ನವದೆಹಲಿ: ಕುತಂತ್ರಿ ಪಾಕಿಸ್ತಾನ (Pakistan) ಕದನ ವಿರಾಮ ಉಲ್ಲಂಘಿಸಿ (Ceasefire Violations) ಭಾನುವಾರ ರಾತ್ರಿ ಕೂಡ ಭಾರತದ (India) ಮೇಲೆ ದಾಳಿ ಮಾಡಿದೆ ಎಂದು ತಿಳಿದುಬಂದಿದೆ. ರಾಜಸ್ಥಾನದ ಬಾರ್ಮರ್‌ನಲ್ಲಿ ಭಾನುವಾರ ಮತ್ತೆ ಡ್ರೋನ್ ಚಟುವಟಿಕೆ ಕಂಡುಬಂದಿದ್ದು, ಜಿಲ್ಲಾಡಳಿತವು ಸಂಪೂರ್ಣ ವಿದ್ಯುತ್ ಕಡಿತಗೊಳಿಸಲು ಆದೇಶಿಸಿದೆ. ಪಾಕಿಸ್ತಾನ ಶನಿವಾರ ಕದನ ವಿರಾಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜಸ್ಥಾನದ ಜೈಸಲ್ಮೇರ್, ಬಾರ್ಮರ್ ಮತ್ತು ಇತರ ಗಡಿ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗಿತ್ತು.