ಹೋಟೆಲ್‌ನಲ್ಲಿ ಬೆಂಕಿ ಅವಘಡ: ದುರಂತದಲ್ಲಿ ಏಳು ಮಂದಿ ಬಲಿ
Hotel Fire Accident: ಹೋಟೆಲ್‌ವೊಂದರಲ್ಲಿ ಇಂದು ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. ದುರಂತದಲ್ಲಿ ಏಳು ಮಂದಿ ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ರಾಂಪುರ್ಹತ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಹೋಟೆಲ್‌ನಲ್ಲಿ ಬೆಂಕಿ ಅವಘಡ -
ಕೋಲ್ಕತ್ತಾ, ಆ.17: ಹೋಟೆಲ್‌ವೊಂದರಲ್ಲಿ ಇಂದು ಮುಂಜಾನೆ ಅಗ್ನಿ ಅವಘಡ (fire tragedy) ಸಂಭವಿಸಿದೆ. ದುರಂತದಲ್ಲಿ ಏಳು ಮಂದಿ ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿದ್ದಾರೆ. ಪಶ್ಚಿಮ ಬಂಗಾಳದ (West Bengal) ಬಿರ್ಭುಮ್‌ನಲ್ಲಿರುವ ಹೋಟೆಲ್‌ನಲ್ಲಿ ದುರ್ಘಟನೆ ನಡೆದಿದೆ. ದೇವಾಲಯ ಪಟ್ಟಣವಾದ ತಾರಾಪೀಠದಲ್ಲಿರುವ ನಾಲ್ಕು ಅಂತಸ್ತಿನ ಹೋಟೆಲ್‌ನ ನೆಲ ಮಹಡಿಯಲ್ಲಿ ಬೆಳಗ್ಗೆ 4:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು. ಈ ವೇಳೆ ಅತಿಥಿಗಳು ನಿದ್ರಿಸುತ್ತಿದ್ದರು.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ರಾಂಪುರ್ಹತ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕರೆದೊಯ್ಯಲಾಯಿತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಉಂಟಾಗಿರಬಹುದು ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದರು.
ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವು: ಪಾಟ್ನಾದಲ್ಲಿ ಭುಗಿಲೆದ್ದ ಹಿಂಸಾಚಾರ, ಹೊತ್ತಿ ಉರಿದ ವಾಹನಗಳು
ದೆಹಲಿಯ ಮತ್ತೊಂದು ರೆಸ್ಟೋರೆಂಟ್‌ನಲ್ಲಿ ಭಾರಿ ಬೆಂಕಿ
ದೆಹಲಿಯಲ್ಲಿ ಉಪಹಾರ ಗೃಹವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸಂಪೂರ್ಣ ರೆಸ್ಟೋರೆಂಟ್ ಬೆಂಕಿಗೆ ಆಹುತಿಯಾಗಿದ್ದ ಘಟನೆ ಜೂನ್ 14ರಂದು ಸಂಭವಿಸಿತ್ತು. ಮೂರು ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಉಂಟಾಗಿತ್ತು. ಕಲ್ಕಾಜಿಯ ಗೋವಿಂದಪುರಿ ಫ್ಲೈಓವರ್ ಬಳಿಯ ಪಂಜಾಬಿ ತಡ್ಕಾ ರೆಸ್ಟೋರೆಂಟ್‌ನಲ್ಲಿ ಈ ಘಟನೆ ನಡೆದಿತ್ತು.
ಇದಕ್ಕೂ ಮುನ್ನ ಜೂನ್ 3ರಂದು ದೆಹಲಿಯ ಮಾಳವೀಯ ನಗರದ ಫ್ಲೋರಿಷ್ ಸ್ಟೇ ಬೆಡ್-ಅಂಡ್ ಬ್ರೇಕ್‌ಫಾಸ್ಟ್ ರೆಸ್ಟೋರೆಂಟ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ 21 ಮಂದಿ ಮೃತಪಟ್ಟರು. ಬೆಳಗ್ಗೆ 8.50ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡು ಪಕ್ಕದಲ್ಲಿದ್ದ ರೆಸ್ಟೋರೆಂಟ್‌ಗೂ ವ್ಯಾಪಿಸಿಕೊಂಡಿತ್ತು. ಕಿರಿದಾದ ಪ್ರದೇಶದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿ ಪರದಾಡಬೇಕಾಯಿತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸ್ಟೋರೆಂಟ್ ಮಾಲೀಕ ಲವ್‌ಕೇಶ್ ಬಜಾಜ್ ಎಂಬುವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಯಿತು. ಐದು ಅಂತಸ್ತಿನ ಕಟ್ಟಡಕ್ಕೆ ಬೆಂಕಿ ಆವರಿಸಿಕೊಂಡು ಜನರು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಅವರು ಸ್ಥಳದಿಂದ ಪರಾರಿಯಾಗಿದ್ದರು.