ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನ; ಇಬ್ಬರು ಪೈಲಟ್ ಸೇಫ್

IAF's Microlight Aircraft Crashes: ಭಾರತೀಯ ವಾಯುಪಡೆಯ (ಐಎಎಫ್) ಮೈಕ್ರೋಲೈಟ್ ವಿಮಾನವು ಬುಧವಾರ (ಜನವರಿ 21) ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪತನಗೊಂಡಿದೆ. ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಸಂಗ್ರಹ ಚಿತ್ರ

ಲಖನೌ: ಭಾರತೀಯ ವಾಯುಪಡೆಯ (ಐಎಎಫ್) ಮೈಕ್ರೋಲೈಟ್ ವಿಮಾನವು ಬುಧವಾರ (ಜನವರಿ 21) ಉತ್ತರ ಪ್ರದೇಶದ (IAF's Microlight Aircraft Crashes) ಪ್ರಯಾಗ್‌ರಾಜ್‌ನಲ್ಲಿ ಪತನಗೊಂಡಿದೆ. ಇಬ್ಬರೂ ಪೈಲಟ್‌ಗಳು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಪ್ರಯಾಗ್‌ರಾಜ್‌ನಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಕೆ.ಪಿ. ಕಾಲೇಜು ಬಳಿ ವಿಮಾನವು ಅಪ್ಪಳಿಸಿದೆ. ವರದಿಗಳ ಪ್ರಕಾರ, ವಿಮಾನ ಪತನಗೊಳ್ಳುತ್ತಿದ್ದಂತೆ ಸ್ಥಳೀಯರಿಗೆ ದೊಡ್ಡ ಶಬ್ದ ಕೇಳಿಬಂದಿದೆ.

ಪೈಲಟ್‌ಗಳಿಗೆ ಗಂಭೀರ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಅಪಘಾತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ವಿಷಯದ ಬಗ್ಗೆ ವಿವರವಾದ ತನಿಖೆಯನ್ನು ಪ್ರಾರಂಭಿಸಲಾಗಿದೆ. ಪ್ರಯಾಗ್‌ರಾಜ್‌ನ ಸಂಗಮದಿಂದ 2 ಕಿ.ಮೀ ದೂರದಲ್ಲಿರುವ ಕೆರೆಯಲ್ಲಿ ಮೈಕ್ರೋಲೈಟ್ ವಿಮಾನ ಪತನಗೊಂಡಿದೆ ಎಂದು ತಿಳಿದುಬಂದಿದೆ.

ಕಳೆದ ವರ್ಷ ನವೆಂಬರ್ 21 ರಂದು ದುಬೈ ಏರ್ ಶೋ 2025 ರ ಸಂದರ್ಭದಲ್ಲಿ IAF ನ ಲಘು ಯುದ್ಧ ವಿಮಾನ (LCA) ತೇಜಸ್ ಪತನಗೊಂಡ ಎರಡು ತಿಂಗಳ ನಂತರ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ ಪೈಲಟ್, ವಿಂಗ್ ಕಮಾಂಡರ್ ನಮಶ್ ಸಯಾಲ್ ಹುತಾತ್ಮರಾಗಿದ್ದರು. ಬೆಂಗಳೂರಿನ ಹೆಚ್‌ಎಎಲ್‌ (HAL)ನಲ್ಲಿ ಲಘು ಯುದ್ಧ ವಿಮಾನವವನ್ನು ತಯಾರಿಸಲಾಗಿತ್ತು.

ಕಳೆದ ಶನಿವಾರ ಒಡಿಶಾದ ರೂರ್ಕೆಲಾದಿಂದ ಭುವನೇಶ್ವರಕ್ಕೆ ಹಾರುತ್ತಿದ್ದ ಇಂಡಿಯಾ ಒನ್ ಏರ್ ವಿಮಾನದ ಒಂಬತ್ತು ಆಸನಗಳ ಸಣ್ಣ ವಿಮಾನ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಭ್ಯವಿರುವ ಮಾಹಿತಿಯ ಪ್ರಕಾರ, ವಿಮಾನದಲ್ಲಿ ಆರು ಪ್ರಯಾಣಿಕರು ಮತ್ತು ಒಬ್ಬ ಪೈಲಟ್ ಸೇರಿದಂತೆ ಏಳು ಜನ ಇದ್ದರು. ರೂರ್ಕೆಲಾದಿಂದ ಸುಮಾರು 10–15 ಕಿಲೋಮೀಟರ್ ದೂರದಲ್ಲಿ ಈ ವಿಮಾನ ಪತನಗೊಂಡಿದೆ ಎಂದು ವರದಿಯಾಗಿದೆ.

ಅಹಮದಾಬಾದ್ ವಿಮಾನ ದುರಂತ- ಸ್ವತಂತ್ರ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ಪೈಲಟ್‌ನ ತಂದೆ ಮೊರೆ

ಘಟನೆಯಲ್ಲಿ ಪೈಲಟ್ ಸೇರಿದಂತೆ ಆರು ಜನರಿಗೆ ಗಂಭೀರ ಗಾಯಳಾಗಿವೆ. ರಕ್ಷಣಾ ತಂಡ, ಅಪಘಾತದ ಸ್ಥಳಕ್ಕೆ ತಲುಪಿ ಗಾಯಗೊಂಡ ಪ್ರಯಾಣಿಕರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ವಿಮಾನ ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಅಧಿಕಾರಿಗಳು ಅಪಘಾತದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.