ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Sindoor: ಭಯೋತ್ಪಾದಕ ಶಿಬಿರಗಳ ಭಾರತ ದಾಳಿ; ಜಾಗತಿಕ ಮಾಧ್ಯಮಗಳು ವರದಿ ಮಾಡಿದ್ದೇನು?

ಮಂಗಳವಾರ ಭಾರತ ನಡೆಸಿದ ಆಪರೇಷನ್‌ ಸಿಂದೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಯನ್ನು ಧ್ವಂಸಗೊಳಿಸಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ಜೈಶ್-ಎ-ಮೊಹಮ್ಮದ್ (ಜೆಇಎಂ), ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ಗೆ ಸಂಬಂಧಿಸಿದ ಒಂಬತ್ತು ನೆಲೆಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿದೆ.

ಆಪರೇಷನ್‌ ಸಿಂಧೂರ್‌ ; ಜಾಗತಿಕ ಮಾಧ್ಯಮಗಳು ವರದಿ ಮಾಡಿದ್ದೇನು?

Profile Vishakha Bhat May 8, 2025 10:17 AM

ನವದೆಹಲಿ: ಮಂಗಳವಾರ ಭಾರತ ನಡೆಸಿದ ಆಪರೇಷನ್‌ ಸಿಂದೂರ (Operation Sindoor) ಕಾರ್ಯಾಚರಣೆಯಲ್ಲಿ ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಯನ್ನು ಧ್ವಂಸಗೊಳಿಸಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ಜೈಶ್-ಎ-ಮೊಹಮ್ಮದ್ (ಜೆಇಎಂ), ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ಗೆ ಸಂಬಂಧಿಸಿದ ಒಂಬತ್ತು ನೆಲೆಗಳನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿದೆ. ಜೆಇಎಂನ ಪ್ರಬಲ ಕೋಟೆಯಾದ ಬಹವಾಲ್ಪುರ್ ಮತ್ತು ಮುರಿಡ್ಕೆಯಲ್ಲಿ ಎರಡು ದೊಡ್ಡ ದಾಳಿಗಳನ್ನು ನಡೆಸಲಾಗಿದ್ದು, ಪ್ರತಿ ಸ್ಥಳದಲ್ಲಿ ಅಂದಾಜು 25–30 ಭಯೋತ್ಪಾದಕರು ಹತರಾಗಿದ್ದಾರೆ ಎಂದು ತಿಳಿದು ಬಂದಿದೆ.

ಜಗತ್ತಿನಾದ್ಯಂತ ಭಾರತ ನಡೆಸಿದ ದಾಳಿಗೆ ಬೆಂಬಲ ವ್ಯಕ್ತವಾಗುತ್ತಿದೆ. ಪ್ರತಿಷ್ಠಿತ ನ್ಯೂಯಾರ್ಕ್ ಟೈಮ್ಸ್ (New York Times) ತನ್ನ ಸಂಪಾದಕೀಯ ಧೋರಣೆಯಲ್ಲಿ ಬದಲಾವಣೆ ತಂದಿದೆ. ಪಾಕಿಸ್ತಾನ (Pakistan) ಮೂಲದ ದಾಳಿಕಾರರನ್ನು "ಭಯೋತ್ಪಾದಕರು" (Terrorists) ಎಂದು ತನ್ನ ಮುಖ್ಯ ಶೀರ್ಷಿಕೆಯಲ್ಲಿ ಸಂಬೋಧಿಸಿದೆ. ತನ್ನ ವೆಬ್‌ಸೈಟ್‌ನ ಮುಖಪುಟದ ಶೀರ್ಷಿಕೆಯಲ್ಲಿ, "ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಯ ಎರಡು ವಾರಗಳ ಬಳಿಕ ಭಾರತವು ಪಾಕಿಸ್ತಾನದ ಮೇಲೆ ದಾಳಿ ನಡೆಸಿತು ಎಂದು ವರದಿ ಮಾಡಿದೆ.

ಪಹಲ್ಗಾಮ್‌ ದಾಳಿಯಲ್ಲಿ ಭಾರತದ ವಿರುದ್ಧವಾಗಿ ವರದಿ ಮಾಡಿದ್ದ ಬಿಸಿಸಿಗೆ ಬಿಸಿ ಮುಟ್ಟಿಸಿದೆ. ಬಹಾವಲ್ಪುರ್ ಮತ್ತು ಮುರಿಡ್ಕೆಯಲ್ಲಿರುವ ಭಯೋತ್ಪಾದಕ ಕೇಂದ್ರಗಳ ಮೇಲೆ ಭಾರತ ದಾಳಿ ನಡೆಸಿದೆ ಎಂದು ಸುದ್ದಿ ಮಾಡಿದೆ. ಜಪಾನ್ ಟುಡೇ: "ಪ್ರವಾಸಿಗರ ಹತ್ಯೆಗೆ ಸಂಬಂಧಿಸಿದಂತೆ ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದೆ; ಎಂದು ವರದಿ ಮಾಡಿದೆ. ಎಬಿಸಿ ನ್ಯೂಸ್: "ಭಾರತ ಪಾಕಿಸ್ತಾನದ ಒಂಬತ್ತು ಸ್ಥಳಗಳ ಮೇಲೆ ದಾಳಿ ಮಾಡಿದೆ. ಪ್ರವಾಸಿಗರ ಹತ್ಯಾಕಾಂಡದ ನಂತರ ಭಾರತ ಪಾಕಿಸ್ತಾನದ ಮೇಲೆ ಬಾಂಬ್ ದಾಳಿ ಮಾಡಿದೆ ಎಂದು ಟೈಮ್ಸ್‌ ವರದಿ ತಿಳಿಸಿದೆ.

ಈ ಸುದ್ದಿಯನ್ನೂ ಓದಿ: Pahalgam Terror Attack: ಪಹಲ್ಗಾಂನಲ್ಲಿ ದಾಳಿ ನಡೆಸಿದ ಉಗ್ರ ಶೇಖ್ ಸಜಾದ್ ಗುಲ್‌ನ ಬೆಂಗಳೂರು ಲಿಂಕ್!‌

ದಾಳಿ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ವಿಕ್ರಮ್‌ ಮಿಸ್ರಿ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಅಪರಾಧಿಗಳನ್ನು ನ್ಯಾಯಾಂಗ ಕಟಕಟೆಗೆ ಕರೆತರುವುದು ಅತ್ಯವಶ್ಯಕ. ಕಾಶ್ಮೀರದಲ್ಲಿ ಅಬಿವೃದ್ಧಿ ತಡೆಯುವುದೇ ಪಾಕಿಸ್ತಾನದ ಗುರಿ. ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸುವುದು ನಮ್ಮ ಕರ್ತವ್ಯ. ಭಾರತಕ್ಕೆ ಮತ್ತೆ ಉಗ್ರರು ನುಸುಳದಂತೆ ತಡೆಯವ ನಿಟ್ಟಿನಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.