ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Sindoor: 70 ಅಲ್ಲ... 100 ಉಗ್ರರನ್ನು ಹೊಡೆದುರುಳಿಸಿದ್ದೇವೆ ; ಸರ್ವ ಪಕ್ಷ ಸಭೆಯಲ್ಲಿ ರಾಜನಾಥ್‌ ಸಿಂಗ್‌ ಹೇಳಿಕೆ

ಆಪರೇಷನ್‌ ಸಿಂದೂರ ಕುರಿತು ಮಾಹಿತಿ ನೀಡಲು ಸರ್ಕಾರ ಕರೆದಿದ್ದ ಸರ್ವ ಪಕ್ಷ ಸಭೆ ಇದೀಗ ಮುಕ್ತಾಯಗೊಂಡಿದೆ. 1.30 ಗಂಟೆಗಳಿಗೂ ಅಧಿಕ ಕಾಲ ಸಭೆ ನಡೆಯಿತು ಸಭೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

70 ಅಲ್ಲ... 100 ಉಗ್ರರನ್ನು ಹೊಡೆದುರುಳಿಸಿದ್ದೇವೆ; ರಾಜನಾಥ್‌ ಸಿಂಗ್‌

-

Vishakha Bhat Vishakha Bhat May 8, 2025 1:48 PM

ನವದೆಹಲಿ: ಆಪರೇಷನ್‌ ಸಿಂದೂರ (Operation Sindoor) ಕುರಿತು ಮಾಹಿತಿ ನೀಡಲು ಸರ್ಕಾರ ಕರೆದಿದ್ದ ಸರ್ವ ಪಕ್ಷ ಸಭೆ ಇದೀಗ ಮುಕ್ತಾಯಗೊಂಡಿದೆ. 1.30 ಗಂಟೆಗಳಿಗೂ ಅಧಿಕ ಕಾಲ ಸಭೆ ನಡೆಯಿತು ಸಭೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ಸಭೆಯನ್ನುದ್ದೇಶಿ ಬುಧವಾರ ನಸುಕಿನಲ್ಲಿ ನಡೆದ ಕಾರ್ಯಾಚರಣೆ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷಗಳ ಬಳಿ ಒಗ್ಗಟ್ಟಿನಿಂದ ಇರಬೇಕೆಂದು ಮನವಿ ಮಾಡದ್ದಾರೆ ಎಂದು ತಿಳಿದು ಬಂದಿದೆ.

ಕಾರ್ಯಾಚರಣೆಯ ಮಾಹಿತಿ ನೀಡಿದ ರಕ್ಷಣಾ ಸಚಿವ ಬುಧವಾರ ಬೆಳಗಿನ ಜಾವ ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ 9 ಉಗ್ರರ ನೆಲೆ ಮೇಲೆ ದಾಳಿ ನಡೆಸಲಾಗಿದೆ ಎಂದು ಹೇಳಿದರು. ದಾಳಿಯಲ್ಲಿ 100 ಕ್ಕೂ ಅಧಿಕ ಉಗ್ರರು ಹತರಾಗಿದ್ದಾರೆ ಎಂಬ ಮಾಹಿತಿಯನ್ನು ಸರ್ಕಾರ ಹಂಚಿಕೊಂಡಿದೆ. ಸರ್ವಪಕ್ಷ ಸಭೆಯ ನಂತರ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, "ಬಿಕ್ಕಟ್ಟಿನ ಸಮಯದಲ್ಲಿ, ನಾವು ಸರ್ಕಾರದೊಂದಿಗಿದ್ದೇವೆ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೂಡ ಸರ್ಕಾರಕ್ಕೆ ಬೆಂಬಲ ಸೂಚಿಸುವುದಾಗಿ ತಿಳಿಸಿದ್ದಾರೆ. , ಭಯೋತ್ಪಾದಕರು ಮತ್ತು ಅವರನ್ನು ಬೆಂಬಲಿಸಿದವರ ವಿರುದ್ಧ ಕ್ರಮ ಕೈಗೊಂಡಿದ್ದಕ್ಕಾಗಿ ಪಕ್ಷವು ಭಾರತೀಯ ಸಶಸ್ತ್ರ ಪಡೆಗಳು ಮತ್ತು ಭಾರತ ಸರ್ಕಾರಕ್ಕೆ ಕಾಂಗ್ರೆಸ್‌ ಪಕ್ಷ ಬೆಂಬಲ ಸೂಚಿಸುತ್ತದೆ ಎಂದು ಕಾಂಗ್ರೆಸ್ ಸಂಸದ ಪ್ರಮೋದ್ ತಿವಾರಿ ಹೇಳಿದರು.

ನುಸುಳುಕೋರನ ಹತ್ಯೆ

ಇಂದು ನಡೆದ ಸರ್ವ ಪಕ್ಷ ಸಭೆಯಲ್ಲಿ ಗಡಿಯಲ್ಲಿನ ಉದ್ವಿಗ್ನತೆಯ ಬಗ್ಗೆ ಚರ್ಚೆ ಮಾಡಲಾಗಿದೆ. ಬುಧವಾರ ಮಧ್ಯರಾತ್ರಿ ಪಂಜಾಬ್‌ನ ಫಿರೋಜ್‌ಪುರ ಸೆಕ್ಟರ್‌ನಲ್ಲಿ ಒಳನುಸುಳುತ್ತಿದ್ದವನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ. ಅಂತಾರಾಷ್ಟ್ರೀಯ ಗಡಿಯನ್ನು ಉದ್ದೇಶಪೂರ್ವಕವಾಗಿ ದಾಟಿ ಗಡಿ ಭದ್ರತಾ ಬೇಲಿಯತ್ತ ಸಾಗುತ್ತಿರುವುದನ್ನು ನೋಡಿದ ಬಿಎಸ್‌ಎಫ್‌ ಯೋಧರು ಆತನ ಮೇಲೆ ಗುಂಡು ಹಾರಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Operation Sindoor: ಭಾರತ - ಪಾಕಿಸ್ತಾನ ಗಡಿ ರಾಜ್ಯಗಳಲ್ಲಿ ಕಟ್ಟೆಚ್ಚರ; ಪೊಲೀಸರ ರಜೆ ರದ್ದು, ಶಾಲಾ ಕಾಲೇಜಿಗೆ ರಜೆ

ಪಂಜಾಬ್‌, ರಾಜಸ್ಥಾನ ಸೇರಿದಂತೆ ಹಲವು ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಗಡಿ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಎಲ್‌ಒಸಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಅಪ್ರಚೋದಿತ ದಾಳಿಯನ್ನು ಮುಂದುವರಿಸಿದೆ. ಶೆಲ್‌ ದಾಳಿಯಲ್ಲಿ ಪೂಂಚ್‌ನಲ್ಲಿ 4 ಮಕ್ಕಳು ಸೇರಿದಂತೆ 15 ನಾಗರಿಕರು ಬಲಿಯಾಗಿದ್ದಾರೆ. 50 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕ್‌ ಸೇನೆಯ ಗುಂಡಿನ ದಾಳಿಯಲ್ಲಿ ಭಾರತದ ಯೋಧ ಲಾನ್ಸ್‌ ನಾಯಕ್‌ ದಿನೇಶ್‌ ಕುಮಾರ್‌ ಹುತಾತ್ಮರಾಗಿದ್ದಾರೆ.