ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದಿಂದ ಆಕ್ರಮಣಕಾರಿ ಕೃತ್ಯ: ಭಾರತ ಖಂಡನೆ

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ಅತ್ಯಂತ ಭೀಕರ ದಾಳಿಯನ್ನು ನಡೆಸಿದೆ. ಈ ದಾಳಿಯಲ್ಲಿ 36 ನಾಗರಿಕರು ಸಾವನ್ನಪ್ಪಿದ್ದು 163 ಮಂದಿ ಜನರು ಗಾಯಗೊಂಡಿದ್ದಾರೆ. ಇದನ್ನು ಭಾರತ ಖಂಡಿಸಿದ್ದು, ಇದೊಂದು ಭೀಕರ ಕೃತ್ಯ ಎಂದು ಹೇಳಿದೆ. ದಾಳಿಯ ಕುರಿತು ಅಫ್ಘಾನಿಸ್ತಾನ ಸರ್ಕಾರ ಹೇಳಿಕೆ ನೀಡಿದ ಬಳಿಕ ಪಾಕಿಸ್ತಾನವು ಅಫ್ಘಾನ್ ಮೇಲೆ ದಾಳಿ ನಡೆಸಿ ಉಗ್ರರನ್ನು ಕೊಂದಿರುವುದಾಗಿ ಹೇಳಿದೆ.

ಸಂಗ್ರಹ ಚಿತ್ರ

ನವದೆಹಲಿ: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ (Pakistan) ನಡೆಸಿರುವ ವಾಯುದಾಳಿಯನ್ನು (Pakistan air Strikes) ಖಂಡಿಸಿರುವ ಭಾರತ ಇದೊಂದು ಅಜಾಗರೂಕ ಮತ್ತು ಪ್ರಾದೇಶಿಕ ಶಾಂತಿಗೆ ಬೆದರಿಕೆಯೊಡ್ಡುವ ಆಕ್ರಮಣಕಾರಿ ಕೃತ್ಯ ಎಂದು ಹೇಳಿದೆ. ಅಫ್ಘಾನ್ (Afghanistan) ಭೂಪ್ರದೇಶದ ಮೇಲೆ ಸೋಮವಾರ ಮಧ್ಯರಾತ್ರಿ ಪಾಕಿಸ್ತಾನ ದಾಳಿ ನಡೆಸಿದ್ದು, ಇದರಲ್ಲಿ 36 ನಾಗರಿಕರು ಸಾವನ್ನಪ್ಪಿದ್ದು 163 ಮಂದಿ ಗಾಯಗೊಂಡಿದ್ದಾರೆ. ಈ ಕುರಿತು ಅಫ್ಘಾನಿಸ್ತಾನ ಸರ್ಕಾರ ಹೇಳಿಕೆ ಬಿಡುಗಡೆ ಮಾಡಿದ ಬೆನ್ನಲ್ಲೇ ಪಾಕಿಸ್ತಾನವು ಅಫ್ಘಾನಿಸ್ತಾನದ ಮೇಲೆ ದಾಳಿ ನಡೆಸಿ ಹಲವು ಉಗ್ರರನ್ನು ಕೊಂದಿರುವುದಾಗಿ ತಿಳಿಸಿದೆ.

ಇಸ್ಲಾಮಾಬಾದ್ ಸೋಮವಾರ ಮಧ್ಯರಾತ್ರಿ ಅಫ್ಘಾನಿಸ್ತಾನದ ಮೂರು ಪೂರ್ವ ಪ್ರಾಂತ್ಯಗಳ ಮೇಲೆ ದಾಳಿ ನಡೆಸಿದೆ. ಇದರಲ್ಲಿ 36 ನಾಗರಿಕರು ಸಾವನ್ನಪ್ಪಿದ್ದು 163 ಮಂದಿ ಗಾಯಗೊಂಡಿದ್ದಾರೆ. ಅಫ್ಘಾನಿಸ್ತಾನ ತಮ್ಮ ಪ್ರದೇಶವು ಉಗ್ರರಿಗೆ ಆಶ್ರಯ ನೀಡಿಲ್ಲ ಎಂದು ಕಾಬೂಲ್‌ನಲ್ಲಿರುವ ತಾಲಿಬಾನ್ ಸರ್ಕಾರ ತಿಳಿಸಿದೆ.

ʼʼರಾಷ್ಟ್ರಸೇವೆಗಾಗಿ ಜೀವನವನ್ನೇ ಮುಡಿಪಾಗಿ ಇಟ್ಟಿದ್ದಾರೆʼʼ: ರಾಮ ಮಂದಿರ ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಪರ ಸಹೋದರ ಬ್ಯಾಟಿಂಗ್

ಈ ಬಗ್ಗೆ ಹೇಳಿಕೆ ನೀಡಿರುವ ಪಾಕಿಸ್ತಾನದ ಅಧಿಕಾರಿಗಳು ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ನಡೆಸಿರುವ ದಾಳಿಯಲ್ಲಿ 29 ಉಗ್ರರು ಸಾವನ್ನಪ್ಪಿದ್ದಾರೆ. ಇವರು ವಾರಾಂತ್ಯದಲ್ಲಿ ಕರಾಚಿ ಮೇಲೆ ದಾಳಿ ನಡೆಸಿದ್ದ ಉಗ್ರರು ಎಂದು ತಿಳಿಸಿದೆ.

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ನಡೆಸಿರುವ ದಾಳಿಯನ್ನು ಖಂಡಿಸಿರುವ ಭಾರತದ ವಿದೇಶಾಂಗ ಸಚಿವಾಲಯ, ಭಾನುವಾರ ಮತ್ತು ಸೋಮವಾರ ಅಫ್ಘಾನ್ ಭೂಪ್ರದೇಶದ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಗಳನ್ನು ಭಾರತ ಬಲವಾಗಿ ಖಂಡಿಸುತ್ತದೆ. ಈ ದಾಳಿಯಲ್ಲಿ ಇಸ್ಲಾಮಾಬಾದ್ ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದೆ. ಆದರೆ ಇದರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವಾರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.



ಇದೊಂದು ಪಾಕಿಸ್ತಾನದ ಸ್ಪಷ್ಟ ಆಕ್ರಮಣಕಾರಿ ಕೃತ್ಯ. ಅಫ್ಘಾನಿಸ್ತಾನದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ. ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗೆ ನೇರ ಬೆದರಿಕೆಯಾಗಿದೆ. ಪಾಕಿಸ್ತಾನದ ನಿರಂತರ ಅಜಾಗರೂಕ ನಡವಳಿಕೆ ಮತ್ತು ಆಂತರಿಕ ವೈಫಲ್ಯಗಳನ್ನು ಹೊರಗೆ ತೋರ್ಪಡಿಸುವ ವ್ಯರ್ಥ ಪ್ರಯತ್ನವನ್ನು ಪ್ರತಿಬಿಂಬಿಸಿದೆ ಎಂದು ಹೇಳಿದೆ.

ಪ್ರೀತಿಪಾತ್ರರನ್ನು ಕಳೆದುಕೊಂಡ ಅಫ್ಘಾನ್ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಭಾರತ, ಅಫ್ಘಾನಿಸ್ತಾನದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ತನ್ನ ದೃಢವಾದ ಬೆಂಬಲ ನೀಡುವುದಾಗಿ ಹೇಳಿದೆ.

ಇತ್ತೀಚಿನ ಕೆಲವು ತಿಂಗಳಲ್ಲಿ ಪಾಕಿಸ್ತಾನವು ಹಲವು ಬಾರಿ ಅಫ್ಘಾನಿಸ್ತಾನದ ಮೇಲೆ ದಾಳಿ ನಡೆಸಿದ್ದು, ಸೋಮವಾರ ಮಾತ್ರ ಅತ್ಯಂತ ಭಯಾನಕ ದಾಳಿ ನಡೆಸಿದೆ. 2021ರಲ್ಲಿ ಕಾಬೂಲ್‌ನಲ್ಲಿ ತಾಲಿಬಾನ್ ಸರ್ಕಾರ ಅಧಿಕಾರ ವಹಿಸಿಕೊಂಡ ಮೇಲೆ ಇದು ಅತ್ಯಂತ ಹಿಂಸಾತ್ಮಕ ದಾಳಿ ಎಂದು ಬಣ್ಣಿಸಲಾಗಿದೆ.

3 ತಿಂಗಳ ಹಿಂದೆಯೇ ಅಯೋಧ್ಯೆ ರಾಮ ಮಂದಿರ ದೇಣಿಗೆ ಕಳವು ಪತ್ತೆ ಹಚ್ಚಿದ್ದ ಎಸ್‌ಬಿಐ; ಸಿಬ್ಬಂದಿ ವಜಾ ಶಿಫಾರಸು ತಳ್ಳಿ ಹಾಕಿದ್ದ ಟ್ರಸ್ಟ್‌ ಅಧಿಕಾರಿಗಳು

ಜನರನ್ನು ರಕ್ಷಿಸಲು ತೆರಳಿದ ಅಫ್ಘಾನಿಸ್ತಾನದ ಉಪ ಸರ್ಕಾರಿ ವಕ್ತಾರ ಹಮ್ದುಲ್ಲಾ ಫಿತ್ರಾತ್ ಅವರು ಪಕ್ತಿಯಾ ಮೇಲೆ ಅನೈತಿಕ ಡಬಲ್-ಟ್ಯಾಪ್ ಬಾಂಬ್ ದಾಳಿ ನಡೆಸಲಗಿದೆ ಎಂದು ಹೇಳಿದ್ದಾರೆ. ಇದಕ್ಕೆ ಪಾಕಿಸ್ತಾನದ ಮಿಲಿಟರಿ ಅಥವಾ ಪ್ರಧಾನ ಮಂತ್ರಿ ಕಚೇರಿ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ ಎನ್ನಲಾಗಿದೆ.

ವಿದ್ಯಾ ಇರ್ವತ್ತೂರು

View all posts by this author