Himachal Pradesh landslide: ಹಿಮಾಚಲ ಪ್ರದೇಶದಲ್ಲಿ ಬಸ್ ಮೇಲೆ ಕುಸಿದ ಬೃಹತ್ ಪ್ರಮಾಣದ ಮಣ್ಣು; 15 ಮಂದಿ ಸಾವು
ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಮಂಗಳವಾರ (ಅಕ್ಟೋಬರ್ 7) ಸಂಭವಿಸಿದ ಭಾರಿ ಭೂಕುಸಿತದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ ಖಾಸಗಿ ಬಸ್ ಮೇಲೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ರಕ್ಷಣಾ ಕಾರ್ಚಾರಣೆ ನಡೆಯುತ್ತಿದೆ.

-

ಶಿಮ್ಲಾ: ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಮಂಗಳವಾರ (ಅಕ್ಟೋಬರ್ 7) ಸಂಭವಿಸಿದ ಭಾರಿ ಭೂಕುಸಿತದಲ್ಲಿ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ ಖಾಸಗಿ ಬಸ್ ಮೇಲೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದಿದೆ (Himachal Pradesh landslide). ಅವಶೇಷಗಳಡಿ ಇನ್ನೂ ಹಲವು ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ. ಬೆಟ್ಟದ ಇಳಿಜಾರಿನಲ್ಲಿ ಬೃಹತ್ ಪ್ರಮಾಣದ ಮಣ್ಣು ಮತ್ತು ಬಂಡೆಗಳು ಉರುಳಿ ಬಸ್‌ನ ಮೇಲೆ ಬಿದ್ದು ಈ ದುರಂತ ನಡೆದಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಅಧಿಕಾರಿಗಳ ಪ್ರಕಾರ, ಒಂದು ಮಗು ಸೇರಿದಂತೆ ಮೂವರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ಪತ್ತೆ ಹಚ್ಚಲು ಶೋಧ ಕಾರ್ಯ ನಡೆಯುತ್ತಿದೆ. ದುರಂತಕ್ಕೀಡಾದ ಬಸ್‌ನಲ್ಲಿ ಸುಮಾರು 30 ಪ್ರಯಾಣಿಕರಿದ್ದರು ಎನ್ನಲಾಗಿದೆ. ಸದ್ಯ ಹೊರಬಂದಿರುವ ವಿಡಿಯೊದಲ್ಲಿ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವುದು, ಜೆಸಿಬಿ ಅವಶೇಷಗಳನ್ನು ತೆರವುಗೊಳಿಸುತ್ತಿರುವುದು ಕಂಡು ಬಂದಿದೆ.
ರಕ್ಷಣಾ ಕಾರ್ಯಾಚರಣೆಯ ವಿಡಿಯೊ ಇಲ್ಲಿದೆ:
बिलासपुर ज़िला के झंडूता विधानसभा क्षेत्र के बालूघाट (भल्लू पुल) के पास हुए भीषण भूस्खलन की ख़बर ने मन को भीतर तक झकझोर दिया है।
— Sukhvinder Singh Sukhu (@SukhuSukhvinder) October 7, 2025
इस भारी भूस्खलन में एक प्राइवेट बस के चपेट में आने से 10 लोगों के निधन का दु:खद समाचार मिला है और कई अन्य के मलबे में दबे होने की आशंका है। रेस्क्यू… pic.twitter.com/GBZslb36CP
ಅಪಘಾತದ ವೇಳೆ ಬಸ್ ಹರಿಯಾಣದ ರೋಹ್ಟಕ್‌ನಿಂದ ಬಿಲಾಸ್ಪುರ ಬಳಿಯ ಘುಮಾರ್ವಿನ್‌ಗೆ ತೆರಳುತ್ತಿತ್ತು. ಝಂಡುಟ್ಟಾ ವಿಧಾನಸಭಾ ಕ್ಷೇತ್ರದ ಭಾಲುಘಾಟ್ ಪ್ರದೇಶದಲ್ಲಿ ದುರಂತ ನಡೆದಿದೆ. ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಆಘಾತ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. "ಭೂಕುಸಿತದಲ್ಲಿ ಖಾಸಗಿ ಬಸ್ ಸಿಲುಕಿ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಹಲವಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ" ಎಂದು ಸುಖು ಎಕ್ಸ್‌ನಲ್ಲಿ ಬರೆದಿದ್ದಾರೆ.
#BreakingNews | Bus buried under debris after landslide in Himachal Pradesh's Bilaspur
— DD News (@DDNewslive) October 7, 2025
Several passengers are feared trapped. Rescue operation underway.#HimachalPradesh #Bilaspur #BilaspurAccident pic.twitter.com/Xm5CMSIFfy
"ರಕ್ಷಣಾ ಕಾರ್ಯಾಚರಣೆಗಳು ಸಮರೋಪಾದಿಯಲ್ಲಿ ನಡೆಯುತ್ತಿವೆ. ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ" ಎಂದು ಅವರು ಹೇಳಿದ್ದಾರೆ. ಇಡೀ ಪರ್ವತವು ಬಸ್ ಮೇಲೆ ಅಪ್ಪಳಿಸಿತು ಮತ್ತು ಪ್ರಯಾಣಿಕರು ಬದುಕುಳಿಯುವ ಸಾಧ್ಯತೆಗಳು ಕಡಿಮೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ. ಈವರೆಗೆ ಅವಶೇಷಗಳಿಂದ 15 ಶವಗಳನ್ನು ಹೊರತೆಗೆಯಲಾಗಿದೆ ಎಂದು ಸ್ಥಳದಲ್ಲಿರುವ ಅಧಿಕಾರಿಗಳು ದೃಢಪಡಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Landslide: ಡಾರ್ಜಿಲಿಂಗ್‌ನಲ್ಲಿ ಭೀಕರ ಭೂಕುಸಿತ, ಕನಿಷ್ಠ 23 ಜನ ಸಾವು
ಹಿಮಾಚಲ ಪ್ರದೇಶದಲ್ಲಿ ಸೋಮವಾರದಿಂದ ಮಧ್ಯಂತರ ಮಳೆಯಾಗುತ್ತಿದ್ದು, ಅಲ್ಲಲ್ಲಿ ಭೂಕುಸಿತ ಸಂಭವಿಸುತ್ತಲೇ ಇದೆ. "ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಸಂಭವಿಸಿದ ಅಪಘಾತದಿಂದ ತೀವ್ರ ದುಃಖವಾಗಿದೆ. ಈ ಸಂಕಷ್ಟದ ಸಮಯದಲ್ಲಿ ಸಂತ್ರಸ್ತರು ಮತ್ತು ಅವರ ಕುಟುಂಬಗಳೊಂದಿಗೆ ನಾವಿದ್ದೇವೆ. ಮೃತರ ಪ್ರತಿ ಸಂಬಂಧಿಕರಿಗೆ PMNRFನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಗಾಯಾಳುಗಳಿಗೆ 50,000 ರೂ. ಘೋಷಿಸಲಾಗಿದೆ" ಎಂದು ಪ್ರಧಾನ ಮಂತ್ರಿ ಕಚೇರಿ (PMO) ಎಕ್ಸ್‌ನಲ್ಲಿ ತಿಳಿಸಿದೆ.
ʼʼಬಲ್ಲು ಸೇತುವೆಯ ಬಳಿ ಈ ಘಟನೆ ಸಂಭವಿಸಿದ್ದು, ಬೆಟ್ಟದ ಇಳಿಜಾರಿನಲ್ಲಿ ದೊಡ್ಡ ಪ್ರಮಾಣದ ಮಣ್ಣು ಮತ್ತು ಬಂಡೆಗಳು ಕುಸಿದು ಮರೋಟನ್-ಕಲಾವುಲ್ ಮಾರ್ಗದಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ನೇರವಾಗಿ ಅಪ್ಪಳಿಸಿದವುʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಸ್‌ನ ಒಂದು ಭಾಗವೇ ಮುರಿದುಹೋಗಿರುವುದು ಕಂಡು ಬಂದಿದೆ. ಪೊಲೀಸರು, ಅಗ್ನಿಶಾಮಕ ದಳ ಮತ್ತು ಹಿಮಾಚಲ ಪ್ರದೇಶ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯಗಳಲ್ಲಿ ನಿರತರಾಗಿದ್ದಾರೆ.