ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಇಂಡಿಯಾ ಒಕ್ಕೂಟದ ಪ್ರತಿಭಟನೆ ನಡುವೆ ದೆಹಲಿಯಲ್ಲಿ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಮವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾನೆಯಿಂದಲೇ ಹಲವೆಡೆ ಗುಡುಗು ಸಹಿತ ಮಳೆಯಾಗುತ್ತಿದೆ. ಗುಡುಗು, ಮಿಂಚು ಸಹಿತ ಗಂಟೆಗೆ 60 ಕಿ.ಮೀ ವೇಗದ ಗಾಳಿ ಮತ್ತು 15 ಮಿ.ಮೀ ಗಿಂತ ಹೆಚ್ಚು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಸಂಗ್ರಹ ಚಿತ್ರ

ನವದೆಹಲಿ: ಕಳೆದ ಕೆಲವು ದಿನಗಳಿಂದ ಬಿಸಿಯಾದ ವಾತಾವರಣದಿಂದ ಕಂಗೆಟ್ಟಿದ್ದ ರಾಷ್ಟ್ರ ರಾಜಧಾನಿ ದೆಹಲಿಯ (delhi) ಜನತೆಗೆ ಸೋಮವಾರ ಮುಂಜಾನೆಯಿಂದ ಸುರಿಯುತ್ತಿರುವ ಮಳೆ (heavy rain) ತಂಪನ್ನು ನೀಡಿದೆ. ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯು ( India Meteorological Department) ರೆಡ್ ಅಲರ್ಟ್ (Red alert) ಘೋಷಿಸಿದೆ. ದೆಹಲಿ ಎನ್‌ಸಿಆರ್ (delhi- NCR) ಪ್ರದೇಶದ ಹಲವೆಡೆ ಭಾರಿ ಗುಡುಗು ಸಹಿತ ಮಳೆಯಾಗುತ್ತಿದೆ. ಇದರಿಂದ ಹಲವು ಪ್ರದೇಶಗಳಲ್ಲಿ ನೀರು ನಿಂತಿದ್ದು, ಪ್ರಯಾಣಿಕರ ಸಂಚಾರಕ್ಕೆ ಅಡ್ಡಿಯನ್ನು ಉಂಟು ಮಾಡಿದೆ.

ರಾಷ್ಟ್ರ ರಾಜಧಾನಿಯಲ್ಲಿ ತೀವ್ರ ಬಿಸಿ ವಾತಾವರಣದಿಂದಾಗಿ ಏರಿಕೆಯಾಗಿದ್ದ ತಾಪಮಾನವನ್ನು ತಗ್ಗಿಸಿ, ರಾಜಧಾನಿಯಲ್ಲಿ ತಂಪಾದ ವಾತಾವರಣವನ್ನು ಉಂಟುಮಾಡಿದೆ. ಆದಾಗ್ಯೂ, ಇದು ಹಲವು ಪ್ರದೇಶಗಳಲ್ಲಿ ನೀರು ನಿಲ್ಲುವಂತೆ ಮಾಡಿದ್ದು, ಪ್ರಯಾಣಿಕರಿಗೆ ಸಂಚಾರಕ್ಕೆ ಅಡ್ಡಿಯುಂಟು ಮಾಡಿದೆ.

ಬೀದಿ ಹೋರಾಟದಿಂದ ಕಾನೂನು ಸಮರದವರೆಗೆ: ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ವಿರುದ್ಧ ಇಂಡಿಯಾ ಒಕ್ಕೂಟದ ಪ್ರತಿಭಟನೆ ಮತ್ತಷ್ಟು ತೀವ್ರ

ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ದೆಹಲಿಯ ಹವಾಮಾನದ ಪ್ರಾತಿನಿಧಿಕ ದತ್ತಾಂಶವನ್ನು ಒದಗಿಸುವ ಸಫ್ದರ್‌ಜಂಗ್ ವೀಕ್ಷಣಾಲಯವು ಬೆಳಗ್ಗೆ 5.30 ರವರೆಗೆ 40 ಮಿ.ಮೀ ಮಳೆಯನ್ನು ದಾಖಲಿಸಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ 30 ಮಿ.ಮೀ ಮಳೆ ದಾಖಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಗುಡುಗು, ಮಿಂಚು ಸಹಿತ ಗಂಟೆಗೆ 60 ಕಿ.ಮೀ ವೇಗದ ಗಾಳಿ ಮತ್ತು 15 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.



ಮುಂದಿನ 7 ದಿನಗಳ ಮುನ್ಸೂಚನೆ ಪ್ರಕಾರ ಅಕ್ಟೋಬರ್ 13 ರಂದು ದೆಹಲಿಯಲ್ಲಿ ಗರಿಷ್ಠ ತಾಪಮಾನ 32-34 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 23-25 ​​ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ.

Aishwarya Lekshmi: ಎಐ ಹಾವಳಿಗೆ ಬೇಸತ್ತು ಇನ್‌ಸ್ಟಾಗ್ರಾಮ್ ತೊರೆದ ನಟಿ ಐಶ್ವರ್ಯ ಲಕ್ಷ್ಮಿ

ಅಕ್ಟೋಬರ್ 14 ರಂದು ಗರಿಷ್ಠ ತಾಪಮಾನವು 33- 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ತಾಪಮಾನವು 23 ರಿಂದ 25 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದೆ. ಅಕ್ಟೋಬರ್ 15 ರಂದು ಗರಿಷ್ಠ ತಾಪಮಾನ 31- 33 ಡಿಗ್ರಿ ಮತ್ತು ಕನಿಷ್ಠ ತಾಪಮಾನ 23-25 ​​ಡಿಗ್ರಿ ಸೆಲ್ಸಿಯಸ್ ಇರಲಿದೆ. ಅಕ್ಟೋಬರ್ 16 ಮತ್ತು 17 ರಂದು ಗರಿಷ್ಠ ತಾಪಮಾನವು 32 ರಿಂದ 34 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದ್ದು, ಕನಿಷ್ಠ ತಾಪಮಾನವು 22 ರಿಂದ 24 ಡಿಗ್ರಿ ಸೆಲ್ಸಿಯಸ್ ನಡುವೆ ಇರುವ ನಿರೀಕ್ಷೆಯಿದೆ. ಈ ದಿನಗಳಲ್ಲಿ ಆಕಾಶವು ಭಾಗಶಃ ಮೋಡ ಕವಿದಿರುತ್ತದೆ ಮತ್ತು ಮಳೆಯಾಗುವ ಸಾಧ್ಯತೆಗಳಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ವಿದ್ಯಾ ಇರ್ವತ್ತೂರು

View all posts by this author