Pakistan Diplomate Expels: ಪಾಕಿಸ್ತಾನಿ ರಾಜತಾಂತ್ರಿಕ ಅಧಿಕಾರಿಗೆ ಭಾರತ ತೊರೆಯಲು 24 ಗಂಟೆಗಳ ಗಡುವು
Pakistani official Expels: ಪಾಕಿಸ್ತಾನ ರಾಯಭಾರಿ ಕಚೇರಿಯಲ್ಲಿ ನಿಯೋಜನೆಗೊಂಡಿರುವ ಪಾಕಿಸ್ತಾನಿ ಅಧಿಕಾರಿಯೊಬ್ಬರನ್ನು 'ಪರ್ಸನಾ ನಾನ್ ಗ್ರಾಟಾ' ಎಂದು ಘೋಷಿಸಿರುವ ಭಾರತ ಸರ್ಕಾರ, 24 ಗಂಟೆಗಳ ಒಳಗೆ ದೇಶ ಬಿಟ್ಟು ಹೋಗುವಂತೆ ಆದೇಶಿಸಿದೆ. ಆ ಅಧಿಕಾರಿ ದೆಹಲಿಯಲ್ಲಿ ಕುಳಿತುಕೊಂಡು ಭಾರತ ವಿರೋಧಿ ಚಟುವಟಿಕೆಗಳು ಮತ್ತು ಪಿತೂರಿಗಳಲ್ಲಿ ಭಾಗಿಯಾಗಿದ್ದಎನ್ನಲಾಗಿದೆ.


ನವದೆಹಲಿ: ಪಾಕಿಸ್ತಾನ ರಾಯಭಾರಿ ಕಚೇರಿಯಲ್ಲಿ ನಿಯೋಜನೆಗೊಂಡಿರುವ ಪಾಕಿಸ್ತಾನಿ ಅಧಿಕಾರಿಯೊಬ್ಬರನ್ನು 'ಪರ್ಸನಾ ನಾನ್ ಗ್ರಾಟಾ' ಎಂದು ಘೋಷಿಸಿರುವ ಭಾರತ ಸರ್ಕಾರ, 24 ಗಂಟೆಗಳ ಒಳಗೆ ದೇಶ ಬಿಟ್ಟು ಹೋಗುವಂತೆ ಆದೇಶಿಸಿದೆ(Pakistani official Expels). ದೆಹಲಿಯಲ್ಲಿ ಕುಳಿತು ಈ ವ್ಯಕ್ತಿ ಭಾರತದ ವಿರುದ್ಧ ಸಂಚು ರೂಪಿಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ಭಾರತ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡು ಆತನನ್ನು ದೇಶ ತೊರೆಯುವಂತೆ ಆದೇಶ ಹೊರಡಿಸಿದೆ.
The Government of India has declared a Pakistani official, working at the Pakistan High Commission in New Delhi, persona non grata for indulging in activities not in keeping with his official status in India. The official has been asked to leave India within 24 hours. Charge d’… pic.twitter.com/0kS1Hg2lXJ
— ANI (@ANI) May 13, 2025
ವಿದೇಶಾಂಗ ಸಚಿವಾಲಯದ ಪ್ರಕಾರ, ಈ ಅಧಿಕಾರಿ ಭಾರತದಲ್ಲಿನ ತನ್ನ ರಾಜತಾಂತ್ರಿಕ ಮಾನದಂಡಗಳಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಆ ಅಧಿಕಾರಿ ದೆಹಲಿಯಲ್ಲಿ ಕುಳಿತುಕೊಂಡು ಭಾರತ ವಿರೋಧಿ ಚಟುವಟಿಕೆಗಳು ಮತ್ತು ಪಿತೂರಿಗಳಲ್ಲಿ ಭಾಗಿಯಾಗಿದ್ದ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಸರ್ಕಾರ, ರಾಜತಾಂತ್ರಿಕ ಮಾನದಂಡಗಳ ಉಲ್ಲಂಘನೆಯನ್ನು ಸಹಿಸುವುದಿಲ್ಲ ಮತ್ತು ಅಂತಹ ಸಂದರ್ಭಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದೆ. ಎರಡೂ ದೇಶಗಳ ನಡುವಿನ ಸಂಬಂಧಗಳು ಈಗಾಗಲೇ ಉದ್ವಿಗ್ನಗೊಂಡಿರುವ ಸಂದರ್ಭದಲ್ಲಿ ಈ ಬೆಳವಣಿಗೆಯನ್ನು ಅತ್ಯಂತ ಮುಖ್ಯವೆಂದು ಪರಿಗಣಿಸಲಾಗುತ್ತಿದೆ. ಇದಕ್ಕೂ ಮುಂಚೆಯೇ, ಭಾರತವು ಪಾಕಿಸ್ತಾನದ ಹೆಚ್ಚಿನ ರಾಜತಾಂತ್ರಿಕರನ್ನು ದೇಶ ತೊರೆಯುವಂತೆ ಆದೇಶಿಸಿತ್ತು.
ಈ ಸುದ್ದಿಯನ್ನೂ ಓದಿ: India And Pakistan Conflict: ಹಿಂದಿನ ಭಾರತ-ಪಾಕ್ 4 ಯುದ್ಧಗಳು ಎಷ್ಟು ದಿನಗಳ ಕಾಲ ನಡೆದಿದ್ದವು? ಇಲ್ಲಿದೆ ನಿಮಗೆ ಗೊತ್ತಿಲ್ಲದ ಮಾಹಿತಿ