ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

"ಮಧ್ಯಪ್ರದೇಶದ ಮುಖ್ಯಮಂತ್ರಿ ಹುದ್ದೆಗೆ ನಾನು ರಾಜೀನಾಮೆ ನೀಡುತ್ತೇನೆ"; ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು 'ಅಭಿಜೀತ್ ದೀಪ್ಕೆ ರಿಸೈನ್‌ ಲೆಟರ್‌

ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗದಿಂದಾಗಿ 30ಕ್ಕೂ ಹೆಚ್ಚು ಬುಡಕಟ್ಟು (ಗಿರಿಜನ) ಮಕ್ಕಳು ಸಾವನ್ನಪ್ಪಿದ ಘಟನೆ ನಡೆದಿದ್ದು, ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜಿರಳೆ ಜನತಾ ಪಾರ್ಟಿ (CJP) ಸಂಸ್ಥಾಪಕ ಹಾಗೂ ಸಾಮಾಜಿಕ ಕಾರ್ಯಕರ್ತ ಅಭಿಜೀತ್ ದೀಪ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಗ್ರಹ ಚಿತ್ರ

ಭೋಪಾಲ್‌: ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗದಿಂದಾಗಿ 30ಕ್ಕೂ ಹೆಚ್ಚು ಬುಡಕಟ್ಟು (ಗಿರಿಜನ) ಮಕ್ಕಳು ಸಾವನ್ನಪ್ಪಿದ ಘಟನೆ ನಡೆದಿದ್ದು, ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜಿರಳೆ ಜನತಾ ಪಾರ್ಟಿ (CJP) ಸಂಸ್ಥಾಪಕ ಹಾಗೂ ಸಾಮಾಜಿಕ ಕಾರ್ಯಕರ್ತ ಅಭಿಜೀತ್ ದೀಪ್ಕೆ (Abhijeet Dipke) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಮೋಹನ್ ಯಾದವ್ ಅವರ ನೇತೃತ್ವದ ಸರ್ಕಾರದ ವೈಫಲ್ಯವನ್ನು ಟೀಕಿಸಿದ್ದಾರೆ.

ಇತ್ತೀಚೆಗೆ ಬಾಲಾಘಾಟ್‌ ಜಿಲ್ಲೆಯ ಬುಡಕಟ್ಟು ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗದಿಂದಾಗಿ ಮಕ್ಕಳು ಸರಣಿ ಸಾವಿಗೀಡಾಗಿದ್ದರು. ಈ ಹಿನ್ನೆಲೆಯಲ್ಲಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಲು ಅಭಿಜೀತ್ ದೀಪ್ಕೆ ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕೆಲವು ಸ್ಥಳೀಯರು ಮತ್ತು ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳು ಅವರನ್ನು ತಡೆದು, "ಇಷ್ಟು ತಡವಾಗಿ ಯಾಕೆ ಬಂದಿದ್ದೀರಿ? ಮಕ್ಕಳ ಹೆಣಗಳ ಮೇಲೆ ರಾಜಕೀಯ ಮಾಡಲು ಬಂದಿದ್ದೀರಾ?" ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.

ಇದಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಅವರು ಸಿಎಂ ಮೋಹನ್ ಯಾದವ್ ಅವರನ್ನು ಟೀಕಿಸಿ ರಾಜೀನಾಮೆ ಪತ್ರವನ್ನು ಹಂಚಿಕೊಂಡಿದ್ದಾರೆ. "ನಾನು ತಕ್ಷಣದಿಂದಲೇ ಜಾರಿಗೆ ಬರುವಂತೆ ಮಧ್ಯಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಮಧ್ಯಪ್ರದೇಶದ ಜನರಿಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕಾಗಿ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ಅಧಿಕೃತ ಚಿಹ್ನೆ, CMO ವಿಳಾಸ ಮತ್ತು ಸಹಿಯೊಂದಿಗೆ ಅಧಿಕೃತವಾಗಿ ಕಾಣುವಂತೆ ಮಾಡಲಾದ ನಕಲಿ ರಾಜೀನಾಮೆ ಪತ್ರವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಆಡಳಿತ ಮಂಡಳಿಯ ತೀವ್ರ ನಿರ್ಲಕ್ಷ್ಯ ಮತ್ತು ಆರೋಗ್ಯ ವ್ಯವಸ್ಥೆಯ ವೈಫಲ್ಯದಿಂದಾಗಿ ಕಳೆದ ಮೂರು ತಿಂಗಳುಗಳಲ್ಲಿ 30ಕ್ಕೂ ಹೆಚ್ಚು ಬುಡಕಟ್ಟು (ಗಿರಿಜನ) ಮಕ್ಕಳು ಸಾವನ್ನಪ್ಪಿದ್ದಾರೆ. ಈ ಭೀಕರ ದುರಂತವು ಈಗ ಇಡೀ ರಾಜ್ಯದಲ್ಲಿ ಭಾರಿ ರಾಜಕೀಯ ಮತ್ತು ಕಾನೂನಾತ್ಮಕ ಆಕ್ರೋಶಕ್ಕೆ ಕಾರಣವಾಗಿದೆ. ದುರಂತದ ತೀವ್ರತೆಯನ್ನು ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿಗೊಳಿಸಿದ್ದು, ವಸ್ತುಸ್ಥಿತಿಯ ವರದಿ ನೀಡುವಂತೆ ಆದೇಶಿಸಿದೆ.

ನೀಟ್‌ ಪ್ರತಿಭಟನೆ ಬಳಿಕ ಮತ್ತೊಂದು ಹೋರಾಟಕ್ಕೆ ಸಜ್ಜಾದ ಅಭಿಜಿತ್‌ ದೀಪ್ಕೆ; ಸರ್ಕಾರಿ ಶಾಲೆಗಳ ದುಸ್ಥಿತಿ ಕುರಿತು ಹೇಳಿದ್ದೇನು?

ಪ್ರದೇಶದಲ್ಲಿ ಆರೋಗ್ಯ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿರುವುದು ಬಹಿರಂಗವಾಗಿದೆ. ಕೇವಲ 50 ಹಾಸಿಗೆಗಳ ಸಾಮರ್ಥ್ಯವಿರುವ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಸುಮಾರು 400ಕ್ಕೂ ಹೆಚ್ಚು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆ ಆವರಣ ಕಿಕ್ಕಿರಿದು ತುಂಬಿದೆ. ದುರ್ಗಮ ರಸ್ತೆಗಳ ಕಾರಣದಿಂದ ವೈದ್ಯಕೀಯ ತಂಡಗಳು ಸಕಾಲಕ್ಕೆ ಹಳ್ಳಿಗಳನ್ನು ತಲುಪದ ಕಾರಣ ತಡವಾಗಿ ಆಸ್ಪತ್ರೆಗೆ ದಾಖಲಾದ ಹಲವು ಮಕ್ಕಳು ಹಾದಿಯಲ್ಲೇ ಜೀವ ಬಿಟ್ಟಿದ್ದಾರೆ. ಸದ್ಯ ಈ ಕುರಿತು ತನಿಖೆ ನಡೆಸಲಾಗುತ್ತಿದೆ.

Vishakha Bhat Heggar

View all posts by this author