ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಚೆನ್ನೈಯಲ್ಲಿ ಭಾರಿ ಮಳೆ: ರಸ್ತೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಇದು ಅಕ್ಟೋಬರ್ 21ರ ವರೆಗೆ ಮುಂದುವರಿಯುವ ಸಾಧ್ಯತೆ ಇದೆ. ಚೆನ್ನೈನಲ್ಲಿ ಭಾನುವಾರ ಬೆಳಗ್ಗೆಯಿಂದ ಭಾರಿ ಮಳೆಯಾಗುತ್ತಿದ್ದು, ಹಲವಾರು ರಸ್ತೆಗಳು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಸಂಚಾರ, ಜನಜೀವನ ಅಸ್ತವ್ಯಸ್ಥಗೊಂಡಿವೆ. ಉತ್ತರ ಚೆನ್ನೈ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಗ್ರಹ ಚಿತ್ರ

ಚೆನ್ನೈ: ಈಶಾನ್ಯ ಮಾನ್ಸೂನ್ (northeast monsoon) ಸಕ್ರಿಯವಾಗುತ್ತಿದ್ದಂತೆ ತಮಿಳುನಾಡಿನಾದ್ಯಂತ (tamilnadu) ಭಾರಿ ಮಳೆ (heavy rain) ಸುರಿಯುಲಾರಂಭಿಸಿದೆ. ಚೆನ್ನೈನಲ್ಲಿ (chennai) ಭಾನುವಾರ ಬೆಳಗ್ಗೆಯಿಂದಲೇ ಭಾರಿ ಮಳೆ ಸುರಿಯುತ್ತಿದೆ. ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. . ಉತ್ತರ ಚೆನ್ನೈ ಭಾಗದಲ್ಲಿ ಪ್ರವಾಹ (flood) ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತೀಯ ಹವಾಮಾನ ಇಲಾಖೆಯು (IMD) ತಮಿಳುನಾಡಿನಾದ್ಯಂತ ಅಕ್ಟೋಬರ್ 21 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಅಕ್ಟೋಬರ್ 23 ರವರೆಗೆ ಹಳದಿ ಎಚ್ಚರಿಕೆಯನ್ನು ಕೂಡ ನೀಡಲಾಗಿದೆ.

ಭಾನುವಾರ ಮುಂಜಾನೆಯೇ ಉತ್ತರ ಚೆನ್ನೈನಲ್ಲಿ ಭಾರಿ ಮಳೆ ಉಂಟಾಗಿದೆ. ಸುಮಾರು ಒಂದು ಗಂಟೆಗಿಂತ ಕಡಿಮೆ ಅವಧಿಯಲ್ಲಿ 6 ಸೆಂ.ಮೀ ನಿಂದ 10 ಸೆಂ.ಮೀ ವರೆಗೆ ಮಳೆಯಾಗಿದೆ. ಹಲವಾರು ತಗ್ಗು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಗ್ರೇಟರ್‌ ನೋಯ್ಡಾದ ಒಂದೇ ಕುಟುಂಬದ ಐವರ ಸಾವಿನ ಪ್ರಕರಣಕ್ಕೆ ಟ್ವಿಸ್ಟ್‌; ನೂಡಲ್ಸ್‌ಗೆ ವಿಷ ಬೆರೆಸಿದ್ದೇ ಮಕ್ಕಳ ತಂದೆ! ಜಮೀನು ವಿವಾದವೇ ಕೃತ್ಯಕ್ಕೆ ಕಾರಣ?

ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು ಅಧಿಕಾರಿಗಳು ಸಿದ್ದತೆಯನ್ನು ಮಾಡಿಕೊಂಡಿದ್ದಾರೆ. ಪ್ರವಾಹದಿಂದ ತುಂಬಿದ ರಸ್ತೆಗಳನ್ನು ತೆರವುಗೊಳಿಸಲು ಮತ್ತು ದೂರುಗಳಿಗೆ ಸ್ಪಂದಿಸಲು ರಾತ್ರಿಯಿಡೀ ನಗರದಾದ್ಯಂತ 15,000 ಕ್ಕೂ ಹೆಚ್ಚು ನೈರ್ಮಲ್ಯ ಮತ್ತು ಇತರ ನಾಗರಿಕ ಕಾರ್ಮಿಕರನ್ನು ನಿಯೋಜಿಸಲಾಗಿದೆ. ತಮಿಳುನಾಡು ರಾಜ್ಯ ವಿಪತ್ತು ನಿರ್ವಹಣಾ ಪಡೆ ಮುನ್ನೆಚ್ಚರಿಕೆಯಾಗಿ 100 ಸಿಬ್ಬಂದಿಯನ್ನು ನಿಯೋಜಿಸಿದೆ. ಅಪಾಯಕಾರಿ ಪರಿಸ್ಥಿತಿಯನ್ನು ನಿರ್ವಹಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳನ್ನು ಕೂಡ ಸಜ್ಜುಗೊಳಿಸಲಾಗಿದೆ.



ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ತಮಿಳುನಾಡಿನಲ್ಲಿ ಈಶಾನ್ಯ ಮಾನ್ಸೂನ್ ಆರಂಭದ ಅನಂತರ ಭಾರೀ ಮಳೆಯಾಗುತ್ತದೆ. ಇದು ದಕ್ಷಿಣ ಏಷ್ಯಾದ ಪರ್ಯಾಯ ದ್ವೀಪದಲ್ಲಿ ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ಉಂಟಾಗುವ ಗಾಳಿ ಮತ್ತು ಮಳೆಯಂತಿರುತ್ತದೆ. ತಮಿಳುನಾಡಿಗೆ ಈ ಮಳೆಯು ವಿಶೇಷವಾಗಿ ಮಹತ್ವದ್ದಾಗಿರುತ್ತದೆ.



ಕೋಲ್ಕತಾ ದುರ್ಗಾ ಪೆಂಡಾಲ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದು ಹೇಗೆ? ದುರಂತದ ಕ್ಷಣ ವಿಡಿಯೊದಲ್ಲಿ ಸೆರೆ

ರಾಜ್ಯಾದ್ಯಂತ ಅಕ್ಟೋಬರ್ 23 ರವರೆಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಹೀಗಾಗಿ 6 ಸೆಂ.ಮೀ ನಿಂದ 11 ಸೆಂ.ಮೀ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಪ್ರಾದೇಶಿಕ ಹವಾಮಾನ ಕೇಂದ್ರವು ತೀವ್ರ ಗುಡುಗು ಸಹಿತ ಮಳೆಯ ಸಂದರ್ಭದಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕೆಗಳು ಮತ್ತು ಮಾಡಬಾರದ ಸಂಗತಿಗಳ ಕುರಿತು ಸಾಮಾಜಿಕ ಮಾಧ್ಯಮದ ಎಕ್ಸ್ ಖಾತೆಯಲ್ಲಿ ಕೆಲವು ಸಲಹೆಗಳನ್ನು ನೀಡಿದೆ.

ವಿದ್ಯಾ ಇರ್ವತ್ತೂರು

View all posts by this author