ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Sindoor: LoC ಬಳಿಯ ಭಯೋತ್ಪಾದಕ ನೆಲೆ ಧ್ವಂಸ ಮಾಡಿದ ಭಾರತೀಯ ಸೇನೆ, ವಿಡಿಯೋ ನೋಡಿ

ಭಾರತ ಹಾಗೂ ಪಾಕಿಸ್ತಾನದ ನಡುವೆ ಸಂಘರ್ಷ ಏರ್ಪಟ್ಟಿದೆ. ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರ ಹಾಗೂ ಪಂಜಾಬ್‌ನ ಹಲವು ನಗರಗಳ ಮೇಲೆ ಡ್ರೋನ್ ದಾಳಿಗೆ ಯತ್ನಿಸಿದ್ದಕ್ಕೆ ಪ್ರತಿಯಾಗಿ, ಮೇ 8 ಮತ್ತು 9 ರ ಮಧ್ಯರಾತ್ರಿ ಭಾರತೀಯ ಸೇನೆಯು ನಿಯಂತ್ರಣ ರೇಖೆ ಬಳಿ ಇರುವ ಭಯೋತ್ಪಾದಕ ನೆಲೆಗಳ ಮೇಲೆ ಸಂಘಟಿತ ದಾಳಿ ನಡೆಸಿ ನಾಶಪಡಿಸಿದೆ ಎಂದು ಸೇನೆ ತಿಳಿಸಿದೆ.

LoC ಬಳಿಯ ಭಯೋತ್ಪಾದಕ ನೆಲೆ ಧ್ವಂಸ ಮಾಡಿದ ಭಾರತೀಯ ಸೇನೆ

Profile Vishakha Bhat May 10, 2025 4:21 PM

ನವದೆಹಲಿ: ಭಾರತ ಹಾಗೂ ಪಾಕಿಸ್ತಾನದ ನಡುವೆ ಸಂಘರ್ಷ (Operation Sindoor) ಏರ್ಪಟ್ಟಿದೆ. ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರ ಹಾಗೂ ಪಂಜಾಬ್‌ನ ಹಲವು ನಗರಗಳ ಮೇಲೆ ಡ್ರೋನ್ ದಾಳಿಗೆ ಯತ್ನಿಸಿದ್ದಕ್ಕೆ ಪ್ರತಿಯಾಗಿ, ಮೇ 8 ಮತ್ತು 9 ರ ಮಧ್ಯರಾತ್ರಿ ಭಾರತೀಯ ಸೇನೆಯು ನಿಯಂತ್ರಣ ರೇಖೆ ಬಳಿ ಇರುವ ಭಯೋತ್ಪಾದಕ ನೆಲೆಗಳ ಮೇಲೆ ಸಂಘಟಿತ ದಾಳಿ ನಡೆಸಿ ನಾಶಪಡಿಸಿದೆ ಎಂದು ಸೇನೆ ತಿಳಿಸಿದೆ. ಸಹಾಯಕ ಸಾರ್ವಜನಿಕ ಮಾಹಿತಿ ನಿರ್ದೇಶನಾಲಯ (ADG PI) ಎಕ್ಸ್‌ನಲ್ಲಿ ಈ ಕಾರ್ಯಾಚರಣೆಯು ಭಯೋತ್ಪಾದಕ ನೆಲೆಗಳನ್ನು ನಾಶಮಾಡುವ ಉದ್ದೇಶ ಹೊಂದಿದ್ದು, ಭಯೋತ್ಪಾದಕರ ಮೂಲಸೌಕರ್ಯ ಮತ್ತು ಸಾಮರ್ಥ್ಯಗಳಿಗೆ ಗಮನಾರ್ಹ ಹೊಡೆತ ನೀಡಿದೆ ಎಂದು ಹೇಳಿದೆ. ಭಯೋತ್ಪಾದಕ ನೆಲೆಯನ್ನು ವಿಡಿಯೋ ಧ್ವಂಸಗೊಳಿಸಿದ ವಿಡಿಯೋವನ್ನು ಹಂಚಿಕೊಂಡಿದೆ.

'ಆಪರೇಷನ್ ಸಿಂದೂರ್' ಅಡಿಯಲ್ಲಿ ಭಾರತೀಯ ಸಶಸ್ತ್ರ ಪಡೆಗಳು ಈ ದಾಳಿ ನಡೆಸಿದ್ದು, ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಲಾಗಿದೆ ಎಂದು ADG PI ತಿಳಿಸಿದೆ. "ಆಪರೇಷನ್ ಸಿಂದೂರ್. ಭಾರತೀಯ ಸೇನೆ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದೆ," ಎಂದು ADGPI ಎಕ್ಸ್‌ ಪೋಸ್ಟ್‌ನಲ್ಲಿ ಘೋಷಿಸಿದೆ.



LOC ಬಳಿ ನಿರಂತವಾಗಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ. ಇದೀಗ ಡ್ರೋನ್‌ ಮೂಲಕ ದಾಳಿ ನಡೆಸುತ್ತಿದ್ದು, ಪಂಜಾಬ್‌, ರಾಜಸ್ಥಾನ ಹಾಗೂ ಗುಜರಾತಿನ ಭಾಗದಲ್ಲಿ ಡ್ರೋನ್‌ಗಳ ದಾಳಿ ಆಗಿದೆ. ಆದರೆ ಭಾರತದ S-400 (ಸುದರ್ಶನ ) ಅವುಗಳನ್ನು ತಡೆಹಿಡಿಯುವಲ್ಲಿ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಅಮೃತ ಸರದ ಬಳಿ ಡ್ರೋನ್‌ ಹಾಗೂ ಕ್ಷಿಪಣಿಗಳ ಅವಶೇಷಗಳು ಪತ್ತೆಯಾಗಿವೆ. ಶ್ರೀನಗರದ ಪ್ರಮುಖ ಪ್ರವಾಸಿ ಆಕರ್ಷಣೆಯಾದ ದಾಲ್ ಸರೋವರದ ಆಳಕ್ಕೆ ಕ್ಷಿಪಣಿಯಂತಹ ವಸ್ತುವೊಂದು ಬಿದ್ದಿದ್ದು, ಶನಿವಾರ ಬೆಳಿಗ್ಗೆ ನಗರವನ್ನು ಬೆಚ್ಚಿಬೀಳಿಸಿದ ದೊಡ್ಡ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನೂ ಓದಿ: Operation Sindoor: ಪಾಕಿಸ್ತಾನದ ಡ್ರೋನ್‌ಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ; ವಿಡಿಯೋ ನೋಡಿ

ಶನಿವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ‘ಪಾಕ್‌ನ ನೂರ್ ಖಾನ್ (ಚಕ್ಲಾಲಾ, ರಾವಲ್ಪಿಂಡಿ), ಮುರಿಯ್ (ಚಕ್ವಾಲ್) ಮತ್ತು ರಫೀಕಿ (ಜಾಂಗ್ ಜಿಲ್ಲೆಯ ಶೋರ್ಕೋಟ್) ವಾಯುನೆಲೆಗಳನ್ನು ಗುರಿಯಾಗಿಸಿ ಭಾರತ ದಾಳಿ ನಡೆಸಿದೆ ಎಂದು ಖಚಿತ ಪಡಿಸಿದ್ದಾರೆ.