Pahalgam Terror Attack: ಪಾಕಿಸ್ತಾನಕ್ಕೆ ಮತ್ತೆ ಶಾಕ್ ಕೊಟ್ಟ ಭಾರತ; ರಫ್ತು, ಆಮದು ಸಂಪೂರ್ಣ ನಿಷೇಧ
ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಸಂಪೂರ್ಣ ಹದಗೆಟ್ಟಿದೆ. ಇದೀಗ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ (Pahalgam Terror Attack) ಪ್ರತೀಕಾರವಾಗಿ ಭಾರತವು ಮತ್ತೊಂದು ಕಠಿಣ ಕ್ರಮದಲ್ಲಿ, ಪಾಕಿಸ್ತಾನದಿಂದ ನೇರ ಅಥವಾ ಪರೋಕ್ಷ ಸರಕುಗಳ ಆಮದನ್ನು ನಿಷೇಧಿಸಿದೆ ಎಂದು ವಾಣಿಜ್ಯ ಸಚಿವಾಲಯ ತಿಳಿಸಿದೆ.


ನವದೆಹಲಿ: ಭಾರತ ಹಾಗೂ ಪಾಕಿಸ್ತಾನ (Pakistan) ನಡುವಿನ ಸಂಬಂಧ ಸಂಪೂರ್ಣ ಹದಗೆಟ್ಟಿದೆ. ಇದೀಗ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ (Pahalgam Terror Attack) ಪ್ರತೀಕಾರವಾಗಿ ಭಾರತವು ಮತ್ತೊಂದು ಕಠಿಣ ಕ್ರಮದಲ್ಲಿ, ಪಾಕಿಸ್ತಾನದಿಂದ ನೇರ ಅಥವಾ ಪರೋಕ್ಷ ಸರಕುಗಳ ಆಮದನ್ನು ನಿಷೇಧಿಸಿದೆ ಎಂದು ವಾಣಿಜ್ಯ ಸಚಿವಾಲಯ ( Commerce Ministry ) ತಿಳಿಸಿದೆ. ಪಾಕಿಸ್ತಾನದಿಂದ ನೇರ ಆಮದುಗಳು ಕಡಿಮೆಯಿದ್ದರೂ, ಅಫ್ಘಾನಿಸ್ತಾನ ಹಾಗೂ ಇತರ ದೇಶಗಳಿಂದ ಪಾಕಿಸ್ತಾನದ ಮಾರ್ಗವೇ ಭಾರತಕ್ಕೆ ಆಮದಾಗುತ್ತಿತ್ತು. ಪಾಕಿಸ್ತಾನದಿಂದ ಸಾಗಣೆಯಾಗುವ ಎಲ್ಲಾ ಉತ್ಪನ್ನಗಳಿಗೆ ಅನ್ವಯಿಸುತ್ತದೆ ಎಂದು ಸಚಿವಾಲಯ ತಿಳಿಸಿದೆ.
ಪಾಕಿಸ್ತಾನಕ್ಕೆ ಯಾವುದೇ ರಫ್ತು ಹಾಗೂ ಆಮದು ಇರುವುದಿಲ್ಲ. ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತದೃಷ್ಟಿಯಿಂದ ಈ ನಿರ್ಬಂಧವನ್ನು ವಿಧಿಸಲಾಗಿದೆ. ಈ ನಿಷೇಧಕ್ಕೆ ಯಾವುದೇ ವಿನಾಯಿತಿ ನೀಡಬೇಕಾದರೆ ಭಾರತ ಸರ್ಕಾರದ ಪೂರ್ವಾನುಮೋದನೆ ಅಗತ್ಯ" ಎಂದು ವಾಣಿಜ್ಯ ಸಚಿವಾಲಯದ ಅಧಿಸೂಚನೆ ತಿಳಿಸಿದೆ. ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಏಕೈಕ ವ್ಯಾಪಾರ ಮಾರ್ಗವಾದ ವಾಘಾ-ಅಟ್ಟಾರಿ ಗಡಿಯನ್ನು ಈಗಾಗಲೇ ಮುಚ್ಚಲಾಗಿದೆ.
ಪಾಕಿಸ್ತಾನದ ಮೇಲೆ ರಾಜತಾಂತ್ರಿಕ ಯುದ್ಧವನ್ನು ಸಾರಿದೆ. ಪಾಕಿಸ್ತಾನಿ ಪ್ರಜೆಗಳ ಎಲ್ಲಾ ವೀಸಾಗಳನ್ನು ರದ್ದುಗೊಳಿಸಿತ್ತು. ಭಾರತದಲ್ಲಿ ವಾಸಿಸುವವರಿಗೆ ಭಾರತೀಯ ನೆಲವನ್ನು ತೊರೆಯಲು ಗಡುವು ನೀಡಲಾಯಿತು. ಇದರಲ್ಲಿ ಆ ವೈದ್ಯಕೀಯ ವೀಸಾಗಳು ಸಹ ಸೇರಿವೆ. ಇದಕ್ಕೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನವು ಸಿಮ್ಲಾ ಒಪ್ಪಂದ ಸೇರಿದಂತೆ ಭಾರತದೊಂದಿಗಿನ ಎಲ್ಲಾ ದ್ವಿಪಕ್ಷೀಯ ಒಪ್ಪಂದಗಳನ್ನು ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕಿತ್ತು. 1960 ರ ಸಿಂಧೂ ನದಿ ಒಪ್ಪಂದವನ್ನು ಭಾರತ ರದ್ದುಗೊಳಿಸಿದೆ. ಇದು ಲಕ್ಷಾಂತರ ಪಾಕಿಸ್ತಾನದ ನಾಗರಿಕರ ಮೇಲೆ ಪರಿಣಾಮ ಬೀರುತ್ತದೆ.
ಈ ಸುದ್ದಿಯನ್ನೂ ಓದಿ: Pahalgam Terror Attack: ಪಹಲ್ಗಾಮ್ ಉಗ್ರರ ದಾಳಿ; ಮೃತಪಟ್ಟ ಮುಸ್ಲಿಂ ಯುವಕನ ಸಹೋದರನಿಗೆ ವಕ್ಫ್ ಮಂಡಳಿಯಿಂದ ಉದ್ಯೋಗ ಘೋಷಣೆ
16 ಪಾಕಿಸ್ತಾನಿ ಯೂಟ್ಯೂಬ್‌ಗಳನ್ನು ನಿಷೇಧಿಸಿತ್ತು. ನಂತರ ಪಾಕಿಸ್ತಾನದ ನಟಿಯರಾದ ನಟಿಯರಾದ ಮಹಿರಾ ಖಾನ್, ಹನಿಯಾ ಆಮಿರ್ (Hania Amir) ಮತ್ತು ಅಲಿ ಜಾಫರ್ ಸೇರಿದಂತೆ ಜನಪ್ರಿಯ ಪಾಕಿಸ್ತಾನಿ ಕಲಾವಿದರ ಇನ್‌ಸ್ಟಾಗ್ರಾಮ್ ಖಾತೆಗಳನ್ನು ಬುಧವಾರ ಸಂಜೆ ಭಾರತದಲ್ಲಿ ನಿರ್ಬಂಧಿಸಲಾಗಿದೆ. ಪಾಕಿಸ್ತಾನದ ಕೆಲ ಸುದ್ದಿ ವಾಹಿನಿಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ. ಪಹ್ಗಲಾಮ್‌ನಲ್ಲಿ ನಡೆದಿರುವ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂದು ಸಾಕ್ಷಿ ಸಮೇತ ವಿಶ್ವಸಂಸ್ಥೆ ಎದುರು ಭಾರತ ವರದಿಯನ್ನು ಸಲ್ಲಿಸಿದೆ. ಪಾಕಿಸ್ತಾನ ಪ್ರಧಾನಿಯ ಯೂಟ್ಯೂಬ್ ಖಾತೆಯನ್ನು ಭಾರತದಲ್ಲಿ ಬ್ಯಾನ್ ಮಾಡಲಾಗಿದೆ.