ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾಗೆ ಈಗಲೇ ಸೋಲಿನ ಭೀತಿ ಕಾಡುತ್ತಿದೆ: ಡಿ.ಕೆ. ಶಿವಕುಮಾರ್ ವಾಗ್ದಾಳಿ

DK Shivakumar: ಅಸ್ಸಾಂನ ಗುವಾಹಟಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಸೋಲುವ ಭಯದಲ್ಲಿ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ, ಕಾಂಗ್ರೆಸ್ ವಿರುದ್ಧ ಆಧಾರರಹಿತ ಹೇಳಿಕೆ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸೋಲುವ ಭಯದಲ್ಲಿ ಹಿಮಂತ್ ಬಿಸ್ವಾ ಶರ್ಮಾ ಆಧಾರರಹಿತ ಹೇಳಿಕೆ: ಡಿಕೆಶಿ

ಅಸ್ಸಾಂನಲ್ಲಿ ಕಾಂಗ್ರೆಸ್‌ ಸಮಾವೇಶ ನಡೆಯಿತು. -

Profile
Siddalinga Swamy Feb 19, 2026 9:16 PM

ಗುವಾಹಟಿ, ಫೆ. 19: ಸೋಲುವ ಭಯದಲ್ಲಿ ಅಸ್ಸಾಂ ಸಿಎಂ, ಬಿಜೆಪಿ ಹಿಮಂತ್ ಬಿಸ್ವಾ ಶರ್ಮಾ, ಕಾಂಗ್ರೆಸ್ ವಿರುದ್ಧ ಆಧಾರರಹಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ವಾಗ್ದಾಳಿ ನಡೆಸಿದರು. ಗುವಾಹಟಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಅವರು ಪ್ರತಿಕ್ರಿಯೆ ನೀಡಿದರು.

ಹಿಮಂತ್ ಬಿಸ್ವಾ ಶರ್ಮಾ ಕಾಂಗ್ರೆಸ್ ವಿರುದ್ಧ ಪಾಕಿಸ್ತಾನ ವಿಚಾರವಾಗಿ ಆರೋಪ ಮಾಡುತ್ತಿದ್ದಾರೆ ಎಂದು ಕೇಳಿದಾಗ, ಅವರು ದುರ್ಬಲರಾಗಿದ್ದಾರೆ. ಹೀಗಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ತಮ್ಮ ಕೆಲಸಗಳ ಬಗ್ಗೆ ಆತ್ಮವಿಶ್ವಾಸವಿಲ್ಲ. ತಮ್ಮ ಬದ್ಧತೆಯ ಬಗ್ಗೆಯೇ ವಿಶ್ವಾಸ ಇಟ್ಟುಕೊಂಡಿಲ್ಲ. ಈ ಬಾರಿ ಚುನಾವಣೆಯಲ್ಲಿ ಅವರ ಪಕ್ಷ ಸೋಲಲಿದೆ. ಹೀಗಾಗಿ ಹೀಗೆ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.

ನಾನು ಮೊದಲು ಕಾಮಾಕ್ಯ ದೇವಾಲಯಕ್ಕೆ ಹೋಗಿ ಈ ರಾಜ್ಯದಲ್ಲಿ ಬದಲಾವಣೆ ತರುವಂತೆ ತಾಯಿ ಬಳಿ ಪ್ರಾರ್ಥಿಸಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಬಿಜೆಪಿ ಶಾಸಕರೇ ಕಸ ಇಟ್ಟುಕೊಳ್ಳಲಿ: ಡಿ.ಕೆ. ಶಿವಕುಮಾರ್ ವಾಗ್ದಾಳಿ

ಮತದಾರರ ಪಟ್ಟಿ ದೋಷ ಸರಿಪಡಿಸಲು ಚುನಾವಣಾ ಆಯೋಗಕ್ಕೆ ಸಲಹೆ ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಚುನಾವಣಾ ಮತದಾರರ ಪಟ್ಟಿಯಲ್ಲಿ ಲೋಪದೋಷಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಇದನ್ನು ಸರಿಪಡಿಸಲು ಬೀದಿವಾರು, ಮನೆವಾರು ಮ್ಯಾಪಿಂಗ್ ಮಾಡಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್, ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಮತದಾರರ ಪಟ್ಟಿಯಲ್ಲಿ ಒಂದೇ ಕುಟುಂಬದ ಮತದಾರರನ್ನು ಬೇರೆ ಬೇರೆ ಮತಗಟ್ಟೆಗಳು ಹಾಗೂ ಬೇರೆ ವಾರ್ಡ್ ಗಳಿಗೆ ವಿಂಗಡಿಸಲಾಗಿದೆ, ಮತದಾರರ ವಿಳಾಸದಲ್ಲಿ ಮನೆ ಸಂಖ್ಯೆ ತಪ್ಪಾಗಿರುವುದು, ರಸ್ತೆ ಸಂಖ್ಯೆ ತಪ್ಪಾಗಿ ನಮೂದಿಸಲಾಗಿದೆ. ಮತದಾರರ ಹೆಸರು ಎರಡು ಹಾಗೂ ಹೆಚ್ಚು ಬಾರಿ ಸೇರ್ಪಡೆ, ಮತ್ತೆ ಕೆಲವರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಇಷ್ಟೇ ಅಲ್ಲದೇ, ಕೆಲವು ಬೀದಿಗಳಲ್ಲಿ ಇರುವ ಮತದಾರರ ಹೆಸರುಗಳೇ ಪಟ್ಟಿಯಲ್ಲಿ ಕಣ್ಮರೆಯಾಗಿವೆ. ಮತ್ತೆ ಕೆಲವು ಮತದಾರರ ವಿಳಾಸ ಸರಿಯಾಗಿದ್ದರೂ ಅವರನ್ನು ಬೇರೆ ವಾರ್ಡ್‌ಗಳಿಗೆ ಹಾಕಲಾಗಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.