ಬ ಕನ್ನಡಿಗನೂ ರಾಜ್ಯದಲ್ಲಿ ಕನ್ನಡದಲ್ಲೇ ಮಾತನಾಡುವ, ವ್ಯವಹರಿಸುವ ಪ್ರತಿಜ್ಞೆಗೈಯ್ಯೋಣ. ಕನ್ನಡವನ್ನು ಬಳಸೋಣ, ಬೆಳೆಸೋಣ ಎಂದು ಬರೆದಿದ್ದಾರೆ.
ಕನ್ನಡದ ಭಾಷೆಗೆ ತನ್ನದೇ ಆದ ಅಸ್ಮಿತೆಯಿದೆ. ಅದು ಬಹುತ್ವವನ್ನು ಗೌರವಿಸುವ ಮತ್ತು ಒಕ್ಕೂಟದ ಹಿತವನ್ನು ಕಾಯುವ ಬಾಳನೋಟದ ಅಸ್ಮಿತೆ. ಇದು ಪಂಪನಿಂದ ಕುವೆಂಪು ವರೆಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಬೆಳೆದುಬಂದಿರುವ ಜೀವನದರ್ಶನ. ಇದನ್ನೇ ಪಂಪ "ಮಾನವ ಕುಲ ತಾನೊಂದೇ ವಲಂ" ಎಂದು ಹೇಳಿದ್ದು. ಕನ್ನಡ ಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ. ಅದು… pic.twitter.com/8qQQVmzN37
— CM of Karnataka (@CMofKarnataka) November 1, 2025
ಡಿಸಿಎಂ ಡಿಕೆ ಶಿವಕುಮಾರ್ ಸಹ ಕನ್ನಡ ರಾಜ್ಯೋತ್ಸವದ ಶುಭ ಕೋರಿದ್ದು, ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ. ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭಾಶಯಗಳು ಎಂದು ಹೇಳಿದ್ದಾರೆ.ಸಾವಿರಾರು ವರ್ಷಗಳ ಶ್ರೀಮಂತ ಇತಿಹಾಸವನ್ನು ಹೊಂದಿರುವ ನಮ್ಮ ಕನ್ನಡ ಭಾಷೆಯನ್ನು ನಿತ್ಯ ಬಳಸಿ, ಅದನ್ನು ಇನ್ನಷ್ಟು ಉತ್ತುಂಗಕ್ಕೇರಿಸುವ ಕಾರ್ಯ ನಮ್ಮೆಲ್ಲರ ಪರಮ ಕರ್ತವ್ಯ. ಎಲ್ಲರ ನುಡಿಯಾಗಲಿ ಕನ್ನಡ, ಎಲ್ಲರ ನಡೆಯಾಗಲಿ ಕನ್ನಡ ಎಂದು ತಿಳಿಸಿದ್ದಾರೆ.