Taliban foreign minister: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಆದ ಕೆಲವೇ ದಿನಗಳಲ್ಲಿ ತಾಲಿಬಾನ್ ವಿದೇಶಾಂಗ ಸಚಿವರನ್ನು ಭೇಟಿಯಾದ ಭಾರತೀಯ ರಾಯಭಾರಿ!
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಏರ್ಪಟ್ಟಿದೆ. ಇದರ ನಡುವೆ ಅಫ್ಘಾನಿಸ್ತಾನದೊಂದಿಗಿನ ಸಂಬಂಧವನ್ನು ಬಿಗಿಗೊಳಿಸಲು ಭಾರತೀಯ ರಾಜತಾಂತ್ರಿಕರು ಕಾಬೂಲ್‌ನಲ್ಲಿ ತಾಲಿಬಾನ್‌ನ ಹಂಗಾಮಿ ವಿದೇಶಾಂಗ ಸಚಿವ ಅಮೀರ್ ಖಾನ್ ಮುತಾಕಿ ಅವರನ್ನು ಭೇಟಿ ಮಾಡಿದ್ದಾರೆ.


ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಏರ್ಪಟ್ಟಿದೆ. ಇದರ ನಡುವೆ ಅಫ್ಘಾನಿಸ್ತಾನದೊಂದಿಗಿನ ಸಂಬಂಧವನ್ನು ಬಿಗಿಗೊಳಿಸಲು ಭಾರತೀಯ ರಾಜತಾಂತ್ರಿಕರು ಕಾಬೂಲ್‌ನಲ್ಲಿ ತಾಲಿಬಾನ್‌ನ ಹಂಗಾಮಿ ವಿದೇಶಾಂಗ ಸಚಿವ ಅಮೀರ್ ಖಾನ್ ಮುತಾಕಿ (Taliban foreign minister) ಅವರನ್ನು ಭೇಟಿ ಮಾಡಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ ರಾಜಕೀಯ ಸಂಬಂಧಗಳು ಮತ್ತು ಪ್ರಾದೇಶಿಕ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆ. ಇತ್ತೀಚೆಗೆ ವಿದೇಶಾಂಗ ಸಚಿವಾಲಯದ ಪಾಕಿಸ್ತಾನ-ಅಫ್ಘಾನಿಸ್ತಾನ-ಇರಾನ್ ವಿಭಾಗದ ಜಂಟಿ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಎಂ. ಆನಂದ್ ಪ್ರಕಾಶ್ ಅವರು ಭಾನುವಾರ ಅಫ್ಘಾನ್ ರಾಜಧಾನಿಯಲ್ಲಿ ಮುತಾಕಿ ಅವರನ್ನು ಭೇಟಿಯಾದರು.
ತಾಲಿಬಾನ್ ವಿದೇಶಾಂಗ ಸಚಿವಾಲಯದ ಉಪ ವಕ್ತಾರ ಹಫೀಜ್ ಜಿಯಾ ಅಹ್ಮದ್ ಸಾಮಾಜಿಕ ಮಾಧ್ಯಮದಲ್ಲಿ "ಇತ್ತೀಚಿನ ಪ್ರಾದೇಶಿಕ ರಾಜಕೀಯ ಬೆಳವಣಿಗೆಗಳ" ಬಗ್ಗೆ ಎರಡೂ ಕಡೆಯವರು ಚರ್ಚಿಸಿದ್ದಾರೆ ಎಂದು ಬರೆದುಕೊಂಡಿದ್ದು, ವಿಷಯ ಏನೆಂಬುದನ್ನು ಬಹಿರಂಗಪಡಿಸಿಲ್ಲ. ಸಭೆಯಲ್ಲಿ ಚರ್ಚಿಸಲಾದ ಇತರ ವಿಷಯಗಳು ದ್ವಿಪಕ್ಷೀಯ ರಾಜಕೀಯ ಸಂಬಂಧಗಳು, ವ್ಯಾಪಾರ ಮತ್ತು ಸಾರಿಗೆ. ಮುತಾಕಿ ರಾಜತಾಂತ್ರಿಕ ಮತ್ತು ಆರ್ಥಿಕ ಸಂಬಂಧಗಳ ಅಭಿವೃದ್ಧಿಗೆ ಒತ್ತು ನೀಡಿದರು ಮತ್ತು ಅಫ್ಘಾನಿಸ್ತಾನದಲ್ಲಿನ ಉತ್ತಮ ಹೂಡಿಕೆ ಅವಕಾಶಗಳನ್ನು ಬಳಸಿಕೊಳ್ಳಲು ಭಾರತೀಯ ಹೂಡಿಕೆದಾರರನ್ನು ಆಹ್ವಾನಿಸಿದರು ಎಂದು ಅಹ್ಮದ್ ಹೇಳಿದರು.
ಅಫ್ಘಾನಿಸ್ತಾನ ಮತ್ತು ಭಾರತದ ನಡುವಿನ ಜನರ ಸಂಚಾರವನ್ನು ಸುಗಮಗೊಳಿಸಬೇಕು ಮತ್ತು ಅಫ್ಘಾನ್ ರೋಗಿಗಳು, ವಿದ್ಯಾರ್ಥಿಗಳು ಮತ್ತು ಉದ್ಯಮಿಗಳಿಗೆ ವೀಸಾ ನೀಡುವಿಕೆಯನ್ನು "ಸಾಮಾನ್ಯ ಸ್ಥಿತಿಗೆ ತರಬೇಕು" ಎಂದು ಮುತ್ತಕಿ ಹೇಳಿದರು. ಅಫ್ಘಾನಿಸ್ತಾನದೊಂದಿಗಿನ ಸಂಬಂಧಗಳು ಭಾರತಕ್ಕೆ ಮುಖ್ಯವಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಂಬಂಧಗಳನ್ನು ವಿಸ್ತರಿಸುವ ಆಶಯವನ್ನು ನಾವು ಹೊಂದಿದ್ದೇವೆ ಎಂದು ಅವರು ತಿಳಿಸಿದರು.
ಈ ಸುದ್ದಿಯನ್ನೂ ಓದಿ: Pahalgam Terror Attack: ಬಿಹಾರ ಚುನಾವಣೆಗೋಸ್ಕರ ಪಹಲ್ಗಾಮ್‌ನಲ್ಲಿ ದಾಳಿ; ಮೋದಿ ಕುರಿತು ಟೀಕಿಸಿದ್ದ ಗಾಯಕಿ ಮೇಲೆ ಬಿತ್ತು ದೇಶದ್ರೋಹಿ ಕೇಸ್
ಭಾರತವು ಅಫ್ಘಾನಿಸ್ತಾನದೊಂದಿಗಿನ ಸಹಕಾರವನ್ನು ಮುಂದುವರಿಸುತ್ತದೆ ಮತ್ತು ಕೆಲವು ಮೂಲಸೌಕರ್ಯ ಯೋಜನೆಗಳಲ್ಲಿ ಹೂಡಿಕೆ ಮಾಡಲು ಬಯಸುತ್ತದೆ ಎಂದು ಭಾರತದ ರಾಯಭಾರಿ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ. ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದು, ಇದನ್ನು ತಾಲಿಬಾನ್ ವಿದೇಶಾಂಗ ಸಚಿವಾಲಯ ಖಂಡಿಸಿದೆ ಮತ್ತು ಇಂತಹ ಘಟನೆಗಳು ಪ್ರಾದೇಶಿಕ ಭದ್ರತೆಯ ಮೇಲೆ ಪರಿಣಾಮ ಬೀರುತ್ತವೆ ಎಂದು ಹೇಳಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಪ್ರವಾಸಿಗರ ಮೇಲೆ ಇತ್ತೀಚೆಗೆ ನಡೆದ ದಾಳಿಯನ್ನು ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್‌ನ ವಿದೇಶಾಂಗ ಸಚಿವಾಲಯವು ಸ್ಪಷ್ಟವಾಗಿ ಖಂಡಿಸುತ್ತದೆ ಮತ್ತು ಮೃತರ ಕುಟುಂಬಗಳಿಗೆ ನಮ್ಮ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.