ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ; ರಾಜ್ಯದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು

ಮಧ್ಯ ಪ್ರಾಚ್ಯದಲ್ಲಿನ ಯುದ್ಧ ಜನರ ದೈನಿಂದಿನ ಜೀವನ ಮೇಲೆಯೂ ಪರಿಣಾಮ ಬೀರಿದೆ. ಚಿತ್ರದುರ್ಗ ಜಿಲ್ಲೆಯ ಕುಕ್ಕುಟೋದ್ಯಮ ಕೊಲ್ಲಿ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯಿಂದಾಗಿ ಜಿಲ್ಲೆಯ ಹಿರಿಯೂರು ಭಾಗದ ಕೋಳಿ ಫಾರಂಗಳು ಇಂದು ಸಂಕಷ್ಟಕ್ಕೆ ಸಿಲುಕಿವೆ.

ಸಂಗ್ರಹ ಚಿತ್ರ

ಬೆಂಗಳೂರು: ಮಧ್ಯ ಪ್ರಾಚ್ಯದಲ್ಲಿನ ಯುದ್ಧ ಜನರ ದೈನಿಂದಿನ ಜೀವನ ಮೇಲೆಯೂ ಪರಿಣಾಮ ಬೀರಿದೆ. ಚಿತ್ರದುರ್ಗ ಜಿಲ್ಲೆಯ ಕುಕ್ಕುಟೋದ್ಯಮ ಕೊಲ್ಲಿ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯಿಂದಾಗಿ ಜಿಲ್ಲೆಯ ಹಿರಿಯೂರು ಭಾಗದ ಕೋಳಿ ಫಾರಂಗಳು ಇಂದು ಸಂಕಷ್ಟಕ್ಕೆ ಸಿಲುಕಿವೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮರಡಿಹಳ್ಳಿ ಗ್ರಾಮದ ಸುತ್ತಮುತ್ತ ನೂರಾರು ಕೋಳಿ ಫಾರಂಗಳಿವೆ. ಇಲ್ಲಿನ ಒಂದು ಪೌಲ್ಟ್ರಿಯಲ್ಲೇ ಪ್ರತಿದಿನ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಮೊಟ್ಟೆಗಳು ಉತ್ಪತ್ತಿಯಾಗುತ್ತವೆ.

ಸಾಮಾನ್ಯವಾಗಿ ಈ ಮೊಟ್ಟೆಗಳು ಸೌದಿ ಅರೇಬಿಯಾ ಸೇರಿದಂತೆ ವಿವಿಧ ಕೊಲ್ಲಿ ರಾಷ್ಟ್ರಗಳಿಗೆ ರಫ್ತಾಗುತ್ತಿದ್ದವು. ಆದರೆ, ಇತ್ತೀಚಿನ ಯುದ್ಧದ ವಾತಾವರಣದಿಂದಾಗಿ ರಫ್ತು ಪ್ರಕ್ರಿಯೆ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದಾಗಿ ಮಾರಾಟವಾಗಬೇಕಿದ್ದ ಲಕ್ಷಾಂತರ ಮೊಟ್ಟೆಗಳು ಗೋಡೌನ್‌ಗಳಲ್ಲೇ ಉಳಿಯುವಂತಾಗಿದೆ. ಪ್ರಸ್ತುತ ಬೇಸಿಗೆ ಕಾಲವಾಗಿರುವುದರಿಂದ ಬಿಸಿಲಿನ ತಾಪಕ್ಕೆ ಮೊಟ್ಟೆಗಳ ಗುಣಮಟ್ಟ ಕಾಪಾಡುವುದು ದೊಡ್ಡ ಸವಾಲಾಗಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಗ್ಯಾಸ್ ಸಿಲಿಂಡರ್ ಕೊರತೆಯಂತಹ ಸಮಸ್ಯೆಗಳೂ ಪರೋಕ್ಷವಾಗಿ ಮೊಟ್ಟೆ ಮಾರಾಟದ ಮೇಲೆ ಪರಿಣಾಮ ಬೀರುತ್ತಿವೆ.

ಕೋಳಿಗಳಿಗೆ ಹಾಕುವ ಆಹಾರದ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದೆ. ರಫ್ತು ಸ್ಥಗಿತಗೊಂಡಿದ್ದರೂ ಕೋಳಿಗಳಿಗೆ ಆಹಾರ ಹಾಕುವುದನ್ನು ನಿಲ್ಲಿಸಲು ಸಾಧ್ಯವಿಲ್ಲದ ಕಾರಣ ಮಾಲೀಕರು ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ತಮಿಳುನಾಡಿನ ನಾಮಕ್ಕಲ್‌ನಲ್ಲಿ ಟೆಸ್ಟಿಂಗ್ ಹಾಗೂ ಪ್ಯಾಕಿಂಗ್ ಮಾಡಿ, ನಂತರ ಕೊಚ್ಚಿನ್‌ನಿಂದ ನಿತ್ಯ ಹಡಗಿನ ಮೂಲಕ ಮೈನಸ್ ಡಿಗ್ರಿ ಸೆಲ್ಸಿಯಸ್‌ನಲ್ಲಿ ಮೊಟ್ಟೆಯನ್ನು ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿತ್ತು. ಯುದ್ಧದಿಂದಾಗಿ ಫೆ. 27ರಂದು ಕೊನೆಯದಾಗಿ ಮೊಟ್ಟೆಯನ್ನು ರಫ್ತು ಮಾಡಲಾಗಿದೆ. ಜೊತೆಗೆ, ರಾಜ್ಯದಲ್ಲೇ ಮಾರಾಟ ಮಾಡಲು ದೊಡ್ಡ ಮಾರುಕಟ್ಟೆ ಸರಿಯಾಗಿ ಸಿಗುತ್ತಿಲ್ಲ.

ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷ ಪರಿಹಾರವಲ್ಲ: ಇರಾನ್‌-ಇಸ್ರೇಲ್‌ ಯುದ್ಧದ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

ಕಪ್ಪುಶಿಲೆಗೆ (Black Granite) ಜಾಗತಿಕ ಮಟ್ಟದಲ್ಲಿ ಅತ್ಯಂತ ಹೆಚ್ಚಿನ ಬೇಡಿಕೆ ಮತ್ತು ಶ್ರೇಷ್ಠತೆಯಿದೆ. ಇಲ್ಲಿನ ಕಲ್ಲುಅಮೆರಿಕ ಮತ್ತು ಯುರೋಪ್ ಜೊತೆಗೆ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಭಾರಿ ಪ್ರಮಾಣದಲ್ಲಿ ರಫ್ತಾಗುತ್ತಿದ್ದವು. ಆದರೆ ಯುದ್ಧ ಪ್ರಾರಂಭವಾದಗಿನಿಂದಲೂ ಇದು ಸ್ಥಗಿತಗೊಂಡಿದ್ದು, ವ್ಯಾಪಾರಿಗಳು ಹಾಗೂ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

Vishakha Bhat Heggar

View all posts by this author