ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IIM Calcutta: IIM ಕೋಲ್ಕತ್ತಾ ಅತ್ಯಾಚಾರ ಪ್ರಕರಣ; ಕರ್ನಾಟಕದ ವಿದ್ಯಾರ್ಥಿಗೆ ಜಾಮೀನು

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (IIM) ಕೋಲ್ಕತ್ತಾದದಲ್ಲಿ (Calcutta) ಜುಲೈ 11 ರಂದು ನಡೆದಿದ್ದ ಅತ್ಯಾಚಾರ ಪ್ರಕರಣದ ಮೇಲೆ ಬಂಧಿತನಾಗಿರುವ ಆರೋಪಿ ಪರಮಾನಂದ ಟೋಪಣ್ಣನವರಿಗೆ ಅಲಿಪುರ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಕೋರ್ಟ್‌ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಕೊಲ್ಕತ್ತಾ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಕೋಲ್ಕತ್ತಾದದಲ್ಲಿ (IIM-Calcutta) ಜುಲೈ 11 ರಂದು ನಡೆದಿದ್ದ ಅತ್ಯಾಚಾರ (Physical Abuse) ಪ್ರಕರಣದ ಮೇಲೆ ಬಂಧಿತನಾಗಿರುವ ಆರೋಪಿ ಪರಮಾನಂದ ಟೋಪಣ್ಣನವರಿಗೆ ಅಲಿಪುರ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಅಲಿಪೋರ್ ನ್ಯಾಯಾಲಯದ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆರೋಪಿ ವಿದ್ಯಾರ್ಥಿಗೆ 50,000 ರೂ.ಗಳ ಬಾಂಡ್ ಮೇಲೆ ಜಾಮೀನು ನೀಡಿದರು. ವಿದ್ಯಾರ್ಥಿಯು ತನ್ನ ಪಾಸ್‌ಪೋರ್ಟ್ ಅನ್ನು ಠೇವಣಿ ಇಡುವಂತೆ ಮತ್ತು ರಾಜ್ಯದ ಅನುಮತಿಯಿಲ್ಲದೆ ರಾಜ್ಯವನ್ನು ಬಿಡಬಾರದು ಎಂದು ನ್ಯಾಯಾಲಯ ನಿರ್ದೇಶಿಸಿದೆ.

ಕ್ಲಿನಿಕಲ್ ಮನಶ್ಶಾಸ್ತ್ರಜ್ಞೆಯಾಗಿರುವ ವಿದ್ಯಾರ್ಥಿನಿ ಮೇಲೆ ಆರೋಪಿಯು ಕೌನ್ಸೆಲಿಂಗ್ ಅವಧಿಗಾಗಿ ಹಾಸ್ಟೆಲ್‌ಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ದಾಖಲಿಸಲಾಗಿದೆ. ಆರೋಪಿಯನ್ನು ಈ ಆರಂಭಿಕ ಹಂತದಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡುವುದರಿಂದ ಪ್ರಕರಣದ ತನಿಖೆಗೆ ತೊಂದರೆಯಾಗುತ್ತದೆ ಎಂದು ಆರೋಪಿಸಿ, ಆತನ ನ್ಯಾಯಾಂಗ ಬಂಧನಕ್ಕೆ ಆದೇಶಿಸುವಂತೆ ಪ್ರಾಸಿಕ್ಯೂಷನ್ ವಕೀಲರು ಮನವಿ ಮಾಡಿದ್ದರು. ಆದರೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.

ಆರೋಪಿಯು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ನಿವಾಸಿಯಾಗಿದ್ದಾನೆ. ಕೋಲ್ಕತ್ತಾದ ಐಐಎಂ ಕಾನೂನು ಕಾಲೇಜಿನಲ್ಲಿ ಓದುತ್ತಿರುವ ಪರಮಾನಂದ, ಅದೇ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪವಿದೆ. ವಿದ್ಯಾರ್ಥಿನಿಯನ್ನು ಹಾಸ್ಟೆಲ್​​ಗೆ ಕರೆಸಿಕೊಂಡು ಮತ್ತು ಬರುವ ಪಾನೀಯ ಕುಡಿಸಿ ಅತ್ಯಾಚಾರವೆಸಗಿರುವ ಆರೋಪವಿದೆ. ಕೌನ್ಸೆಲಿಂಗ್ ಅವಧಿಗೆಂದು ಹಾಸ್ಟೆಲ್‌ಗೆ ಕರೆಸಲಾಗಿತ್ತು. ನಂತರ ಹಾಸ್ಟೆಲ್‌ನಲ್ಲಿ ಮಾದಕ ದ್ರವ್ಯ ಬೆರೆಸಿದ ಪಾನೀಯ ನೀಡಿದ್ದರು. ಅದನ್ನು ಸೇವಿಸಿದ ನಂತರ ಪ್ರಜ್ಞೆ ತಪ್ಪಿತ್ತು. ಪ್ರಜ್ಞೆ ಮರಳಿದ ನಂತರ ಅತ್ಯಾಚಾರ ನಡೆದಿರುವುದು ಅರಿವಾಯಿತು ಎಂದು ದೂರಿನಲ್ಲಿ ಸಂತ್ರಸ್ತೆ ಹೇಳಿದ್ದಾಳೆ. ಅಲ್ಲದೆ, ಘಟನೆ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಆರೋಪಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.

ಈ ಸುದ್ದಿಯನ್ನೂ ಓದಿ: Actor Darshan: ದರ್ಶನ್‌ಗೆ ಜಾಮೀನು ನೀಡುವಾಗ ಕರ್ನಾಟಕ ಹೈಕೋರ್ಟ್ ವಿವೇಚನೆ ಬಳಸಿಲ್ಲ; ಸುಪ್ರೀಂ ಕೋರ್ಟ್‌ ಆಕ್ಷೇಪ

ನಂತರ ಪರಮಾನಂದ ಜೈನ್​​ನನ್ನು ವಶಕ್ಕೆ ಪಡೆದಿದ್ದ ಕೋಲ್ಕತ್ತಾ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೋಲ್ಕತ್ತಾ ನ್ಯಾಯಾಲಯವು ಆರೋಪಿಯ ಜಾಮೀನು ತಿರಸ್ಕರಿಸಿ, ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿತ್ತು.