ನವದೆಹಲಿ: ಪಾಕಿಸ್ತಾನ ರಾಯಭಾರಿ ಕಚೇರಿಯಲ್ಲಿ ನಿಯೋಜನೆಗೊಂಡಿರುವ ಪಾಕಿಸ್ತಾನಿ ಅಧಿಕಾರಿಯೊಬ್ಬರನ್ನು 'ಪರ್ಸನಾ ನಾನ್ ಗ್ರಾಟಾ' ಎಂದು ಘೋಷಿಸಿರುವ ಭಾರತ ಸರ್ಕಾರ, 24 ಗಂಟೆಗಳ ಒಳಗೆ ದೇಶ ಬಿಟ್ಟು ಹೋಗುವಂತೆ ಆದೇಶಿಸಿದೆ(Pakistani official Expels). ದೆಹಲಿಯಲ್ಲಿ ಕುಳಿತು ಈ ವ್ಯಕ್ತಿ ಭಾರತದ ವಿರುದ್ಧ ಸಂಚು ರೂಪಿಸುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ಭಾರತ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡು ಆತನನ್ನು ದೇಶ ತೊರೆಯುವಂತೆ ಆದೇಶ ಹೊರಡಿಸಿದೆ.
ವಿದೇಶಾಂಗ ಸಚಿವಾಲಯದ ಪ್ರಕಾರ, ಈ ಅಧಿಕಾರಿ ಭಾರತದಲ್ಲಿನ ತನ್ನ ರಾಜತಾಂತ್ರಿಕ ಮಾನದಂಡಗಳಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಆ ಅಧಿಕಾರಿ ದೆಹಲಿಯಲ್ಲಿ ಕುಳಿತುಕೊಂಡು ಭಾರತ ವಿರೋಧಿ ಚಟುವಟಿಕೆಗಳು ಮತ್ತು ಪಿತೂರಿಗಳಲ್ಲಿ ಭಾಗಿಯಾಗಿದ್ದ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಸರ್ಕಾರ, ರಾಜತಾಂತ್ರಿಕ ಮಾನದಂಡಗಳ ಉಲ್ಲಂಘನೆಯನ್ನು ಸಹಿಸುವುದಿಲ್ಲ ಮತ್ತು ಅಂತಹ ಸಂದರ್ಭಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದೆ. ಎರಡೂ ದೇಶಗಳ ನಡುವಿನ ಸಂಬಂಧಗಳು ಈಗಾಗಲೇ ಉದ್ವಿಗ್ನಗೊಂಡಿರುವ ಸಂದರ್ಭದಲ್ಲಿ ಈ ಬೆಳವಣಿಗೆಯನ್ನು ಅತ್ಯಂತ ಮುಖ್ಯವೆಂದು ಪರಿಗಣಿಸಲಾಗುತ್ತಿದೆ. ಇದಕ್ಕೂ ಮುಂಚೆಯೇ, ಭಾರತವು ಪಾಕಿಸ್ತಾನದ ಹೆಚ್ಚಿನ ರಾಜತಾಂತ್ರಿಕರನ್ನು ದೇಶ ತೊರೆಯುವಂತೆ ಆದೇಶಿಸಿತ್ತು.
ಈ ಸುದ್ದಿಯನ್ನೂ ಓದಿ: India And Pakistan Conflict: ಹಿಂದಿನ ಭಾರತ-ಪಾಕ್ 4 ಯುದ್ಧಗಳು ಎಷ್ಟು ದಿನಗಳ ಕಾಲ ನಡೆದಿದ್ದವು? ಇಲ್ಲಿದೆ ನಿಮಗೆ ಗೊತ್ತಿಲ್ಲದ ಮಾಹಿತಿ