ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

India Pakistan Attack: ಭಾರತದ ಕ್ಷಿಪಣಿ ದಾಳಿಗೆ ಪಾಕ್‌ನ 4 ವಾಯುನೆಲೆ ಧ್ವಂಸ

ಪಾಕಿಸ್ತಾನ ಶುಕ್ರವಾರ ರಾತ್ರಿ ವಾಯುದಾಳಿಯ ತೀವ್ರತೆಯನ್ನು ಹೆಚ್ಚಿಸಿದ ನಂತರ ಭಾರತ ಇಂದು ಬೆಳಿಗ್ಗೆ ಶ್ರೀನಗರದಿಂದ ಐದು ಕ್ಷಿಪಣಿಗಳನ್ನು ಹಾರಿಸಿತು. ಭಾರತದ ನಾಗರಿಕರು ಮತ್ತು ಸೇನಾ ನೆಲೆಯನ್ನು ಗುರಿಯಾಗಿಸಿ ಪಾಕಿಸ್ತಾನ ನಡೆಸುತ್ತಿದ್ದ ನಿರಂತರ ದಾಳಿಗೆ ಭಾರತ ಇದೀಗ ತಕ್ಕ ಪ್ರತ್ಯುತ್ತರ ನೀಡಿದೆ.

ಕರಾಚಿ: ಪಶ್ಚಿಮ ಮತ್ತು ಉತ್ತರ ಗಡಿಗಳಲ್ಲಿರುವ ನಗರಗಳಲ್ಲಿನ ಭಾರತೀಯ ಮಿಲಿಟರಿ ನೆಲೆಗಳನ್ನು ಗುರಿಯಾಗಿರಿಸಿ ಪಾಕಿಸ್ತಾನ ಡ್ರೋನ್‌ಗಳು ಮತ್ತು ಕ್ಷಿಪಣಿ ದಾಳಿ(India Pakistan Attack) ನಡೆಸಿದ ಬೆನ್ನಲ್ಲೇ ಭಾರತೀಯ ಸಶಸ್ತ್ರ ಪಡೆಗಳು ಕ್ಷಿಪಣಿ ದಾಳಿ ನಡೆಸಿದ್ದು ಇಸ್ಲಾಮಾಬಾದ್‌ನ ನಾಲ್ಕು ವಾಯುನೆಲೆಗಳನ್ನು ಧ್ವಂಸ ಮಾಡಿದೆ ಎಂದು ತಿಳಿದುಬಂದಿದೆ. ಪಾಕಿಸ್ತಾನದ ಮಿಲಿಟರಿ ವರದಿಯ ಪ್ರಕಾರ, ರಾವಲ್ಪಿಂಡಿಯಲ್ಲಿರುವ ನೂರ್ ಖಾನ್ ವಾಯುನೆಲೆ ಸೇರಿದಂತೆ ಮೂರು ವಾಯುಪಡೆಯ ನೆಲೆಗಳಲ್ಲಿ ಸ್ಫೋಟಗಳು(india-pakistan war) ಸಂಭವಿಸಿವೆ ಎನ್ನಲಾಗಿದೆ.

ಶನಿವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ‘ಪಾಕ್‌ನ ನೂರ್ ಖಾನ್ (ಚಕ್ಲಾಲಾ, ರಾವಲ್ಪಿಂಡಿ), ಮುರಿಯ್ (ಚಕ್ವಾಲ್) ಮತ್ತು ರಫೀಕಿ (ಜಾಂಗ್ ಜಿಲ್ಲೆಯ ಶೋರ್ಕೋಟ್) ವಾಯುನೆಲೆಗಳನ್ನು ಗುರಿಯಾಗಿಸಿ ಭಾರತ ದಾಳಿ ನಡೆಸಿದೆ ಎಂದಿದ್ದಾರೆ.

ಪಾಕಿಸ್ತಾನ ಶುಕ್ರವಾರ ರಾತ್ರಿ ವಾಯುದಾಳಿಯ ತೀವ್ರತೆಯನ್ನು ಹೆಚ್ಚಿಸಿದ ನಂತರ ಭಾರತ ಇಂದು ಬೆಳಿಗ್ಗೆ ಶ್ರೀನಗರದಿಂದ ಐದು ಕ್ಷಿಪಣಿಗಳನ್ನು ಹಾರಿಸಿತು. ಭಾರತದ ನಾಗರಿಕರು ಮತ್ತು ಸೇನಾ ನೆಲೆಯನ್ನು ಗುರಿಯಾಗಿಸಿ ಪಾಕಿಸ್ತಾನ ನಡೆಸುತ್ತಿದ್ದ ನಿರಂತರ ದಾಳಿಗೆ ಭಾರತ ಇದೀಗ ತಕ್ಕ ಪ್ರತ್ಯುತ್ತರ ನೀಡಿದೆ. ಶುಕ್ರವಾರ ಜಮ್ಮು ಮತ್ತು ಕಾಶ್ಮೀರದಿಂದ ಗುಜರಾತ್‌ವರೆಗೆ ಭಾರತದ 26 ಸ್ಥಳಗಳಲ್ಲಿ ಪಾಕಿಸ್ತಾನ ಹೊಸ ಡ್ರೋನ್ ದಾಳಿಯನ್ನು ನಡೆಸಿದ ನಂತರ ಕೌಂಟರ್‌ ಅಟ್ಯಾಕ್‌ ಶುರು ಮಾಡಿದ ಭಾರತ, ಇಸ್ಲಾಮಾಬಾದ್, ಲಾಹೋರ್, ರಾವಲ್ಪಿಂಡಿ ಮತ್ತು ಶೇಖುಪುರ ನಗರಗಳ ಮೇಲೆ ಕ್ಷಿಪಣಿ ಮತ್ತು ಡ್ರೋನ್‌ ದಾಳಿ ನಡೆಸಿದೆ.

ಇದನ್ನೂ ಓದಿ Operation Sindoor: ಪಾಕಿಸ್ತಾನದ ಎರಡು ಯುದ್ಧವಿಮಾನ ಹೊಡೆದುರುಳಿಸಿದ ಭಾರತ

ಶನಿವಾರ ಬೆಳಗ್ಗೆ ಕೂಡ ಪಾಕಿಸ್ತಾನ ಜಮ್ಮುವಿನ ಮೇಲೆ ದಾಳಿ ಮುಂದುವರಿಸಿದೆ. ಭಾರತ ಕೂಡ ಪ್ರತಿದಾಳಿ ನಡೆಸುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಪಾಕ್‌ ಯುದ್ಧಕ್ಕೆ ಸಿದ್ಧವಾಗಿ ಈ ದಾಳಿಗಳನ್ನು ನಡೆಸುತ್ತಿರುವಂತೆ ಕಾಣುತ್ತಿದೆ.