ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Heavy Rain: ದೆಹಲಿಯಲ್ಲಿ ಭಾರಿ ಮಳೆ: 120ಕ್ಕೂ ಹೆಚ್ಚು ವಿಮಾನಗಳು ವಿಳಂಬ, ಜನರ ಪರದಾಟ

ರಾಷ್ಟ್ರ ರಾಜಧಾನಿಯಲ್ಲಿಶನಿವಾರ ಬೆಳಗ್ಗೆಯಿಂದ ಭಾರಿ ಮಳೆಯಾಗುತ್ತಿದ್ದು, ವಿಮಾನ ಪ್ರಯಾಣದಲ್ಲಿ ವ್ಯತ್ಯಯ ಉಂಟಾಗಿದೆ. ಈಗಾಗಲೇ ಏರ್ ಇಂಡಿಯಾ, ಇಂಡಿಗೋ ಮತ್ತು ಸ್ಪೈಸ್‌ಜೆಟ್ ಸೇರಿದಂತೆ ಹಲವಾರು ವಿಮಾನಯಾನ ಸಂಸ್ಥೆಗಳು ವಿಳಂಬದ ಕುರಿತು ಪ್ರಯಾಣಿಕರಿಗೆ ಸಲಹೆಗಳನ್ನು ನೀಡಿವೆ. ಹಲವಾರು ಪ್ರದೇಶಗಳು ನೀರಿನಿಂದ ಆವೃತವಾಗಿದ್ದರಿಂದ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ.

ಭಾರಿ ಮಳೆ: ದೆಹಲಿಯಲ್ಲಿ ಜನಜೀವನ ಅಸ್ತವ್ಯಸ್ತ

-

ನವದೆಹಲಿ: ಭಾರಿ ಮಳೆಯಿಂದಾಗಿ ಶನಿವಾರ ದೆಹಲಿಯಲ್ಲಿ ಜನಜೀವನ (Heavy Rain) ಅಸ್ತವ್ಯಸ್ತಗೊಂಡಿದೆ. ಸುತ್ತಮುತ್ತಲಿನ ಪ್ರದೇಶಗಳು ಜಲಾವೃತ್ತಗೊಂಡಿದ್ದು, ರಸ್ತೆ, ರೈಲು, ವಿಮಾನ ಸಂಚಾರದಲ್ಲಿ ವ್ಯತ್ಯಯಗಳಾಗಿವೆ. ಏರ್ ಇಂಡಿಯಾ, ಇಂಡಿಗೋ ಮತ್ತು ಸ್ಪೈಸ್‌ಜೆಟ್ ಸೇರಿದಂತೆ ಹಲವಾರು ವಿಮಾನಯಾನ ಸಂಸ್ಥೆಗಳು ವಿಳಂಬದ ಕುರಿತು ಪ್ರಯಾಣಿಕರಿಗೆ ಸೂಚನೆಗಳನ್ನು ನೀಡುತ್ತಿವೆ. ಪಂಚಕುಯಿಯಾನ್ ಮಾರ್ಗ, ಮಥುರಾ ರಸ್ತೆ, ಭಾರತ್ ಮಂಟಪ್ ನ ಹೊರಗಿನ ರಸ್ತೆಗಳು ಜಲಾವೃತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

ಹವಾಮಾನ ಇಲಾಖೆ ಶನಿವಾರ ರಾಜಧಾನಿಯಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಿದೆ. ಇದರಂತೆ ಶನಿವಾರ ಬೆಳಗ್ಗೆಯೇ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಇದರಿಂದ ವಿಮಾನ ಪ್ರಯಾಣದಲ್ಲಿ ವ್ಯತ್ಯಯ ಉಂಟಾಗಿದೆ. ಈಗಾಗಲೇ ಏರ್ ಇಂಡಿಯಾ, ಇಂಡಿಗೋ ಮತ್ತು ಸ್ಪೈಸ್‌ಜೆಟ್ ಸೇರಿದಂತೆ ಹಲವಾರು ವಿಮಾನಯಾನ ಸಂಸ್ಥೆಗಳು ವಿಳಂಬದ ಕುರಿತು ಪ್ರಯಾಣಿಕರಿಗೆ ಸಲಹೆಗಳನ್ನು ನೀಡಿವೆ.

ಹಲವಾರು ಪ್ರದೇಶಗಳು ನೀರಿನಿಂದ ಆವೃತವಾಗಿದ್ದರಿಂದ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ಫ್ಲೈಟ್ ಟ್ರ್ಯಾಕಿಂಗ್ ವೆಬ್‌ಸೈಟ್ ಫ್ಲೈಟ್‌ರಾಡರ್‌ನ ಅಂಕಿ ಅಂಶಗಳ ಪ್ರಕಾರ ಶನಿವಾರ ಬೆಳಗ್ಗೆ ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣಕ್ಕೆ ಬರುವ ಮತ್ತು ಅಲ್ಲಿಂದ ಹೊರಡುವ ಒಟ್ಟು 135 ವಿಮಾನಗಳ ಹಾರಾಟ ಸಮಯದಲ್ಲಿ ವ್ಯತ್ಯಯವಾಗಿದೆ.



ಬೆಳಗ್ಗೆ 8.20ರ ವೇಳೆಗೆ ದೆಹಲಿ ವಿಮಾನ ನಿಲ್ದಾಣದಿಂದ ಹೋರಾಡಬೇಕಿದ್ದ 120 ವಿಮಾನಗಳು ಮತ್ತು ಬರಬೇಕಿದ್ದ 15 ವಿಮಾನಗಳ ಸಮಯದಲ್ಲಿ ವಿಳಂಬ ಉಂಟಾಗಿದೆ. ಇಂಡಿಗೋ, ಏರ್ ಇಂಡಿಯಾ ತನ್ನ ಪ್ರಯಾಣಿಕರು ಮುಂಚಿತವಾಗಿ ವಿಮಾನ ನಿಲ್ದಾಣಕ್ಕೆ ಬಂದು ತಲುಪುವಂತೆ ಮತ್ತು ಸಾಧ್ಯವಾದರೆ ಪರ್ಯಾಯ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳುವಂತೆ ಸಲಹೆಯನ್ನು ನೀಡಿದೆ ಎನ್ನಲಾಗಿದೆ.

ಇದನ್ನೂ ಓದಿ: Ujwala Scheme: ಉಜ್ವಲ ಯೋಜನೆಗೆ 12 ಸಾವಿರ ಕೋಟಿ ರೂ. ಘೋಷಣೆ; ಗೃಹಬಳಕೆ LPG ಸಿಲಿಂಡರ್‌ಗೆ 300 ರೂ. ಸಬ್ಸಿಡಿ

ಮಳೆಯಿಂದಾಗಿ ಶನಿವಾರ ದೆಹಲಿಯಾದ್ಯಂತ ಹಲವಾರು ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿದೆ. ಇದರಿಂದ ಬಹುತೇಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿದೆ ಎಂದು ಇಂಡಿಗೋ ಸಲಹಾ ಸಂಸ್ಥೆ ತಿಳಿಸಿದೆ.

ದೆಹಲಿಯಲ್ಲಿ ಭಾರೀ ಮಳೆಯಿಂದಾಗಿ ಸಂಭವನೀಯ ವಿಳಂಬದ ಬಗ್ಗೆ ಸ್ಪೈಸ್‌ಜೆಟ್ ಕೂಡ ಪ್ರಯಾಣಿಕರಿಗೆ ಎಚ್ಚರಿಕೆಯನ್ನು ನೀಡಿದ್ದು, ಪ್ರಯಾಣಿಕರು ವಿಮಾನ ಹಾರಾಟದ ಸಮಯಗಳನ್ನು ಮರು ಪರಿಶೀಲಿಸುವಂತೆ ಸೂಚನೆ ನೀಡಿದೆ.