ನವದೆಹಲಿ: ಬೀದಿ ನಾಯಿಗಳ (stray dog) ಸಂತಾನಹರಣ ಯೋಜನೆಯನ್ನು ಸರಿಯಾಗಿ ಜಾರಿಗೆ ತಾರದೇ ಇರುವ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಹಾಗೂ ಬೀದಿ ನಾಯಿಗಳಿಗೆ (stray dog case) ಆಹಾರ ನೀಡುವವರನ್ನು ಮಂಗಳವಾರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ (Supreme court), ಬೀದಿ ನಾಯಿ ಕಡಿತದಿಂದ ಉಂಟಾಗುವ ಸಾವಿಗೆ ಭಾರಿ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ. ಬೀದಿ ನಾಯಿ ಕಡಿತದಿಂದ ಉಂಟಾಗುವ ಪರಿಣಾಮಗಳಿಗೆ ಅಧಿಕಾರಿಗಳು ಮತ್ತು ಬೀದಿ ನಾಯಿಗಳಿಗೆ ಆಹಾರ ನೀಡುವವರು ಹೊಣೆಗಾರರಾಗಿರುತ್ತಾರೆ ಎಂದು ಹೇಳಿದೆ.
ಬೀದಿ ನಾಯಿಗಳ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ, ಎಬಿಸಿ ನಿಯಮಗಳನ್ನು ಜಾರಿಗೆ ತರುವಲ್ಲಿ ವಿಫಲರಾದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತು. ಬೀದಿ ನಾಯಿಗಳಿಂದ ಉಂಟಾಗುವ ದಾಳಿಗಳಿಗೆ ಅವುಗಳಿಗೆ ಆಹಾರ ನೀಡುವವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಹೇಳಿದೆ.
ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಲು ಸಿದ್ಧ: ಮತ್ತೆ ಆಪರೇಷನ್ ಸಿಂದೂರ್ ಕಾರ್ಯಾಚರಣೆಯ ಸೂಚನೆ ನೀಡಿದ ಭಾರತ
ಬೀದಿ ನಾಯಿಗಳ ಸಂತಾನಹರಣ ಯೋಜನೆಯನ್ನು ಸರಿಯಾಗಿ ಜಾರಿಗೆ ತರದಿರುವ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಈ ವಿಷಯದ ಕುರಿತು 1950 ರ ದಶಕದಿಂದಲೂ ಸಂಸತ್ತು ಪರಿಶೀಲನೆಯನ್ನೇ ನಡೆಸುತ್ತಿದೆ. ಈಗ ಸಮಸ್ಯೆ ಸಾವಿರ ಪಟ್ಟು ಹೆಚ್ಚಾಗಿದೆ. ಇದರಲ್ಲಿ ಆಡಳಿತದ ವೈಫಲ್ಯ ಎದ್ದು ಕಾಣುತ್ತದೆ. ನಾಯಿ ಕಡಿತದಿಂದ ಪ್ರಾಣ ಕಳೆದುಕೊಂಡಿರುವುದಕ್ಕೆ ಸರ್ಕಾರವನ್ನೇ ಜವಾಬ್ದಾರಿಯುತವನ್ನಾಗಿ ಮಾಡಿ ಭಾರಿ ದಂಡವನ್ನು ವಿಧಿಸಲಾಗುವುದು. ಇನ್ನು ಬೀದಿ ನಾಯಿಗಳಿಗೆ ಆಹಾರ ನೀಡುವವರು ಅಷ್ಟೊಂದು ಕರುಣೆ ಇದ್ದರೆ ಅವುಗಳನ್ನು ಮನೆಗಳಿಗೆ ಕರೆದೊಯ್ದು ಸಾಕುವಂತೆ ಹೇಳಿದೆ.
ಕಳೆದ ವಾರ ಸುದೀರ್ಘ ಚರ್ಚೆ ನಡೆಸಿದ ಬಳಿಕ ಮತ್ತೆ ಈ ವಾರ ಇದೇ ವಿಷಯವನ್ನು ಕೈಗೆತ್ತಿಕೊಂಡ ನ್ಯಾಯಪೀಠ, ಎಲ್ಲಾ ಬೀದಿ ನಾಯಿಗಳನ್ನು ತೆಗೆದುಹಾಕಬೇಕು ಎಂದು ಹೇಳುತ್ತಿಲ್ಲ. ಆದರೆ ನಿಯಮಗಳನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಎರಡೂ ಕಡೆಯ ವಕೀಲರು ಶಾಸನಬದ್ಧ ನಿಬಂಧನೆಯ ಅನುಷ್ಠಾನಕ್ಕೆ ಅವಕಾಶ ನೀಡುವಂತೆ ವಿನಂತಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ನಿಟ್ಟಿನಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಕ್ರಿಯಾ ಯೋಜನೆಯನ್ನು ಹೊಂದಿವೆಯೇ ಅಥವಾ ಇಲ್ಲವೇ ಎಂದು ಪ್ರಶ್ನಿಸಿದ್ದು, ಈ ನಿಟ್ಟಿನಲ್ಲಿ ಶಾಸನಬದ್ಧ ನಿಬಂಧನೆಯ ಅನುಷ್ಠಾನವಾಗಬೇಕು. ಮತ್ತೆ ಮತ್ತೆ ಒಂದೇ ವಿಷಯಗಳು ವಿಚಾರಣೆಗೆ ಬರುತ್ತಿವೆ. ಇದು ನ್ಯಾಯಾಲಯದ ವಿಚಾರಣೆಗಿಂತ ಸಾರ್ವಜನಿಕ ವೇದಿಕೆಯಾಗಿದೆ ಎಂದು ತಿಳಿಸಿದೆ.
ಗುಜರಾತ್ ಹೈಕೋರ್ಟ್‌ನಲ್ಲಿ ವಕೀಲರೊಬ್ಬರನ್ನು ಕಚ್ಚಿದ ಪ್ರಕರಣವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್, ನಾಯಿ ಪ್ರಿಯರು ಎಂದು ಕರೆಸಿಕೊಳ್ಳುವವರನ್ನು ಕೂಡ ತರಾಟೆಗೆ ತೆಗೆದುಕೊಂಡಿತು.
Bengaluru Traffic: ಬೆಂಗಳೂರಲ್ಲಿ ಇನ್ನು ಟ್ರಾಫಿಕ್ ನಿಯಮ ಉಲ್ಲಂಘಿಸಿದ್ರೆ ಜೋಕೆ, ಎಫ್‌ಐಆರ್ ಬೀಳಬಹುದು!
ಎಬಿಸಿ ನಿಯಮಗಳು ಅವುಗಳ ಜನನ ನಿಯಂತ್ರಣಕ್ಕಾಗಿ ಮಾತ್ರ. ಅದನ್ನು ಸಾಧಿಸಿದರೂ ನಾಯಿಗಳ ದಾಳಿಯ ಅಪಾಯವನ್ನು ಎದುರಿಸಲು ಈ ನಿಯಮದಲ್ಲಿ ಯಾವುದೇ ಪರಿಹಾರವಿಲ್ಲ ಎಂದು ನ್ಯಾಯಪೀಠ ಹೇಳಿದೆ.
ವಕೀಲರಲ್ಲಿ ಒಬ್ಬರು ಬೀದಿ ನಾಯಿ ದತ್ತು ಸ್ವೀಕಾರಕ್ಕೆ ರಾಷ್ಟ್ರೀಯ ನೀತಿಯನ್ನು ರೂಪಿಸಬೇಕೆಂದು ಕರೆ ನೀಡಿದರು. ಇದಕ್ಕೆ ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರನ್ನು ತರಾಟೆಗೆ ತೆಗೆದುಕೊಂಡು, ಬೀದಿಗಳಲ್ಲಿರುವ ಅನಾಥ ಮಕ್ಕಳನ್ನು ದತ್ತು ತೆಗೆದುಕೊಳ್ಳುವಂತೆ ಏಕೆ ಪ್ರೋತ್ಸಾಹ ನೀಡಲಾಗುವುದಿಲ್ಲ ಎಂದು ಪ್ರಶ್ನಿಸಿದರು. ಬಳಿಕ ಈ ಕುರಿತ ವಿಚಾರಣೆಯನ್ನು ನ್ಯಾಯ ಪೀಠವು ಜನವರಿ 20ಕ್ಕೆ ಮುಂದೂಡಿ ಆದೇಶ ನೀಡಿದರು.